Coronavirus India: ಭಾರತದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ; ನಿನ್ನೆ ದೇಶದಲ್ಲಿ 96,424 ಕೇಸ್ ಪತ್ತೆ

Coronavirus India: ದೇಶದ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಅರ್ಧ ಕೋಟಿಯನ್ನು ಮೀರಿ ಮುಂದೆ ಹೋಗಿದೆ. ಪ್ರತಿದಿನ ಸುಮಾರು ಒಂದು ಲಕ್ಷ ಪ್ರಕರಣಗಳು ಪತ್ತೆಯಾಗಲು ಆರಂಭಿಸಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 52 ಲಕ್ಷ ದಾಟಿದೆ. 

news18-kannada
Updated:September 18, 2020, 10:06 AM IST
Coronavirus India: ಭಾರತದಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ; ನಿನ್ನೆ ದೇಶದಲ್ಲಿ 96,424 ಕೇಸ್ ಪತ್ತೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ, (ಸೆ. 18): ದೇಶದಲ್ಲಿ ಕೊರೋನಾ ಸೋಂಕು ಹರಡುವಿಕೆ ಸುನಾಮಿ ಸ್ವರೂಪ ಪಡೆದುಕೊಂಡಿದ್ದು, ಅತಿ ಹೆಚ್ಚು ಕೊರೊನಾ ಸೋಂಕು ಪೀಡಿತರರಿರುವ ದೇಶಗಳ ಪಟ್ಟಿಯಲ್ಲಿ ಭಾರತವು ಮೊದಲನೆ ಸ್ಥಾನದತ್ತ ಬಿರಬಿರನೆ ಸಾಗಿದೆ. ದೇಶದ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಅರ್ಧ ಕೋಟಿಯನ್ನು ಮೀರಿ ಮುಂದೆ ಹೋಗಿದೆ. ಪ್ರತಿದಿನ ಸುಮಾರು ಒಂದು ಲಕ್ಷ ಪ್ರಕರಣಗಳು ಪತ್ತೆಯಾಗಲು ಆರಂಭಿಸಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 52 ಲಕ್ಷ ದಾಟಿದೆ. ದೇಶದಲ್ಲಿ ಆಗಸ್ಟ್ 6 ನಂತರ ಪ್ರತಿ ದಿನ 60 ಸಾವಿರಕ್ಕೂ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿತ್ತು. ಆಗಸ್ಟ್‌ 19ರ ನಂತರ ಪ್ರತಿದಿನ ಸುಮಾರು 70 ಸಾವಿರ ಪ್ರಕರಣಗಳು ಕಾಣಿಸಿಕೊಳ್ಳಲಾರಂಭಿಸಿದವು.

ಸೆಪ್ಟೆಂಬರ್ 2ರಿಂದ 80 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದವು. ಸೆಪ್ಟೆಂಬರ್ 5ರಿಂದ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಲು ಆರಂಭಿಸಿದವು. ಸೆಪ್ಟೆಂಬರ್ 9ರಿಂದ 95 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸಲಾರಂಭಿಸಿದ್ದವು. ಸೆಪ್ಟೆಂಬರ್ 12ರಿಂದ ಮತ್ತೆ ತುಸು ಕಡಿಮೆ ಆಗಿತ್ತು. ಸೆಪ್ಟೆಂಬರ್ 12ರಂದು 94,372 ಪ್ರಕರಣಗಳು, ಸೆಪ್ಟೆಂಬರ್ 13ರಂದು 92,071 ಪ್ರಕರಣಗಳು, ಸೆಪ್ಟೆಂಬರ್ 14ರಂದು 83,809 ಪ್ರಕರಣಗಳು ಹಾಗೂ ಸೆಪ್ಟೆಂಬರ್ 15ರಂದು 90,123 ಪ್ರಕರಣಗಳು ಪತ್ತೆಯಾಗಿದ್ದವು. ಈಗ ಮತ್ತೆ ಹೆಚ್ಚಾಗಿದ್ದು ಸೆಪ್ಟೆಂಬರ್ 16ರಂದು 97,894 ಪ್ರಕರಣಗಳು ವರದಿಯಾಗಿದ್ದವು. ಸೆಪ್ಟೆಂಬರ್ 17ರಂದು 96,424 ಪ್ರಕರಣಗಳು ಪತ್ತೆಯಾಗಿವೆ.‌ ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 52,14,678ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: Karnataka Rain: ಬೀದರ್, ಕಲಬುರ್ಗಿಯಲ್ಲಿ ವರುಣನ ಅಬ್ಬರ; ಕರಾವಳಿಯಲ್ಲೂ 3 ದಿನ ಭಾರೀ ಮಳೆ

ಇದಲ್ಲದೆ ಗುರುವಾರ 1,174 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 84 ಸಾವಿರದ ಗಡಿ‌ ದಾಟಿದ್ದು 84,372ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 41,12,552 ಜನ ಮಾತ್ರ. ಇನ್ನೂ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 10,17,754 ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ, ಸೆಪ್ಟೆಂಬರ್ 1ರಂದು 78,357, ಸೆಪ್ಟೆಂಬರ್ 2ರಂದು 83,883, ಸೆಪ್ಟೆಂಬರ್ 4ರಂದು 86,432, ಸೆಪ್ಟೆಂಬರ್ 5ರಂದು 90,633, ಸೆಪ್ಟೆಂಬರ್ 6ರಂದು 90,802, ಸೆಪ್ಟೆಂಬರ್ 7ರಂದು 75,809, ಸೆಪ್ಟೆಂಬರ್ 8ರಂದು 89,706, ಸೆಪ್ಟೆಂಬರ್ 9ರಂದು 95,735, ಸೆಪ್ಟೆಂಬರ್ 10ರಂದು 96,551, ಸೆಪ್ಟೆಂಬರ್ 11ರಂದು 97,570, ಸೆಪ್ಟೆಂಬರ್ 12ರಂದು 94,372, ಸೆಪ್ಟೆಂಬರ್ 13ರಂದು 92,071, ಸೆಪ್ಟೆಂಬರ್ 14ರಂದು 83,809, ಸೆಪ್ಟೆಂಬರ್ 15ರಂದು 90,123, ಸೆಪ್ಟೆಂಬರ್ 16ರಂದು 97,894 ಹಾಗೂ ಸೆಪ್ಟೆಂಬರ್ 17ರಂದು 96,424 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: Sushma Chakre
First published: September 18, 2020, 10:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading