HOME » NEWS » Coronavirus-latest-news » CORONAVIRUS INFECTED TO MINISTER K SUDHAKAR FATHER AND HC BALAKRISHNA DAUGHTER RH

ಸಚಿವ ಸುಧಾಕರ್ ತಂದೆ, ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಮಗಳಿಗೆ ಕೊರೋನಾ ಸೋಂಕು

ನನ್ನ ಮಗಳಾದ ಡಾಕ್ಟರ್ ರಚನಾ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೊರೋನಾ (Covid-19) ಪರೀಕ್ಷೆ ಮಾಡಿಸಿದಾಗ, ಪರೀಕ್ಷಾ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ ಎಂದು ಬಾಲಕೃಷ್ಣ ಅವರು ತಿಳಿಸಿದ್ದಾರೆ.

news18-kannada
Updated:June 22, 2020, 9:04 PM IST
ಸಚಿವ ಸುಧಾಕರ್ ತಂದೆ, ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಮಗಳಿಗೆ ಕೊರೋನಾ ಸೋಂಕು
ಸಚಿವ ಡಾ| ಕೆ. ಸುಧಾಕರ್
  • Share this:
ಬೆಂಗಳೂರು; ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ತಂದೆ ಮತ್ತು ಅಡುಗೆ ಕೆಲಸದ ವ್ಯಕ್ತಿಗೆ ಹಾಗೂ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಮಗಳಿಗೆ ಕೊರೋನಾ ಸೋಂಕು ದೃಢಪಟ್ಟಿರುವುದನ್ನು ಸ್ವತಃ ಅವರೇ ಸ್ಪಷ್ಟಪಡಿಸಿದ್ದಾರೆ. 

ಈ ವಿಷಯವಾಗಿ ಇಂದು ಟ್ವೀಟ್ ಮಾಡಿರುವ ಸಚಿವ ಸುಧಾಕರ್ ಅವರು, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ. ನಮ್ಮ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರೂ ಕೂಡ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಎಂದು ತಿಳಿಸಿದ್ದಾರೆ. ಹಾಗೆಯೇ ಸಚಿವರ ಪತ್ನಿ, ಮಕ್ಕಳು ಮತ್ತು ಎಲ್ಲ ಮನೆ ಕೆಲಸದವರನ್ನು ಹೋಂ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ಇದನ್ನು ಓದಿ: ಕೊರೋನಾ ವಾರಿಯರ್ಸ್​ ಮೃತಪಟ್ಟರೆ 30 ಲಕ್ಷ ರೂ ವಿಮೆ : ರಾಜ್ಯ ಸರ್ಕಾರ ಆದೇಶ

ಹಾಗೆಯೇ ವೃತ್ತಿಯಲ್ಲಿ ವೈದ್ಯರಾಗಿರುವ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಮಗಳಿಗೂ ಕೊರೋನಾ ಸೋಂಕು ದೃಢಪಟ್ಟಿರುವುದನ್ನು ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ನನ್ನ ಮಗಳಾದ ಡಾಕ್ಟರ್ ರಚನಾ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೊರೋನಾ (Covid-19) ಪರೀಕ್ಷೆ ಮಾಡಿಸಿದಾಗ, ಪರೀಕ್ಷಾ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

First published: June 22, 2020, 9:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories