ಕೊರೋನಾ ಭೀತಿ: ಬೆಂಗಳೂರಿಗೆ ಇಂದಿನಿಂದ ಅಂತಾರಾಷ್ಟ್ರೀಯ ವಿಮಾನಗಳಿಗೆ ಪ್ರವೇಶ ನಿಷೇಧ?

ರಾಜ್ಯದಲ್ಲಿ ಕೊರೋನಾ ವೈರಸ್​ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮಾ. 19ರಿಂದ ಯಾವುದೇ ಅಂತಾರಾಷ್ಟ್ರೀಯ ವಿಮಾನಗಳು ಬೆಂಗಳೂರಿಗೆ ಬಾರದಂತೆ ನಿರ್ಬಂಧ ವಿಧಿಸಲು ಚಿಂತಿಸಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ

  • Share this:
ಬೆಂಗಳೂರು (ಮಾ. 19): ಕರ್ನಾಟಕದಲ್ಲಿ 14 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 11 ಸೋಂಕಿತರು ವಿದೇಶದಿಂದ ವಾಪಾಸ್ ಬಂದವರೇ ಆಗಿದ್ದಾರೆ. ವಿದೇಶದಿಂದ ಬೆಂಗಳೂರಿಗೆ ಆಗಮಿಸುವವರಿಂದ ಕೊರೋನಾ ವೈರಸ್ ಹರಡುವ ಭೀತಿ ಹೆಚ್ಚಾಗಿರುವುದರಿಂದ ಇಂದಿನಿಂದ ಬೆಂಗಳೂರಿಗೆ ಯಾವುದೇ ದೇಶಗಳಿಂದ ಅಂತಾರಾಷ್ಟ್ರೀಯ ವಿಮಾನಗಳು ಬಾರದಂತೆ ನಿಷೇಧ ಹೇರಲು ಚಿಂತಿಸಲಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವಿಟ್ಟರ್​ನಲ್ಲಿ ಖಚಿತಪಡಿಸಿದ್ದಾರೆ. ಇದರಿಂದಾಗಿ ವಿದೇಶಗಳಲ್ಲಿ ನೆಲೆಸಿರುವ, ವಿದೇಶಗಳಿಗೆ ಪ್ರಯಾಣ ಬೆಳೆಸಿರುವ ಕರ್ನಾಟಕದ ಜನರಿಗೆ ವಾಪಾಸ್​ ಬರುವುದು ಹೇಗೆಂಬ ಆತಂಕ ಶುರುವಾಗಿದೆ. ಈ ಬಗ್ಗೆ ಬುಧವಾರವೇ ಟ್ವೀಟ್ ಮಾಡಿರುವ ಬಿ. ಶ್ರೀರಾಮುಲು, ಸೋಂಕು ಹರಡದಂತೆ ತಡೆಗಟ್ಟಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.ಇದನ್ನೂ ಓದಿ: ಐಸೋಲೇಷನ್​ನಲ್ಲಿರುವವರು ಇನ್ಮುಂದೆ ಸುಲಭವಾಗಿ ತಪ್ಪಿಸಿಕೊಳ್ಳಲಾಗದು; ಕೊರೋನಾ ಶಂಕಿತರ ಕೈಗೆ ಮುದ್ರೆ

ರಾಜ್ಯದಲ್ಲಿ ಕೊರೋನಾ ವೈರಸ್​ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮಾ. 19ರಿಂದ ಯಾವುದೇ ಅಂತಾರಾಷ್ಟ್ರೀಯ ವಿಮಾನಗಳು ಬೆಂಗಳೂರಿಗೆ ಬಾರದಂತೆ ನಿರ್ಬಂಧ ವಿಧಿಸಲು ಚಿಂತಿಸಲಾಗಿದೆ. ಜನರು ಆತಂಕಕ್ಕೊಳಗಾಗದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
First published: