HOME » NEWS » Coronavirus-latest-news » CORONAVIRUS LIVE UPDATES COVID 19 CASES INCREASING IN INDIA CORONAVIRUS VACCINATION TODAY SCT DBDEL

Coronavirus Updates: ಭಾರತದಲ್ಲಿ ಕೊರೋನಾ ಹೆಚ್ಚಳ; ಯಾವ ರಾಜ್ಯಗಳಲ್ಲಿ ಏನೇನು ಕ್ರಮ ಕೈಗೊಳ್ಳಲಾಗುತ್ತಿದೆ?

ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ.

news18-kannada
Updated:April 17, 2021, 9:45 AM IST
Coronavirus Updates: ಭಾರತದಲ್ಲಿ ಕೊರೋನಾ ಹೆಚ್ಚಳ; ಯಾವ ರಾಜ್ಯಗಳಲ್ಲಿ ಏನೇನು ಕ್ರಮ ಕೈಗೊಳ್ಳಲಾಗುತ್ತಿದೆ?
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ, ಏ.‌ 17: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಹಾಗಾಗಿ ಈ ರಾಜ್ಯಗಳು ಏನೇನು ಕ್ರಮ ಕೈಗೊಂಡಿವೆ ಎಂಬುದನ್ನು ನೋಡಿ.

ದೇಶದಲ್ಲಿ ಎರಡನೇ ಕೊರೋನಾ ಅಲೆ ಕಂಡುಬಂದ ಬಳಿಕ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಏಪ್ರಿಲ್ 7ರಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ‌ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆ ಆಗುತ್ತಿರುವ ರಾಜ್ಯಗಳು ಆತಂಕಕ್ಕೀಡಾಗಿದ್ದು ಹತ್ತು ಹಲವು ಕ್ರಮ ಕೈಗೊಂಡಿವೆ.

ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ಹಲವು ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಆಗುತ್ತಿದೆ. ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ, ಛತ್ತೀಸ್ಗಢ, ಉತ್ತರ ಪ್ರದೇಶದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ‌ ಆಗುತ್ತಿದೆ. ಛತ್ತೀಸ್ಗಢ ಮತ್ತು ದೆಹಲಿಯಲ್ಲಿ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.

ಮಹಾರಾಷ್ಟ್ರದಲ್ಲಿ ಗುರುವಾರ ರಾತ್ರಿ 7 ಗಂಟೆಯಿಂದಲೇ ಜನತಾ ಕರ್ಪ್ಯೂ ಜಾತಿಯಲ್ಲಿದೆ.‌ ಸೋಮವಾರ ಬೆಳಗ್ಗೆ 7ರವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ. ರಾಜಸ್ಥಾನದಲ್ಲಿ ಶುಕ್ರವಾರ ಸಂಜೆ 6ರಿಂದ ಸೋಮವಾರ ಬೆಳಗ್ಗೆ 7ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ಉತ್ತರ ಪ್ರದೇಶದಲ್ಲಿ ಭಾನುವಾರ ಮಾತ್ರ ಲಾಕ್ಡೌನ್ ಮಾಡಲಾಗುತ್ತದೆ.

ದೆಹಲಿಯಲ್ಲಿ ವಾರಾಂತ್ಯದ ಲಾಕ್ಡೌನ್ ಮಾಡಲಾಗುತ್ತಿದ್ದು ಈ ವೇಳೆ ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಬೇಕಾದರೆ ಆನ್‌ಲೈನ್ ಮೂಲಕ ಪಾಸ್ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಮಹಾರಾಷ್ಟ್ರ ಛತ್ತೀಸ್ಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 11,72,23,509 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ. ಸದ್ಯ ಎಲ್ಲರಿಗೂ ಲಸಿಕೆ ಹಾಕುವ ಬಗ್ಗೆ ಕೂಡ ಚರ್ಚೆ ನಡೆಯುತ್ತಿದೆ.
Published by: Sushma Chakre
First published: April 17, 2021, 9:45 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories