ಭಾರತದಲ್ಲಿ ಕೊರೋನಾ ಮಹಾಸ್ಫೋಟ; ಮೊದಲ ಬಾರಿಗೆ ಒಂದೇ ದಿನ 26 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ

ಭಾರತದಲ್ಲಿ ಗುರುವಾರ 475 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ  21,604ಕ್ಕೆ ಏರಿಕೆಯಾಗಿದೆ.

news18-kannada
Updated:July 10, 2020, 1:12 PM IST
ಭಾರತದಲ್ಲಿ ಕೊರೋನಾ ಮಹಾಸ್ಫೋಟ; ಮೊದಲ ಬಾರಿಗೆ ಒಂದೇ ದಿನ 26 ಸಾವಿರಕ್ಕೂ ಹೆಚ್ಚು ಕೇಸ್ ಪತ್ತೆ
ಸಾಂದರ್ಭಿಕ ಚಿತ್ರ.
  • Share this:
ನವದೆಹಲಿ: ಕೊರೊನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್ಡೌನ್ ನಿಯಮಗಳನ್ನು ಸಡಿಲಿಸಿ ಅನ್ ಲಾಕ್ 1 ಮತ್ತು 2 ಅನ್ನು ಜಾರಿ ಮಾಡಿದ ಪರಿಣಾಮ ದೇಶದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಮೂರನೇ ಸ್ಥಾನ‌ ತಲುಪಿದೆ. ಇದರ ಮಾರನೇ ದಿನವೇ ದೇಶದ ಕೊರೊನಾ ಪೀಡಿತರ ಸಂಖ್ಯೆ ಏಳು ಲಕ್ಷ ದಾಟಿದೆ. ಈಗ ಎಂಟು ಲಕ್ಷದ ಬಳಿಗೂ ತಲುಪುತ್ತಿದೆ. ಇದೇ ಮೊದಲ ಬಾರಿಗೆ ದೇಶದಲ್ಲಿ 26 ಸಾವಿರಕ್ಕೂ ಹೆಚ್ಚು ಕೇಸುಗಳ ಪತ್ತೆಯಾಗಿವೆ.

ಭಾರತದಲ್ಲಿ ಜುಲೈ 1ರಿಂದ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2ರಿಂದ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಜುಲೈ 3ರಿಂದ 22  ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹಾಗೂ ಜುಲೈ 4ರಿಂದ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ನಡುವೆ ಜುಲೈ 5ರಿಂದ ಮತ್ತೆ ಇಳಿಕೆಯಾಗಿ ಜುಲೈ 7ರವರೆಗೂ (ಮೂರು ದಿನ‌ ಮಾತ್ರ) 22 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಮಾತ್ರ ಕಂಡುಬಂದಿದ್ದವು.‌ ಜುಲೈ 8ರಿಂದ ಮತ್ತೆ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈಗ ಇದೇ ಮೊದಲ ಬಾರಿಗೆ ಜುಲೈ 9ರಿಂದ 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗತೊಡಗಿದ್ದಾವೆ. ಗುರುವಾರ 26,506 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 7,93,802ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಸಿಎಂ ಗೃಹ ಕಚೇರಿಯಲ್ಲಿ ಕೊರೋನಾ ಪತ್ತೆ; ಇಂದಿನಿಂದ ಕೆಲವು ದಿನ ಯಡಿಯೂರಪ್ಪ ಮನೆಯಿಂದಲೇ ಕೆಲಸ

ಇದಲ್ಲದೆ ಗುರುವಾರ 475 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ  21,604ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 4,95,513 ಜನ ಮಾತ್ರ. ದೇಶದಲ್ಲಿ ಇನ್ನೂ 2,76,685 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜೂನ್ 11ರಂದು 10,956, ಜೂನ್ 12ರಂದು 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು 16,922, ಜೂನ್ 25ರಂದು 17,296, ಜೂನ್ 26ರಂದು 18,552, ಜೂನ್ 27ರಂದು 19,906, ಜೂನ್ 28ರಂದು 19,459, ಜೂನ್ 29ರಂದು 18,522, ಜೂನ್ 30ರಂದು 18,653, ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879 ಹಾಗೂ ಜುಲೈ 9ರಂದು 26,506 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: Sushma Chakre
First published: July 10, 2020, 1:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading