ಕೊರೋನಾದಿಂದ ಅಮೆರಿಕದಲ್ಲಿ 24 ಗಂಟೆಯಲ್ಲಿ 1,480 ಸಾವು!; ವಿಶ್ವಾದ್ಯಂತ ಸಾವಿನ ಸಂಖ್ಯೆ 59,160ಕ್ಕೆ ಏರಿಕೆ

ಅಮೆರಿಕದಲ್ಲಿ ಒಂದೇ ದಿನ ಸುಮಾರು 1,500 ಜನ ಕೊರೋನಾದಿಂದ ಸಾವನ್ನಪ್ಪಿರುವುದರಿಂದ ವಿಶ್ವದ ಕೊರೋನಾ ಸಾವಿನ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ವಿಶ್ವಾದ್ಯಂತ 10,98,434 ಕೊರೋನಾ ಕೇಸುಗಳು ಪತ್ತೆಯಾಗಿವೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ (ಏ. 4): ವಿಶ್ವದ ದೊಡ್ಡಣ್ಣ ಎಂದೇ ಕರೆಯಲಾಗುವ ಅಮೆರಿಕದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೋನಾದಿಂದ ಅತಿಹೆಚ್ಚು ಜನ ಸಾವನ್ನಪ್ಪುತ್ತಿರುವ ದೇಶಗಳಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಗುರುವಾರದಿಂದ ಶುಕ್ರವಾರದೊಳಗೆ ಅಂದರೆ ಕೇವಲ 24 ಗಂಟೆಯಲ್ಲಿ ಅಮೆರಿಕದಲ್ಲಿ 1,480 ಜನ ಕೊರೋನಾದಿಂದ ಸಾವನ್ನಪ್ಪಿದ್ದಾರೆ!. ಈ ಮೂಲಕ ಅಮೆರಿಕದಲ್ಲಿ ಸಾವಿನ ಸಂಖ್ಯೆ ದಾಖಲೆ ನಿರ್ಮಿಸಿದೆ.

ಅಮೆರಿಕದಲ್ಲಿ ಒಂದೇ ದಿನ ಸುಮಾರು 1,500 ಜನ ಕೊರೋನಾದಿಂದ ಸಾವನ್ನಪ್ಪಿರುವುದರಿಂದ ವಿಶ್ವದ ಕೊರೋನಾ ಸಾವಿನ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ವಿಶ್ವಾದ್ಯಂತ 10,98,434 ಕೊರೋನಾ ಕೇಸುಗಳು ಪತ್ತೆಯಾಗಿವೆ. ಇದುವರೆಗೂ ಜಗತ್ತಿನಾದ್ಯಂತ 59,160 ಜನ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಅದರಲ್ಲಿ ಅಮೆರಿಕದ ಸಾವಿನ ಸಂಖ್ಯೆಯೇ ಹೆಚ್ಚು. ಅಮೆರಿಕದಲ್ಲಿ ಇದುವರೆಗೂ 2,77,161 ಕೊರೋನಾ ಕೇಸುಗಳು ಪತ್ತೆಯಾಗಿವೆ. ಅದರಲ್ಲಿ 7,392 ಜನರು ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ 1,19,827, ಸ್ಪೇನ್​ನಲ್ಲಿ 1,19,199, ಜರ್ಮನಿಯಲ್ಲಿ 91,159, ಚೀನಾದಲ್ಲಿ 81,639 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಕೊರೋನಾಗೆ ವೃದ್ಧ ಬಲಿ; ರಾಜ್ಯದಲ್ಲಿ 4ಕ್ಕೇರಿದ ಸಾವಿನ ಸಂಖ್ಯೆ

ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,567ಕ್ಕೆ ಏರಿಕೆಯಾಗಿದೆ. ಇದುವರೆಗೂ 63 ಜನ ಸಾವನ್ನಪ್ಪಿದ್ದಾರೆ. ಬಾಗಲಕೋಟೆಯಲ್ಲಿ ವೃದ್ಧರೊಬ್ಬರು ಕೊರೋನಾಗೆ ಬಲಿಯಾಗುವ ಮೂಲಕ ಕರ್ನಾಟಕದಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ 128 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

 
First published: