HOME » NEWS » Coronavirus-latest-news » CORONAVIRUS UPDATES 81466 NEWS COVID 19 CASES REPORTS IN INDIA CORONAVIRUS VACCINE SCT DBDEL

Coronavirus Updates: ಭಾರತದಲ್ಲಿ ನಿಲ್ಲದ ಕೊರೋನಾ ಹಾವಳಿ; ಒಂದೇ ದಿನ 81,466 ಹೊಸ ಪ್ರಕರಣಗಳು ಪತ್ತೆ

ಗುರುವಾರ 81,466 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 50,356 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,23,03,131ಕ್ಕೆ ಏರಿಕೆ ಆಗಿದೆ.‌

news18-kannada
Updated:April 2, 2021, 10:40 AM IST
Coronavirus Updates: ಭಾರತದಲ್ಲಿ ನಿಲ್ಲದ ಕೊರೋನಾ ಹಾವಳಿ; ಒಂದೇ ದಿನ 81,466 ಹೊಸ ಪ್ರಕರಣಗಳು ಪತ್ತೆ
ಸಾಂದರ್ಭಿಕ ಚಿತ್ರ.
  • Share this:
ನವದೆಹಲಿ, ಏ.‌ 2: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಗುರುವಾರ 81,466 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಗುರುವಾರ 81,466 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 50,356 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,23,03,131ಕ್ಕೆ ಏರಿಕೆ ಆಗಿದೆ.‌ ಗುರುವಾರ ಒಂದೇ ದಿನ ಕೊರೋನಾಗೆ 469 ಜನರು ಸಾವಿಗೀಡಾಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 1,63,396ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 6,87,89,138 ಜನರಿಗೆ ಲಸಿಕೆ ಹಾಕಲಾಗಿದೆ. ಗುರುವಾರದಿಂದ 45 ವರ್ಷದ ಮೇಲಿನ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ. ದೇಶದ ಒಟ್ಟು ಕೊರೋನಾ ಸೋಂಕು ಪೀಡಿತರ ಪೈಕಿ ಶೇಕಡಾ 78.56ರಷ್ಟು ಕೇವಲ ಆರು ರಾಜ್ಯಗಳಲ್ಲಿ ಕಂಡುಬರುತ್ತಿದೆ. ಅವು ಯಾವ್ಯಾವು ಎಂದರೆ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಗುಜರಾತ್, ಮಧ್ಯಪ್ರದೇಶ ಮತ್ತು ಪಂಜಾಬ್. ಈ ಪೈಕಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು.

ಇದನ್ನೂ ಓದಿ: Petrol Price Today: ಬೆಂಗಳೂರು, ಮುಂಬೈ, ಚೆನ್ನೈ ಸೇರಿ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು?

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಮಾರ್ಚ್ 28ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು ಏಪ್ರಿಲ್ 15ರ ಮಧ್ಯರಾತ್ರಿವರೆಗೆ ಜಾರಿಯಲ್ಲಿರಲಿವೆ. ಒಂದು ವೇಳೆ ಸರ್ಕಾರದ ಈ ನಿಯಮಗಳನ್ನು ಯಾರಾದರೂ ಮೀರಿದರೆ ಸಾರ್ವಜನಿಕರಿಗೆ ದಂಡ ವಿಧಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಲಾಗಿದೆ.

ಮಹಾರಾಷ್ಟ್ರ ಬಿಟ್ಟರೆ ಕೊರೋನಾ ವೇಗವಾಗಿ ಹಾಡುತ್ತಿರುವುದು ಕರ್ನಾಟಕದಲ್ಲಿ. ರಾಜಧಾನಿ ಬೆಂಗಳೂರಿನಲ್ಲಂತೂ ಕೊರೋನಾ ಆರ್ಭಟ ಜೋರಾಗಿದ್ದು ಪ್ರತಿ ದಿನ‌ ದಾಖಲಾಗುವ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ 15 ದಿನ ರಾಜ್ಯದಲ್ಲಿ ಯಾವುದೇ ರೀತಿಯ ಸತ್ಯಾಗ್ರಹ ನಡೆಸಲು ಅನುಮತಿ ನೀಡಬಾರದು ಎಂದು ನಿರ್ಧರಿಸಲಾಗಿದೆ.

ಗುಜರಾತಿನಲ್ಲಿ ಕೂಡ ಕೊರೋನಾ ತೀವ್ರವಾಗಿ ಹೆಚ್ಚಾಗುತ್ತಿದ್ದು ಅಲ್ಲಿನ  ಅಹಮದಾಬಾದ್, ಸೂರತ್, ಬರೋಡಾ ಮತ್ತು ರಾಜಕೋಟ್ ಗಳಲ್ಲಿ ವಿಧಿಸಿದ್ದ ರಾತ್ರಿ‌ ಕರ್ಫ್ಯೂ‌ ಅನ್ನು ಏಪ್ರಿಲ್ 15ರವರೆಗೂ ಮುಂದುವರೆಸಲು ನಿರ್ಧರಿಸಲಾಗಿದೆ‌. ಇದೇ ಗುಜರಾತಿನ ಆಸ್ಪತ್ರೆ ಒಂದರಲ್ಲಿ ನವಜಾತ ಅವಳಿ‌ ಶಿಶುಗಳಲ್ಲೂ ಕೊರೋನಾ ಪಾಸಿಟಿವ್ ಕಂಡುಬಂದಿದೆ.
Published by: Sushma Chakre
First published: April 2, 2021, 10:40 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories