HOME » NEWS » Coronavirus-latest-news » CORONAVIRUS LIVE UPDATES INDIA REPORTS 96982 NEW COVID19 CASES AND 446 DEATH ON MONDAY SCT DBDEL

Coronavirus Updates: ಭಾರತದಲ್ಲಿ ನಿಲ್ಲದ ಕೊರೋನಾ ಹಾವಳಿ; ನಿನ್ನೆ ಒಂದೇ ದಿನ 96,982 ಸೋಂಕಿತರು!

Coronavirus Updates | ಸೋಮವಾರ 96,982 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,26,86,049ಕ್ಕೆ ಏರಿಕೆ ಆಗಿದೆ.‌

news18-kannada
Updated:April 6, 2021, 10:59 AM IST
Coronavirus Updates: ಭಾರತದಲ್ಲಿ ನಿಲ್ಲದ ಕೊರೋನಾ ಹಾವಳಿ; ನಿನ್ನೆ ಒಂದೇ ದಿನ 96,982 ಸೋಂಕಿತರು!
ಪ್ರಾತಿನಿಧಿಕ ಚಿತ್ರ.
  • Share this:
ನವದೆಹಲಿ, (ಏ.‌ 6): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ನಿನ್ನೆ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದವು.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಸೋಮವಾರ 96,982 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಗುಣ ಆಗಿರುವವರು 50,143 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,26,86,049ಕ್ಕೆ ಏರಿಕೆ ಆಗಿದೆ.‌ ಸೋಮವಾರ ಒಂದೇ ದಿನ ಕೊರೋನಾಗೆ 446 ಜನರು ಸಾವಿಗೀಡಾಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 1,65,547ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 8,31,10,926 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.
ದೇಶದ ಒಟ್ಟು ಕೊರೋನಾ ಸೋಂಕು ಪೀಡಿತರ ಪೈಕಿ ಶೇಕಡಾ 81.42ರಷ್ಟು ಕೇವಲ ಎಂಟು ರಾಜ್ಯಗಳಲ್ಲಿ ಕಂಡುಬರುತ್ತಿದೆ. ಅವು ಯಾವ್ಯಾವು ಎಂದರೆ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ, ಛತ್ತೀಸ್ಗಢ ಮತ್ತು ಪಂಜಾಬ್. ಈ ಪೈಕಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು.

ಇದನ್ನೂ ಓದಿ: ನಾಳೆ ಸಾರಿಗೆ ನೌಕರರ ಮುಷ್ಕರ; ಹೆಚ್ಚುವರಿ ಖಾಸಗಿ ಬಸ್, ಕ್ಯಾಬ್​​ಗಳನ್ನು ರಸ್ತೆಗಿಳಿಸಲು ಚಿಂತನೆ

ದೇಶದಲ್ಲಿ ತೀವ್ರವಾಗಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ಸುಮಾರು ಶೇಕಡಾ 50ರಷ್ಟು ಮಹಾರಾಷ್ಟ್ರ ರಾಜ್ಯ ಒಂದರಲ್ಲೇ ಕಂಡು ಬಂದಿವೆ. ಉದಾಹರಣೆಗೆ ಭಾನುವಾರ ಇಡೀ ದೇಶದಲ್ಲಿ 1,03,844 ಪ್ರಕರಣಗಳು ಪತ್ತೆ ಆಗಿದ್ದರೆ ಮಹಾರಾಷ್ಟ್ರ ಒಂದರಲ್ಲಿ 57,074 ಪ್ರಕರಣಗಳು ಕಂಡು ಬಂದಿದ್ದವು.

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಮಾರ್ಚ್ 28ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು ಏಪ್ರಿಲ್ 15ರ ಮಧ್ಯರಾತ್ರಿವರೆಗೆ ಜಾರಿಯಲ್ಲಿರಲಿವೆ. ಒಂದು ವೇಳೆ ಸರ್ಕಾರದ ಈ ನಿಯಮಗಳನ್ನು ಯಾರಾದರೂ ಮೀರಿದರೆ ಸಾರ್ವಜನಿಕರಿಗೆ ದಂಡ ವಿಧಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದಲ್ಲೂ ಕೊರೋನಾ ಹರಡುವಿಕೆಯ ಆರ್ಭಟ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ 15 ದಿನ ರಾಜ್ಯದಲ್ಲಿ ಯಾವುದೇ ರೀತಿಯ ಸತ್ಯಾಗ್ರಹ ಮತ್ತು ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು ಎಂದು ನಿರ್ಧರಿಸಲಾಗಿದೆ.
Published by: Sushma Chakre
First published: April 6, 2021, 10:59 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories