HOME » NEWS » Coronavirus-latest-news » CORONAVIRUS UPDATES COVID 19 SECOND WAVE CASES MAY PEAK ON APRIL 15 TO 20 SCIENTISTS ALERT DBDEL SCT

Coronavirus Updates: ಏ.15ರಿಂದ 20ರವರೆಗೆ ಕೊರೋನಾ ಹರಡುವ ಸಾಧ್ಯತೆ ಹೆಚ್ಚು; ವಿಜ್ಞಾನಿಗಳಿಂದ ಎಚ್ಚರಿಕೆ!

ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಇದು ಏಪ್ರಿಲ್ 15ರಿಂದ 20ರವರೆಗೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ‌.

news18-kannada
Updated:April 2, 2021, 8:34 AM IST
Coronavirus Updates: ಏ.15ರಿಂದ 20ರವರೆಗೆ ಕೊರೋನಾ ಹರಡುವ ಸಾಧ್ಯತೆ ಹೆಚ್ಚು; ವಿಜ್ಞಾನಿಗಳಿಂದ ಎಚ್ಚರಿಕೆ!
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ, ಏ.‌ 2: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಇದು ಏಪ್ರಿಲ್ 15ರಿಂದ 20ರವರೆಗೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ‌. ಕೊರೋನಾ ವೈರಸ್ ಹರಡುವಿಕೆ ಬಗ್ಗೆ ಗಣಿತದ ಮಾದರಿಯಲ್ಲಿ ಅಧ್ಯಯನ ನಡೆಸಿರುವ ವಿಜ್ಞಾನಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಅಲ್ಲದೆ ಈ ಅವಧಿಯಲ್ಲಿ ಕಳೆವ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಹರಡಿದಂತೆ ವೈರಸ್ ಶರವೇಗದಲ್ಲಿ ಒಬ್ಬರಿಂದ ಒಬ್ಬರಿಗೆ ತಲುಪಲಿದೆ ಎಂಬ ಕಳವಳವನ್ನೂ ವ್ಯಕ್ತಪಡಿಸಿದ್ದಾರೆ.

ಸದ್ಯ ದೇಶದಲ್ಲಿ ಭಾರೀ ವೇಗವಾಗಿ ಕೊರೋನಾ ಹರಡುತ್ತಿದ್ದು ಬುಧವಾರ 72,330 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 40,382 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,22,21,665ಕ್ಕೆ ಏರಿಕೆ ಆಗಿದೆ.‌ ಸೋಮವಾರ ಒಂದೇ ದಿನ ಕೊರೋನಾಗೆ 459 ಜನರು ಸಾವಿಗೀಡಾಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 1,62,927ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 6,51,17,896 ಜನರಿಗೆ ಲಸಿಕೆ ಹಾಕಲಾಗಿದೆ. ಗುರುವಾರದಿಂದ 45 ವರ್ಷದ ಮೇಲಿನ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.

ಇದನ್ನೂ ಓದಿ: Covid-19 Vaccine: 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ಅಭಿಯಾನ; ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ

ದೇಶದ ಒಟ್ಟು ಕೊರೋನಾ ಸೋಂಕು ಪೀಡಿತರ ಪೈಕಿ ಶೇಕಡಾ 78.56ರಷ್ಟು ಕೇವಲ ಆರು ರಾಜ್ಯಗಳಲ್ಲಿ ಕಂಡುಬರುತ್ತಿದೆ. ಅವು ಯಾವ್ಯಾವು ಎಂದರೆ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಗುಜರಾತ್, ಮಧ್ಯಪ್ರದೇಶ ಮತ್ತು ಪಂಜಾಬ್. ಈ ಪೈಕಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು.

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರ್ಕಾರ ಮಾರ್ಚ್ 28ರಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು ಏಪ್ರಿಲ್ 15ರ ಮಧ್ಯರಾತ್ರಿವರೆಗೆ ಜಾರಿಯಲ್ಲಿರಲಿವೆ. ಒಂದು ವೇಳೆ ಸರ್ಕಾರದ ಈ ನಿಯಮಗಳನ್ನು ಯಾರಾದರೂ ಮೀರಿದರೆ ಸಾರ್ವಜನಿಕರಿಗೆ ದಂಡ ವಿಧಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಲಾಗಿದೆ.
ಮಹಾರಾಷ್ಟ್ರ ಬಿಟ್ಟರೆ ಕೊರೋನಾ ವೇಗವಾಗಿ ಹಾಡುತ್ತಿರುವುದು ಕರ್ನಾಟಕದಲ್ಲಿ. ರಾಜಧಾನಿ ಬೆಂಗಳೂರಿನಲ್ಲಂತೂ ಕೊರೋನಾ ಆರ್ಭಟ ಜೋರಾಗಿದ್ದು ಪ್ರತಿ ದಿನ‌ ದಾಖಲಾಗುವ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ 15 ದಿನ ರಾಜ್ಯದಲ್ಲಿ ಯಾವುದೇ ರೀತಿಯ ಸತ್ಯಾಗ್ರಹ ನಡೆಸಲು ಅನುಮತಿ ನೀಡಬಾರದು ಎಂದು ನಿರ್ಧರಿಸಲಾಗಿದೆ.
Published by: Sushma Chakre
First published: April 2, 2021, 8:34 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories