Coronavirus Updates: ಭಾರತದಲ್ಲಿ ತಗ್ಗಿದ ಕೊರೋನಾ ಅಬ್ಬರ; ನಿನ್ನೆ 2.63 ಲಕ್ಷ ಪ್ರಕರಣಗಳು ಪತ್ತೆ

Coronavirus Live Updates | ಸೋಮವಾರ 2,63,533 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 4,22,436 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,52,28,996 ಆಗಿದೆ.‌

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
ನವದೆಹಲಿ, ಮೇ 18: ಭಾರತದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರು ಲಕ್ಷಕ್ಕಿಂತಲೂ ಕಡಿಮೆ ಜನ ಸೋಂಕು ಪೀಡಿತರಾಗುತ್ತಿದ್ದಾರೆ.

ಸೋಮವಾರ 2,63,533 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 4,22,436 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,52,28,996 ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಸೋಮವಾರ 4,329 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,78,719ಕ್ಕೆ ಏರಿಕೆ ಆಗಿದೆ.

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿ ಹೆಚ್ಚಾಗಿತ್ತು.

ಎರಡನೇ ಅಲೆ ಶುರುವಾದ ಮೇಲೆ ಮೇ 1ರಂದು 3,92,488, ಮೇ 2ರಂದು 3,68,147, ಮೇ 3ರಂದು 3,57,229, ಮೇ 4ರಂದು 3,82,315, ‌ಮೇ 5ರಂದು 4,12,262 ಪ್ರಕರಣಗಳು, ಮೇ 6ರಂದು 4,14,188, ಮೇ 7ರಂದು 4,01,078, ಮೇ 8ರಂದು 4,03,738, ಮೇ 9ರಂದು 3,66,161, ಮೇ 10ರಂದು 3,29,942, ಮೇ 11ರಂದು 3,48,421, ಮೇ 12ರಂದು 3,62,727, ಮೇ 13ರಂದು 3,43,144,  ಮೇ 14ರಂದು 3,26,098, ಮೇ 15ರಂದು 3,11,170 ಹಾಗೂ ಮೇ 16ರಂದು 2,81,386 ಪ್ರಕರಣಗಳು ಪತ್ತೆಯಾಗಿದ್ದವು. ಮೇ 17ರಂದು 2,63,533 ಪ್ರಕರಣಗಳು ಕಂಡುಬಂದಿವೆ.
Published by:Sushma Chakre
First published: