HOME » NEWS » Coronavirus-latest-news » CORONAVIRUS UPDATES MORE THAN 3 LAKHS COVID 19 CASES REPORTED IN INDIA CORONAVIRUS VACCINE DBDEL SCT

Coronavirus Updates: ಭಾರತದಲ್ಲಿ ನಿನ್ನೆ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ!

ಭಾನುವಾರ 3,66,161 ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,53,818 ಜನ ಮಾತ್ರ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,26,62,575ಕ್ಕೆ ಏರಿಕೆ ಆಗಿದೆ.‌

news18-kannada
Updated:May 10, 2021, 11:10 AM IST
Coronavirus Updates: ಭಾರತದಲ್ಲಿ ನಿನ್ನೆ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ!
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ, ಮೇ 10: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು, ಏಪ್ರಿಲ್ 21ರಿಂದ ದಿನ‌ ಒಂದರಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಏಪ್ರಿಲ್ 30ರಿಂದ ದಿನ‌ ಒಂದರಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ತುಸು ಕಡಿಮೆಯಾಗಿ ಮೂರೂವರೆ ಲಕ್ಷಕ್ಕೂ ಹೆಚ್ಚು ಜನ ಸೋಂಕು ಪೀಡಿತರಾಗುತ್ತಿದ್ದಾರೆ.

ಭಾನುವಾರ 3,66,161 ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,53,818 ಜನ ಮಾತ್ರ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,26,62,575ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಭಾನುವಾ 3,754 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,46,116ಕ್ಕೆ ಏರಿಕೆ ಆಗಿದೆ.

ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.
Youtube Video

ಆದರೆ ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಪ್ರಕರಣಗಳು ಪತ್ತೆಯಾಗಿದ್ದವು. ನಂತರ ಏಪ್ರಿಲ್ 5ರಂದು 96,982, ಏಪ್ರಿಲ್ ‌6ರಂದು 1,15,736, ಏಪ್ರಿಲ್ 7ರಂದು 1,26,789, ಏಪ್ರಿಲ್ 8ರಂದು 1,31,968, ಏಪ್ರಿಲ್ 9ರಂದು 1,45,384, ಏಪ್ರಿಲ್ 10ರಂದು 1,52,879, ಏಪ್ರಿಲ್ 11ರಂದು 1,68,912, ಏಪ್ರಿಲ್ 12ರಂದು 1,61,736, ಏಪ್ರಿಲ್ 13ರಂದು 1,84,372, ಏಪ್ರಿಲ್ 14ರಂದು 2,00,739, ಏಪ್ರಿಲ್ 15ರಂದು 2,17,353, ಏಪ್ರಿಲ್ 16ರಂದು 2,34,692, ಏಪ್ರಿಲ್ 17ರಂದು 2,61,500 ಏಪ್ರಿಲ್ 18ರಂದು 2,73,810, ಏಪ್ರಿಲ್ 19ರಂದು 2,59,170, ಏಪ್ರಿಲ್ 20ರಂದು 2,95,041, ಏಪ್ರಿಲ್ 21ರಂದು 3,14,835, ಏಪ್ರಿಲ್ 22ರಂದು 3,32,730, ಏಪ್ರಿಲ್ 23ರಂದು 3,46,786, ಏಪ್ರಿಲ್ 24ರಂದು 3,49,691, ಏಪ್ರಿಲ್ 25ರಂದು 3,52,991, ಏಪ್ರಿಲ್ 26ರಂದು 3,23,144, ಏಪ್ರಿಲ್ 27ರಂದು 3,60,960, ಏಪ್ರಿಲ್ 28ರಂದು 3,23,144, ಏಪ್ರಿಲ್ 29ರಂದು 3,86,452, ಏಪ್ರಿಲ್ 30ರಂದು 4,01,993, ಮೇ 1ರಂದು 3,92,488, ಮೇ 2ರಂದು 3,68,147, ಮೇ 3ರಂದು 3,57,229, ಮೇ 4ರಂದು 3,82,315, ‌ಮೇ 5ರಂದು 4,12,262 ಪ್ರಕರಣಗಳು, ಮೇ 6ರಂದು 4,14,188, ಮೇ 7ರಂದು 4,01,078 ಹಾಗೂ ಮೇ 8ರಂದು 4,03,738 ಪ್ರಕರಣಗಳು ಪತ್ತೆಯಾಗಿದ್ದವು. ಮೇ 9ರಂದು 3,66,161 ಪ್ರಕರಣಗಳು ಕಂಡುಬಂದಿವೆ.
Published by: Sushma Chakre
First published: May 10, 2021, 11:10 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories