ಕೊರೋನಾದಿಂದ ಮೃತಪಟ್ಟ ಬಾಗಲಕೋಟೆಯ ವೃದ್ಧನ ಊರಿಗೆ ಪ್ರವೇಶ ನಿಷೇಧ

ಇಲ್ಲಿಗೆ ವಾರದಲ್ಲಿ ಎರಡು ದಿನ ಅಂದರೆ ಸೋಮವಾರ, ಗುರುವಾರ ಬೇಡಿಕೆಯನ್ವಯ ಹಣ್ಣು, ತರಕಾರಿ, ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬಾಗಲಕೋಟೆ (ಏ.9): ಬಾಗಲಕೋಟೆಯಲ್ಲಿ ಕೊರೋನಾ ಸೋಂಕಿನಿಂದಾಗಿ ವೃದ್ಧರೊಬ್ಬರು ಮೃತಪಟ್ಟ ನಂತರ ಆತನ ಕುಟುಂಬಸ್ಥರು ಹಾಗೂ ಪಕ್ಕದ ಮನೆಯ ಮಹಿಳೆಗೂ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆತ ವಾಸವಾಗಿದ್ದ ಪ್ರದೇಶಕ್ಕೆ ಬೇರೆಯವರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.

  ಬಾಗಲಕೋಟೆಯ ಮೃತ ವೃದ್ಧನ ಮನೆಯ ಪಕ್ಕದವರಿಗೂ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆತನ ಊರನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಈ ನಿರ್ಬಂಧಿತ ಪ್ರದೇಶದಲ್ಲಿ ವಾರದಲ್ಲಿ ಎರಡು ದಿನ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗುವುದು. ಬಾಗಲಕೋಟೆಯ ವಾರ್ಡ್ ನಂಬರ್-7 ಹಾಗೂ ವಾರ್ಡ್ ನಂಬರ್ 14 ಪ್ರದೇಶವನ್ನು ಕಂಟೇನ್ಮೆಂಟ್ ಝೋನ್, ಬಫರ್ ಝೋನ್ ಎಂದು ಘೋಷಣೆ ಮಾಡಲಾಗಿದೆ.

  ಇದನ್ನೂ ಓದಿ: ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಲಾಕ್‌ಡೌನ್‌ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಚರ್ಚೆ

  ನಿರ್ಬಂಧಿತ ಪ್ರದೇಶದಲ್ಲಿ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್, ಸ್ವಚ್ಛತಾ ಕಾರ್ಯ ನಡೆಸಲಾಗಿದೆ. ಈ ಪ್ರದೇಶದಲ್ಲಿರುವ ಮನೆಯಿಂದ ಯಾರೂ ಹೊರಬಾರದಂತೆ ಜಿಲ್ಲಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇಲ್ಲಿಗೆ ವಾರದಲ್ಲಿ ಎರಡು ದಿನ ಅಂದರೆ ಸೋಮವಾರ, ಗುರುವಾರ ಬೇಡಿಕೆಯನ್ವಯ ಹಣ್ಣು, ತರಕಾರಿ, ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗುತ್ತದೆ.

  ಜಿಲ್ಲಾಡಳಿತದಿಂದ ನಿರ್ಬಂಧಿತ ಪ್ರದೇಶದಲ್ಲಿ ಅಗತ್ಯ ವಸ್ತು ಪೂರೈಕೆಗೆ ಮೂವರಿಗೆ ಮಾತ್ರ ಅನುಮತಿ ನೀಡಲಾಗಿದೆ. ಇಲ್ಲಿನ ಮನೆಗಳಿಗೆ ಸಾಮಾಜಿಕ ಅಂತರ, ಸುರಕ್ಷಿತ ಕ್ರಮದೊಂದಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತದೆ. ಪೂರೈಕೆ ಮಾಡಿದ ತಕ್ಷಣ ಬಿಲ್ ಪಾವತಿಸಲು ಜಿಲ್ಲಾಧಿಕಾರಿ ರಾಜೇಂದ್ರ ಆದೇಶ ನೀಡಿದ್ದಾರೆ.

  ಇದನ್ನೂ ಓದಿ: ಏ.14ರ ನಂತರ ಲಾಕ್​​ಡೌನ್​​​ ಮುಂದುವರಿಸಿ: ರಾಜ್ಯ ಸರ್ಕಾರಕ್ಕೆ ಟಾಸ್ಕ್​ಪೋರ್ಸ್ ಶಿಫಾರಸು ಮಾಡಿದ ಪ್ರಮುಖ ಅಂಶಗಳು

  (ವರದಿ: ರಾಚಪ್ಪ ಬನ್ನಿದಿನ್ನಿ)
  First published: