HOME » NEWS » Coronavirus-latest-news » CORONAVIRUS INDIA UPDATES THREE AND HALF LAKH CORONA CASES FOUND IN INDIA IN LAST 24 HOURS DBDEL LG

Coronavirus India Updates: ದೇಶದಲ್ಲಿ ಮತ್ತೆ ಮೂರೂವರೆ ಲಕ್ಷದಷ್ಟು ಕೊರೋನಾ ಪ್ರಕರಣಗಳು ಪತ್ತೆ!

ಮಂಗಳವಾರ 3,48,421 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 3,55,338 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,33,40,938ಕ್ಕೆ ಏರಿಕೆ ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಮಂಗಳವಾರ  4,205 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,54,197ಕ್ಕೆ ಏರಿಕೆ ಆಗಿದೆ.

news18-kannada
Updated:May 12, 2021, 12:03 PM IST
Coronavirus India Updates: ದೇಶದಲ್ಲಿ ಮತ್ತೆ ಮೂರೂವರೆ ಲಕ್ಷದಷ್ಟು ಕೊರೋನಾ ಪ್ರಕರಣಗಳು ಪತ್ತೆ!
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಮೇ 12): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌, ಏಪ್ರಿಲ್ 21ರಿಂದ ದಿನ‌ ಒಂದರಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಹಾಗೂ ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರುವರೆ ಲಕ್ಷದಷ್ಟು ಜನ ಸೋಂಕು ಪೀಡಿತರಾಗುತ್ತಿದ್ದಾರೆ.

ಮಂಗಳವಾರ 3,48,421 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 3,55,338 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,33,40,938ಕ್ಕೆ ಏರಿಕೆ ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಮಂಗಳವಾರ  4,205 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,54,197ಕ್ಕೆ ಏರಿಕೆ ಆಗಿದೆ.

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.

International Nurses Day 2021: ನರ್ಸ್​​ಗಳ ಅವಿರತ ಸೇವೆಗೆ ನಮ್ಮದೊಂದು ಸೆಲ್ಯೂಟ್

ಎರಡನೇ ಅಲೆ ಶುರುವಾದ ಮೇಲೆ ಏಪ್ರಿಲ್ 4ರಂದು 1,03,558, ಏಪ್ರಿಲ್ 5ರಂದು 96,982, ಏಪ್ರಿಲ್ ‌6ರಂದು 1,15,736, ಏಪ್ರಿಲ್ 7ರಂದು 1,26,789, ಏಪ್ರಿಲ್ 8ರಂದು 1,31,968, ಏಪ್ರಿಲ್ 9ರಂದು 1,45,384, ಏಪ್ರಿಲ್ 10ರಂದು 1,52,879, ಏಪ್ರಿಲ್ 11ರಂದು 1,68,912, ಏಪ್ರಿಲ್ 12ರಂದು 1,61,736, ಏಪ್ರಿಲ್ 13ರಂದು 1,84,372, ಏಪ್ರಿಲ್ 14ರಂದು 2,00,739, ಏಪ್ರಿಲ್ 15ರಂದು 2,17,353, ಏಪ್ರಿಲ್ 16ರಂದು 2,34,692, ಏಪ್ರಿಲ್ 17ರಂದು 2,61,500 ಏಪ್ರಿಲ್ 18ರಂದು 2,73,810, ಏಪ್ರಿಲ್ 19ರಂದು 2,59,170, ಏಪ್ರಿಲ್ 20ರಂದು 2,95,041, ಏಪ್ರಿಲ್ 21ರಂದು 3,14,835, ಏಪ್ರಿಲ್ 22ರಂದು 3,32,730, ಏಪ್ರಿಲ್ 23ರಂದು 3,46,786, ಏಪ್ರಿಲ್ 24ರಂದು 3,49,691, ಏಪ್ರಿಲ್ 25ರಂದು 3,52,991, ಏಪ್ರಿಲ್ 26ರಂದು 3,23,144, ಏಪ್ರಿಲ್ 27ರಂದು 3,60,960, ಏಪ್ರಿಲ್ 28ರಂದು 3,23,144, ಏಪ್ರಿಲ್ 29ರಂದು 3,86,452, ಏಪ್ರಿಲ್ 30ರಂದು 4,01,993 ಪ್ರಕರಣಗಳು ಪತ್ತೆಯಾಗಿದ್ದವು.
Youtube Video

ಮೇ 1ರಂದು 3,92,488, ಮೇ 2ರಂದು 3,68,147, ಮೇ 3ರಂದು 3,57,229, ಮೇ 4ರಂದು 3,82,315, ‌ಮೇ 5ರಂದು 4,12,262 ಪ್ರಕರಣಗಳು, ಮೇ 6ರಂದು 4,14,188, ಮೇ 7ರಂದು 4,01,078, ಮೇ 8ರಂದು 4,03,738, ಮೇ 9ರಂದು 3,66,161 ಹಾಗೂ ಮೇ 10ರಂದು 3,29,942 ಪ್ರಕರಣಗಳು ಪತ್ತೆಯಾಗಿದ್ದವು‌. ಮೇ 11ರಂದು 3,48,421 ಪ್ರಕರಣಗಳು ಕಂಡುಬಂದಿವೆ.
Published by: Latha CG
First published: May 12, 2021, 12:03 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories