Coronavirus Updates: ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಇಳಿಮುಖ; ಮುಂದುವರೆದ ಮರಣ ಮೃದಂಗ

ಮಂಗಳವಾರ 2,67,334 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,54,96,330ಕ್ಕೆ ಏರಿಕೆ ಆಗಿದೆ.‌

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ, ಮೇ 19: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರು ಲಕ್ಷಕ್ಕಿಂತಲೂ ಕಡಿಮೆ ಜನ ಸೋಂಕು ಪೀಡಿತರಾಗುತ್ತಿದ್ದಾರೆ. ಆದರೆ ಕೊರೋನಾದಿಂದ ಸಾಯುತ್ತಿರುವವರ ಸಂಖ್ಯೆಯಲ್ಲಿ ಮಾತ್ರ ಇಳಿಮುಖ ಆಗಿಲ್ಲ.

ಮಂಗಳವಾರ 2,67,334 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,54,96,330ಕ್ಕೆ ಏರಿಕೆ ಆಗಿದೆ.‌ ಆದರೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ಮಂಗಳವಾರವಾರವೂ 4,529 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,83,248ಕ್ಕೆ ಏರಿಕೆ ಆಗಿದೆ. ಈವರೆಗೆ 2,19,86,363ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 32,26,719 ಆಕ್ಟಿವ್ ಕೇಸುಗಳಿವೆ.

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.

ಎರಡನೇ ಅಲೆ ಶುರುವಾದ ಮೇಲೆ ಮೇ 1ರಂದು 3,92,488, ಮೇ 2ರಂದು 3,68,147, ಮೇ 3ರಂದು 3,57,229, ಮೇ 4ರಂದು 3,82,315, ‌ಮೇ 5ರಂದು 4,12,262 ಪ್ರಕರಣಗಳು, ಮೇ 6ರಂದು 4,14,188, ಮೇ 7ರಂದು 4,01,078, ಮೇ 8ರಂದು 4,03,738, ಮೇ 9ರಂದು 3,66,161, ಮೇ 10ರಂದು 3,29,942, ಮೇ 11ರಂದು 3,48,421, ಮೇ 12ರಂದು 3,62,727, ಮೇ 13ರಂದು 3,43,144,  ಮೇ 14ರಂದು 3,26,098, ಮೇ 15ರಂದು 3,11,170, ಮೇ 16ರಂದು 2,81,386 ಹಾಗೂ ಮೇ 17ರಂದು 2,63,533 ಪ್ರಕರಣಗಳು ಕಂಡುಬಂದಿದ್ದವು. ಮೇ 18ರಂದು 2,67,334 ಪ್ರಕರಣಗಳು ಪತ್ತೆಯಾಗಿವೆ.
Published by:Sushma Chakre
First published: