HOME » NEWS » Coronavirus-latest-news » CORONAVIRUS LIVE UPDATES AFTER COVID 19 CASES INCREASING IN INDIA AMIT SHAH NIRMALA SITHARAMAN HOLD MEETING TODAY SCT DBDEL

Coronavirus Updates: ಭಾರತದಲ್ಲಿ ಕೊರೋನಾ ಹೆಚ್ಚಳ; ಇಂದು ಅಮಿತ್ ಶಾ, ಹರ್ಷವರ್ಧನ್ ಸೇರಿ ಕೇಂದ್ರ ಸಚಿವರ ಸಭೆ

ಅತಿ ಹೆಚ್ಚು ಕೊರೋನಾ ಪ್ರಕರಣಗಳಿರುವ 11 ರಾಜ್ಯಗಳ ಆರೋಗ್ಯ ಸಚಿವರು ಮತ್ತು ಮುಖ್ಯಮಂತ್ರಿಗಳ ನಡುವೆ ಮಹತ್ವದ ಸಭೆ ನಡೆಸಲಾಗಿತ್ತು. ಈಗ ಇಂದು ಕೇಂದ್ರ ಸರ್ಕಾರದ ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ನಡೆಯಲಿದೆ.

news18-kannada
Updated:April 9, 2021, 10:59 AM IST
Coronavirus Updates: ಭಾರತದಲ್ಲಿ ಕೊರೋನಾ ಹೆಚ್ಚಳ; ಇಂದು ಅಮಿತ್ ಶಾ, ಹರ್ಷವರ್ಧನ್ ಸೇರಿ ಕೇಂದ್ರ ಸಚಿವರ ಸಭೆ
ಅಮಿತ್ ಶಾ.
  • Share this:
ನವದೆಹಲಿ, ಏ. 9: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದೆ. ಈಗ ಪ್ರತಿ ದಿನ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರಲು ಆರಂಭಿಸಿವೆ. ಇದೂ ಅಲ್ಲದೆ ಲಸಿಕೆ ಪಡೆದವರು ಕೂಡ ಕೊರೋನಾ ಪಾಸಿಟಿವ್ ಆಗುತ್ತಿದ್ದಾರೆ. ಇದು ಇನ್ನೊಂದು ಬಗೆಯ ಭಯ ಸೃಷ್ಟಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳಿರುವ 11 ರಾಜ್ಯಗಳ ಆರೋಗ್ಯ ಸಚಿವರು ಮತ್ತು ಮುಖ್ಯಮಂತ್ರಿಗಳ ನಡುವೆ ಮಹತ್ವದ ಸಭೆ ನಡೆಸಲಾಗಿತ್ತು. ಈಗ ಇಂದು ಕೇಂದ್ರ ಸರ್ಕಾರದ ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ನಡೆಯಲಿದೆ.

ದೇಶದಲ್ಲಿ ಕೊರೋನಾ ಕಂಡು ಬಂದ ಮೇಲೆ ಕೇಂದ್ರ ಸರ್ಕಾರ ನಡೆಸುತ್ತಿರುವ ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ಇದಾಗಿದೆ. ಕೊರೋನಾ ಎರಡನೇ ಅಲೆ ಬಂದ ಬಳಿಕ ನಡೆಯುತ್ತಿರುವ ಮೊದಲ ಸಭೆ. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರ ನೇತೃತ್ವದಲ್ಲಿ ಇಂದು ಗ್ರೂಪ್ ಆಫ್ ಮಿನಿಸ್ಟರ್ಸ್ ಸಭೆ ನಡೆಯುತ್ತಿದ್ದು ಈ‌ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಾಣಿಜ್ಯ ಸಚಿವ ಪಿಯೋಷ್ ಗೊಯೇಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿ ಹಿರಿಯ ಸಚಿವರು ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: Sputnik Vaccine: ಭಾರತದಲ್ಲಿ ಶೀಘ್ರವೇ ಸ್ಪುಟ್ನಿಕ್ ಲಸಿಕೆ ಬಳಕೆಗೆ ಅನುಮತಿ ಸಾಧ್ಯತೆ

ಸಭೆಯಲ್ಲಿ ಸದ್ಯ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಕಾಯಿಲೆಯನ್ನು ನಿಯಂತ್ರಣ ಮಾಡುವ ಬಗ್ಗೆ ಮತ್ತು ಅದಕ್ಕೆ ಪೂರಕವಾಗಿ ಹೊಸ ಮಾರ್ಗಸೂಚಿ ಒಂದನ್ನು ತಯಾರಿಸುವ ಬಗ್ಗೆ ಚರ್ಚೆ ‌ನಡೆಸಲಾಗುತ್ತದೆ. ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್ ಅವರು ನೀಡಿರುವ ಸಲಹೆಗಳನ್ನು ಆಧರಿಸಿ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗಸೂಚಿ ತಯಾರಿಸಲಿದ್ದು ಈ ಹಿನ್ನೆಲೆಯಲ್ಲಿ ಇತರೆ ಇಲಾಖೆಗಳ ಅಭಿಪ್ರಾಯವನ್ನು ಸಭೆಯಲ್ಲಿ ಕೇಳಲಾಗುತ್ತದೆ.

ಗುರುವಾರ 1,31,968 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 61,899 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,30,60,542ಕ್ಕೆ ಏರಿಕೆ ಆಗಿದೆ.‌ ಗುರುವಾರ ಒಂದೇ ದಿನ ಕೊರೋನಾಗೆ 780 ಜನರು ಬಲಿ ಆಗಿದ್ದಾರೆ. ಸದ್ಯ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈವರೆಗೆ ಕೊರೋನಾ ರೋಗದಿಂದ ಸತ್ತವರ ಸಂಖ್ಯೆ 1,67,642ಕ್ಕೆ ಏರಿಕೆ ಆಗಿದೆ.

ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಈ‌ ಹಿನ್ನೆಲೆಯಲ್ಲಿ ಈ 11 ರಾಜ್ಯಗಳ ಆರೋಗ್ಯ ಸಚಿವ ಜೊತೆ ಮಂಗಳವಾರ (ಏಪ್ರಿಲ್ 6) ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಭೆ ನಡೆಸಿದ್ದಾರೆ.‌ ನಿನ್ನೆ (ಏಪ್ರಿಲ್  8ರಂದು) ಪ್ರಧಾನ ಮಂತ್ರಿ ನರೇಂದ್ರ ಮೋದಿ 11 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ್ದಾರೆ.
Published by: Sushma Chakre
First published: April 9, 2021, 10:58 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories