HOME » NEWS » Coronavirus-latest-news » CORONAVIRUS UPDATES TAMILU NADU REPORTS 57 COVID19 CASES YESTERDAY PERSONS PARTICIPATED IN DELHI NIZAMUDDIN EVENT SCT

ತಮಿಳುನಾಡಿನಲ್ಲಿ ಒಂದೇ ದಿನ 57 ಕೊರೋನಾ ಸೋಂಕಿತರು ಪತ್ತೆ; ಇದರಲ್ಲಿ ದೆಹಲಿ ನಿಜಾಮುದ್ದೀನ್​ ಸಭೆಯಲ್ಲಿ ಪಾಲ್ಗೊಂಡವರು 50 ಮಂದಿ

Delhi Nizamuddin Event: ನಿನ್ನೆ ಒಂದೇ ದಿನ ತಮಿಳುನಾಡಿನಲ್ಲಿ 57 ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.

news18-kannada
Updated:April 1, 2020, 7:57 AM IST
ತಮಿಳುನಾಡಿನಲ್ಲಿ ಒಂದೇ ದಿನ 57 ಕೊರೋನಾ ಸೋಂಕಿತರು ಪತ್ತೆ; ಇದರಲ್ಲಿ ದೆಹಲಿ ನಿಜಾಮುದ್ದೀನ್​ ಸಭೆಯಲ್ಲಿ ಪಾಲ್ಗೊಂಡವರು 50 ಮಂದಿ
ನಿಜಾಮುದ್ದೀನ್​ ಸಭೆಯಲ್ಲಿ ಪಾಲ್ಗೊಂಡವರನ್ನು ಬಸ್​ನಲ್ಲಿ ಕ್ವಾರಂಟೈನ್​ಗೆ ಸಾಗಿಸುತ್ತಿರುವ ದೃಶ್ಯ
  • Share this:
ಚೆನ್ನೈ (ಏ.1): ಮಾ. 13ರಿಂದ 15ರವರೆಗೆ ದೆಹಲಿಯ ನಿಜಾಮುದ್ದೀನ್​ನಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ತಮಿಳುನಾಡಿನ 57 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ತಮಿಳುನಾಡು ಸರ್ಕಾರ ಇಂದು ಬೆಳಗ್ಗೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಸಭೆಯಲ್ಲಿ ಭಾಗವಹಿಸಿದ್ದವರಲ್ಲಿ 5 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿರುವುದಾಗಿ ತಿಳಿಸಿದೆ.

ನಿನ್ನೆ ಸಂಜೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ತಮಿಳುನಾಡು ಆರೋಗ್ಯ ಸಚಿವ ಬೀಲಾ ರಾಜೇಶ್, ತಮ್ಮ ರಾಜ್ಯದಿಂದಲೂ ಅನೇಕರು ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ 45 ಜನರಿಗೆ ಕೊರೋನಾ ಸೋಂಕು ತಗುಲಿದೆ. 22 ಜನರು ತಿರುಮಲೈನವರಾಗಿದ್ದು, 18 ಜನ ನಮಕ್ಕಲ್​ನವರು ಎಂದು ಹೇಳಿದ್ದರು. ಇಂದು ಮತ್ತೆ 5 ಸೋಂಕಿತ ಪ್ರಕರಣಗಳು ದಾಖಲಾಗಿವೆ.

ನಿನ್ನೆ ಒಂದೇ ದಿನ ತಮಿಳುನಾಡಿನಲ್ಲಿ 57 ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ತಮಿಳುನಾಡಿನಲ್ಲಿ ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ 15 ದಿನಗಳ ಹಿಂದೆ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 10 ಜನ ಕೊರೋನಾ ವೈರಸ್​ನಿಂದ ಸಾವನ್ನಪ್ಪಿದ್ದಾರೆ. 1,500ಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ 45 ಕನ್ನಡಿಗರು ಕೂಡ ಪಾಲ್ಗೊಂಡಿದ್ದರು ಎಂಬುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಆ ಸಭೆಯಲ್ಲಿ ಭಾಗವಹಿಸಿದವರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ದೆಹಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಮಿಳುನಾಡಿನ 45 ಮಂದಿಯಲ್ಲಿ ಕೊರೋನಾ ಸೋಂಕು ದೃಢ

ಈ ಕಾರ್ಯಕ್ರಮದಲ್ಲಿ 45 ಕನ್ನಡಿಗರು ಕೂಡ ಪಾಲ್ಗೊಂಡಿದ್ದರು ಎಂಬುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಆ ಸಭೆಯಲ್ಲಿ ಭಾಗವಹಿಸಿದ್ದವರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಜೊತೆಗೆ ರಾಜ್ಯದಲ್ಲಿ ತಂಗಿರುವ ತಬ್ಲಿಘೀ ಜಮಾತ್ ನ 50 ವಿದೇಶಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂಬ ಶಂಕೆ ಮೂಡಿದ್ದು, ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ವಿವಿಧ ಭಾಗಗಳಲ್ಲಿ ತಾತ್ಕಾಲಿಕವಾಗಿ ತಂಗಿರುವ ತಬ್ಲಿಘೀ ಜಮಾತ್ ನ 50 ಸದಸ್ಯರನ್ನು ಅವರು ತಂಗಿರುವ ಸ್ಥಳದಲ್ಲೇ ಕ್ವಾರಂಟೇನ್​ನಲ್ಲಿ ಇರಿಸಲಾಗಿದೆ. 19 ಜನರು ಕಿರ್ಗಿಸ್ತಾನ್, 20 ಜನರು ಇಂಡ್ಯೋನೇಷ್ಯಾ, 4 ಜನರು ದಕ್ಷಿಣ ಆಫ್ರಿಕಾ, 3 ಜನರು ಗ್ಯಾಂಬಿಯಾ ಹಾಗೂ ಅಮೇರಿಕ, ಯು.ಕೆ, ಪ್ರಾನ್ಸ್, ಕೀನ್ಯಾದ ತಲಾ ಒಬ್ಬರನ್ನು ಕ್ವಾರಂಟೇನ್ ಗೆ ಒಳಪಡಿಸಲಾಗಿದೆ. ಇದರಲ್ಲಿ ಕೆಲವರು ದೆಹಲಿಯ ನಿಜಾಮುದ್ದೀನ್​ನಲ್ಲಿ ನಡೆದ ಮರ್ಕಾಜ್ ಧಾರ್ಮಿಕ ಸಭೆಗೆ ಹಾಜರಾಗಿರುವ ಶಂಕೆ ವ್ಯಕ್ತವಾಗಿದೆ.

ದೆಹಲಿ ನಿಜಾಮುದ್ದೀನ್ ಪ್ರದೇಶದಲ್ಲಿರುವ ಮರ್ಕಜ್ ಮಸೀದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಪೈಕಿ ತೆಲಂಗಾಣ ಮೂಲದ 6 ಮಂದಿ ಕೊರೋನಾ ವೈರಸ್ ಸೋಂಕಿನಿಂದ ಸಾವನ್ನಪ್ಪಿದ ಬೆನ್ನಲ್ಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇತರರಿಗೂ ಸೋಂಕು ಹರಡಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶಗಳಿಗೆ ಮತ್ತು ರಾಜ್ಯ ಸರ್ಕಾರಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು 2000 ವಿದೇಶಿಗರನ್ನೂ ಕೂಡಲೇ ಹುಡುಕಿ ಗಡಿಪಾರು ಮಾಡುವಂತೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.

ಇದನ್ನೂ ಓದಿ: ದೇಶದಲ್ಲಿ 35 ಮಂದಿಯನ್ನು ಬಲಿ ಪಡೆದ ಕೊರೋನಾ; ಒಂದೇ ದಿನ 140 ಪ್ರಕರಣ ಪತ್ತೆ, 1417 ಮಂದಿಯಲ್ಲಿ ಮಾರಕ ಸೋಂಕುನಿಜಾಮುದ್ದೀನ್ ಮಸೀದಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರ ಪೈಕಿ ಬಹುತೇಕರು ಕೋವಿಡ್ 19 ಸೋಂಕಿನ ಲಕ್ಷಣಗಳು ಕಾಣುತ್ತಿವೆ ಎಂದು ದೂರಿದ್ದು, ಇದೇ ಕಾರಣಕ್ಕೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುವ ಆತಂಕ ಶುರುವಾಗಿದೆ. ಸಭೆಯಲ್ಲಿ ಭಾಗವಹಿಸಿದ 700 ಮಂದಿಯನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಈ ಪೈಕಿ 335 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ.
Youtube Video

 
First published: April 1, 2020, 7:54 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories