Coronavirus Status: ದೇಶದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ನಿನ್ನೆ 60,975 ಪ್ರಕರಣಗಳು ಪತ್ತೆ

ಸೋಮವಾರ 848 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 58 ಸಾವಿರದ ಗಡಿ‌ ದಾಟಿದ್ದು, 58,390ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 24,04,585 ಜನ  ಮಾತ್ರ. ಇನ್ನೂ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 7,04,348 ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.

news18-kannada
Updated:August 25, 2020, 10:57 AM IST
Coronavirus Status: ದೇಶದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ನಿನ್ನೆ 60,975 ಪ್ರಕರಣಗಳು ಪತ್ತೆ
ಸಾಂದರ್ಭಿಕ ಚಿತ್ರ.
  • Share this:
Coronavirus Status: ನವದೆಹಲಿ (ಆ. 25): ದೇಶದಲ್ಲಿ ಕೊರೋನಾ ಕಾಣಿಸಿಕೊಂಡು ಸುಮಾರು ಏಳು ತಿಂಗಳಾಗುತ್ತಿದೆ. ಈ ನಡುವೆ ಕೊರೋನಾ ಸೋಂಕು ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ ಹೆಚ್ಚಾದಾಗ ಅನ್ ಲಾಕ್ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 31 ಲಕ್ಷ‌ದ ಗಡಿ ದಾಟಿದೆ. ಅಲ್ಲದೆ ದೇಶದಲ್ಲಿ ಆಗಸ್ಟ್ 6 ನಂತರ ಪ್ರತಿ ದಿನ 60 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿ ಅದೇ ಮುಂದುವರೆಯುತ್ತಿದೆ. 

ಆಗಸ್ಟ್‌ 19ರ ನಂತರ ಪ್ರತಿದಿನ ಸುಮಾರು70 ಸಾವಿರ ಪ್ರಕರಣಗಳು ಕಾಣಿಸಿಕೊಳ್ಳಲು ಆರಂಭಿಸಿದೆ. ಆಗಸ್ಟ್ 19ರಂದ 69,652 ಪ್ರಕರಣಗಳು ಹಾಗೂ ಆಗಸ್ಟ್ 20ರಂದು 68,898 ಪ್ರಕರಣಗಳು, ಆಗಸ್ಟ್ 21ರಂದು 69,878 ಪ್ರಕರಣಗಳು ಆಗಸ್ಟ್‌ 22ರಂದು 69,239 ಪ್ರಕರಣಗಳು ಹಾಗೂ ಆಗಸ್ಟ್ 23ರಂದು 61,408 ಪ್ರಕರಣಗಳು ಪತ್ತೆಯಾಗಿದ್ದವು. ಆಗಸ್ಟ್ 24ರಂದು 60,975 ಪ್ರಕರಣಗಳು ವರದಿಯಾಗಿದ್ದು, ದೇಶದ ಕೊರೋನಾ ಪೀಡಿತರ ಸಂಖ್ಯೆ 31,67,324ಕ್ಕೆ ಏರಿಕೆಯಾಗಿದೆ.

ಇದನ್ನು ಓದಿ: annamalai | ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ

ಇದಲ್ಲದೆ ಸೋಮವಾರ 848 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 58 ಸಾವಿರದ ಗಡಿ‌ ದಾಟಿದ್ದು, 58,390ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 24,04,585 ಜನ  ಮಾತ್ರ. ಇನ್ನೂ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 7,04,348 ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜುಲೈ 1ರಂದು 19,148, ಜುಲೈ 2ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506, ಜುಲೈ 10ರಂದು 27,114, ಜುಲೈ 11ರಂದು 28,637, ಜುಲೈ 12ರಂದು 28,701, ಜುಲೈ 13ರಂದು 28,498, ಜುಲೈ 14ರಂದು 29,429, ಜುಲೈ 15ರಂದು 32,695, ಜುಲೈ 16ರಂದು 34,956, ಜುಲೈ 17ರಂದು 34,884, ಜುಲೈ 18ರಂದು 38,902, ಜುಲೈ 19ರಂದು 40,425, ಜುಲೈ 20ರಂದು 37,148, ಜುಲೈ 21ರಂದು 37,724, ಜುಲೈ 22ರಂದು 45,720, ಜುಲೈ 23ರಂದು 49,310, ಜುಲೈ 24ರಂದು 48,916, ಜುಲೈ 25ರಂದು 48,661, ಜುಲೈ 26ರಂದು 49,931, ಜುಲೈ 27ರಂದು 47,704, ಜುಲೈ 28ರಂದು 48,512 ಹಾಗೂ ಜುಲೈ 29ರಂದು 52,123, ಜುಲೈ 30ರಂದು 55,079, ಜುಲೈ 31ರಂದು 57,117, ಆಗಸ್ಟ್ 1ರಂದು 54,736, ಆಗಸ್ಟ್ 2ರಂದು 52,972, ಆಗಸ್ಟ್ 3ರಂದು 52,050, ಆಗಸ್ಟ್ 4ರಂದು 52,509, ಆಗಸ್ಟ್ 5ರಂದು 56,282, ಆಗಸ್ಟ್ 6ರಂದು 62,538, ಆಗಸ್ಟ್ 7ರಂದು 61,537, ಆಗಸ್ಟ್ 8ರಂದು 64,399, ಆಗಸ್ಟ್ 9ರಂದು 62,064, ಆಗಸ್ಟ್ 10ರಂದು  53,601, ಆಗಸ್ಟ್ 11ರಂದು 60,963, ಆಗಸ್ಟ್ 12ರಂದು 66,999, ಆಗಸ್ಟ್ 13ರಂದು 64,553, ಆಗಸ್ಟ್ 14ರಂದು 65,002, ಆಗಸ್ಟ್ 15ರಂದು 63,489, ಆಗಸ್ಟ್ 16ರಂದು 57,982, ಆಗಸ್ಟ್ 17ರಂದು 55,079, ಆಗಸ್ಟ್ 18ರಂದು 64,531, ಆಗಸ್ಟ್ 19ರಂದು 69,652, ಆಗಸ್ಟ್ 20ರಂದು 68,898, ಆಗಸ್ಟ್ 21ರಂದು 69,878, ಆಗಸ್ಟ್ 22ರಂದು 69,239, ಆಗಸ್ಟ್ 23ರಂದು 61,408 ಹಾಗೂ ಆಗಸ್ಟ್‌ 24ರಂದು 60,975 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: HR Ramesh
First published: August 25, 2020, 10:27 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading