ಬೆಂಗಳೂರು (ಮಾ. 25): ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ರಾಜ್ಯಕ್ಕೆ ಮತ್ತೆ 4 ಲಕ್ಷ ಡೋಸ್ ಕೊರೋನಾ ಲಸಿಕೆಯನ್ನು ತರಿಸಿಕೊಳ್ಳಲಾಗಿದೆ. ನಿನ್ನೆ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೋನಾ ಲಸಿಕೆ ಬಂದಿದೆ. ಇನ್ನೊಂದು ವಾರದಲ್ಲಿ 12 ಲಕ್ಷ ಡೋಸ್ ಲಸಿಕೆ ಬರಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕೊರೋನಾ ಲಸಿಕೆಯ ಅಭಾವವಿಲ್ಲ. ಈ ಬಗ್ಗೆ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದ್ದು, ಎಲ್ಲ ಅರ್ಹ ನಾಗರಿಕರೂ ತಮ್ಮ ಹೆಸರು ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆಯಬೇಕು. ಕೇಂದ್ರ ಸರ್ಕಾರ ನಮ್ಮ ನಿರೀಕ್ಷೆಯಷ್ಟು ಕೊರೋನಾ ಲಸಿಕೆಯನ್ನು ಕಳುಹಿಸಲಿದೆ. ರಾಜ್ಯದಲ್ಲಿ ಲಸಿಕೆಯ ಅಭಾವವಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ನೆನ್ನೆ ತಡರಾತ್ರಿ ರಾಜಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು,ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕೆಂದು ಕೋರುತ್ತೇನೆ.
— Dr Sudhakar K (@mla_sudhakar) March 25, 2021
ಇದನ್ನೂ ಓದಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸ್ಪರ್ಧೆ; ರಾಜಕೀಯ ಲೆಕ್ಕಾಚಾರಗಳೇನು?
ಇಂದು ಬೆಂಗಳೂರಿನಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದ್ದು, ನೆಲಮಂಗಲದ ಒಂದೇ ಕಾಲೇಜಿನ 22 ಜನರಲ್ಲಿ ಕೊರೋನಾ ಸೋಂಕು ತಗುಲಿದೆ. ನೆಲಮಂಗಲದ ಬೇಗೂರಿನಲಿರುವ ಸೌಂದರ್ಯ ನರ್ಸಿಂಗ್ ಕಾಲೇಜಿನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರಿನ ನರ್ಸಿಂಗ್ ಕಾಲೇಜಿನಲ್ಲಿ ಕಳೆದ 4 ದಿನಗಳಲ್ಲಿ 22 ನರ್ಸಿಂಗ್ ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಕೇರಳ, ಪಶ್ಚಿಮ ಬಂಗಾಳ ಹಾಗೂ ನೇಪಾಳ ಮೂಲದ ವಿಧ್ಯಾರ್ಥಿಗಳಿಗೆ ಸೋಂಕು ತಗುಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ