HOME » NEWS » Coronavirus-latest-news » CORONAVIRUS UPDATES OVER ONE AND HALF LAKH CORONA CASES FOUND IN INDIA YESTERDAY DBDEL LG

Coronavirus Updates: ದೇಶದಲ್ಲಿ ಒಂದೇ ದಿನ ಒಂದೂವರೆ ಲಕ್ಷದಷ್ಟು ಕೊರೋನಾ ಪ್ರಕರಣಗಳು ಪತ್ತೆ

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 9,80,75,160 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.

news18-kannada
Updated:April 10, 2021, 10:05 AM IST
Coronavirus Updates: ದೇಶದಲ್ಲಿ ಒಂದೇ ದಿನ ಒಂದೂವರೆ ಲಕ್ಷದಷ್ಟು ಕೊರೋನಾ ಪ್ರಕರಣಗಳು ಪತ್ತೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಏ.‌ 10): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಕಳೆದ ಭಾನುವಾರದಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದರು. ಬುಧವಾರದಿಂದ ದಿನ ಒಂದರಲ್ಲಿ ಒಂದೂಕಾಲು ಲಕ್ಷಕ್ಕೂ ‌ಹೆಚ್ಚು‌ ಕೊರೋನಾ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದರು. ಈಗ ದಿನ‌ ಒಂದರಲ್ಲಿ ಸುಮಾರು ಒಂದೂವರೆ ಲಕ್ಷದಷ್ಟು ಪ್ರಕರಣಗಳು ಕಂಡು ಬರುತ್ತಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಶುಕ್ರವಾರ 1,45,384 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 77,567 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,32,05,926ಕ್ಕೆ ಏರಿಕೆ ಆಗಿದೆ.‌ ಶುಕ್ರವಾರ ಒಂದೇ ದಿನ ಕೊರೋನಾಗೆ 794 ಜನರು ಬಲಿ ಆಗಿದ್ದಾರೆ. ಸದ್ಯ ಮಹಾಮಾರಿ ಕೊರೋನಾಗೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈವರೆಗೆ ಕೊರೋನಾ ರೋಗದಿಂದ ಸತ್ತವರ ಸಂಖ್ಯೆ 1,68,436ಕ್ಕೆ ಏರಿಕೆ ಆಗಿದೆ.

ನಿಮಗೆ 18 ವರ್ಷ ತುಂಬಿದೆಯೇ? ಹಾಗಾದರೆ ನೀವು ಈ ಕೆಲಸ ಮಾಡಿದರೆ, ಪ್ರತಿ ತಿಂಗಳು ಸಿಗುತ್ತೆ 5000 ರೂ...!

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 9,80,75,160 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.

ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು. ಆದರೆ ಈಗ ಎರಡನೇ ಅಲೆ ಶುರುವಾದ ಮೇಲೆ ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಪ್ರಕರಣಗಳು ಪತ್ತೆಯಾಗಿದ್ದವು.

ಏಪ್ರಿಲ್ ‌6ರಂದು 1,15,736 ಪ್ರಕರಣಗಳು ಕಂಡು ಬಂದಿದ್ದವು. ಏಪ್ರಿಲ್ 7ರಂದು 1,26,789 ಪ್ರಕರಣಗಳು ಪತ್ತೆಯಾಗಿದ್ದವು‌. ಏಪ್ರಿಲ್ 8ರಂದು 1,31,968 ಪ್ರಕರಣಗಳು ಕಂಡು ಬಂದಿದ್ದವು. ಈಗ ಏಪ್ರಿಲ್ 9ರಂದು 1,45,384 ಹೊಸ ಪ್ರಕರಣಗಳು ಗೋಚರಿಸಿವೆ.ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ.
Published by: Latha CG
First published: April 10, 2021, 10:05 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories