HOME » NEWS » Coronavirus-latest-news » CORONAVIRUS UPDATES INDIA REPORTS 126789 COVID 19 CASES ON WEDNESDAY SCT DBDEL

Coronavirus Updates: ಭಾರತದಲ್ಲಿ ನಿನ್ನೆ ಒಂದೂಕಾಲು ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಪತ್ತೆ

Coronavirus Updates: ಬುಧವಾರ 1,26,789 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 59,258 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,29,28,574ಕ್ಕೆ ಏರಿಕೆ ಆಗಿದೆ.‌

news18-kannada
Updated:April 8, 2021, 10:39 AM IST
Coronavirus Updates: ಭಾರತದಲ್ಲಿ ನಿನ್ನೆ ಒಂದೂಕಾಲು ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಪತ್ತೆ
ಸಾಂದರ್ಭಿಕ ಚಿತ್ರ,
  • Share this:
ನವದೆಹಲಿ, ಏ.‌ 8: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಕಳೆದ ಭಾನುವಾರ (ಏಪ್ರಿಲ್ 4) ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದವು. ಮಂಗಳವಾರ ಮತ್ತೆ ಒಂದೇ ದಿನ ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಈಗ ಬುಧವಾರ ಒಂದೂಕಾಲು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಬುಧವಾರ 1,26,789 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 59,258 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,29,28,574ಕ್ಕೆ ಏರಿಕೆ ಆಗಿದೆ.‌ ಬುಧವಾರ ಒಂದೇ ದಿನ ಕೊರೋನಾಗೆ 685 ಜನರು ಬಲಿ ಆಗಿದ್ದಾರೆ. ಈವರೆಗೆ ಕೊರೋನಾ ರೋಗದಿಂದ ಸತ್ತವರ ಸಂಖ್ಯೆ 1,66,862ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 9,01,98,673 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.
ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು. ಆದರೆ ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಪ್ರಕರಣಗಳು ಪತ್ತೆಯಾಗಿದ್ದವು. ಏಪ್ರಿಲ್ ‌6ರಂದು 1,15,736 ಪ್ರಕರಣಗಳು ಕಂಡು ಬಂದಿದ್ದವು. ಈಗ ಏಪ್ರಿಲ್ 7ರಂದು 1,26,789 ಹೊಸ ಪ್ರಕರಣಗಳು ಪತ್ತೆಯಾಗಿವೆ.

ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಈ‌ ಹಿನ್ನೆಲೆಯಲ್ಲಿ ಈ 11 ರಾಜ್ಯಗಳ ಆರೋಗ್ಯ ಸಚಿವ ಜೊತೆ ಮಂಗಳವಾರ (ಏಪ್ರಿಲ್ 6) ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಭೆ ನಡೆಸಿದ್ದಾರೆ.‌ ಇವತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ.
Published by: Sushma Chakre
First published: April 8, 2021, 10:39 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories