HOME » NEWS » Coronavirus-latest-news » CORONAVIRUS LIVE UPDATES IN A RECORD HIGH OVER 2 LAKH COVID 19 CASES REPORTED IN INDIA IN SINGLE DAY SCT DBDEL

Coronavirus Updates: ಭಾರತದಲ್ಲಿ ಭೀಕರವಾಗುತ್ತಿರುವ ಕೊರೋನಾ ಪರಿಸ್ಥಿತಿ; ಒಂದೇ ದಿನ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

Coronavirus India: ಏಪ್ರಿಲ್ 7ರಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ‌ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸಲು ಆರಂಭಿಸಿವೆ.

news18-kannada
Updated:April 15, 2021, 9:55 AM IST
Coronavirus Updates: ಭಾರತದಲ್ಲಿ ಭೀಕರವಾಗುತ್ತಿರುವ ಕೊರೋನಾ ಪರಿಸ್ಥಿತಿ; ಒಂದೇ ದಿನ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ, ಏ.‌ 15: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕು ಪೀಡಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಏಪ್ರಿಲ್ 7ರಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ‌ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸಲು ಆರಂಭಿಸಿವೆ.

ಬುಧವಾರ 2,00,739 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 93,528 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,40,74,564ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು ದೇಶದಲ್ಲಿ ಈಗ ಸತತವಾಗಿ ಎರಡನೇ ದಿನವು ಕೂಡ ಒಂದೇ ದಿನ ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪಿದ್ದಾರೆ. ಬುಧವಾರ 1,038 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 1,73,123ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 11,44,93,238 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ಏಪ್ರಿಲ್ 11ರಿಂದ ಕೊರೋನಾ ಲಸಿಕೆ ಹಾಕುವ 'ಟಿಕಾ ಉತ್ಸವ'ವನ್ನು ನಡೆಸಲಾಗುತ್ತಿದೆ.

ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು. ಆದರೆ ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಪ್ರಕರಣಗಳು ಪತ್ತೆಯಾಗಿದ್ದವು.

ನಂತರ ಏಪ್ರಿಲ್ 5ರಂದು 96,982, ಏಪ್ರಿಲ್ ‌6ರಂದು 1,15,736, ಏಪ್ರಿಲ್ 7ರಂದು 1,26,789, ಏಪ್ರಿಲ್ 8ರಂದು 1,31,968, ಏಪ್ರಿಲ್ 9ರಂದು 1,45,384, ಏಪ್ರಿಲ್ 10ರಂದು 1,52,879, ಏಪ್ರಿಲ್ 11ರಂದು 1,68,912, ಏಪ್ರಿಲ್ 12ರಂದು 1,61,736 ಪ್ರಕರಣಗಳು ಹಾಗೂ ಏಪ್ರಿಲ್ 13ರಂದು 1,84,372 ಹೊಸ ಪ್ರಕರಣಗಳು ಕಂಡುಬಂದಿದ್ದವು. ಈಗ ಏಪ್ರಿಲ್ 14ರಂದು 2,00,739 ಹೊಸ ಪ್ರಕರಣಗಳು ಕಂಡುಬಂದಿವೆ.
Published by: Sushma Chakre
First published: April 15, 2021, 9:55 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories