ಬೆಂಬಲಿಗರೊಂದಿಗೆ ಮೆರವಣಿಗೆ; ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌

ಕೊರೋನಾ ಸೋಂಕಿಗೆ ಒಳಗಾಗಿದ್ದ ಕಾರಣ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯ ಜೈಲಿನ ವಾರ್ಡ್‌‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಉಳಿದ ಆರೋಪಿಗಳನ್ನು ನಗರದ ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ.

ಇಮ್ರಾನ್ ಪಾಷಾ

ಇಮ್ರಾನ್ ಪಾಷಾ

  • Share this:
ಬೆಂಗಳೂರು(ಜೂನ್ 08): ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಚ್ ಆದ ಕೂಡಲೇ ರೋಡ್ ಷೋ ನಡೆಸಿ ಹಂಗಾಮ ಮಾಡಿದ್ದ ಕಾರ್ಪೋರೇಟರ್ ಇಮ್ರಾನ್ ಪಾಷ ಸೇರಿದಂತೆ ಜೊತೆಗಿದ್ದ ಒಟ್ಟು 27 ಜನರ ಪೈಕಿ 23 ಜನರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಎಸಿಎಂಎಂ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.

ಬಂಧಿತರ ಪೈಕಿ ಓರ್ವನಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಮೂವರು ಆರೋಪಿಗಳ ವರದಿಗಾಗಿ ಪೊಲೀಸರು ಕಾಯುತ್ತಿದ್ದು ವರದಿ ಬರುತ್ತಿದ್ದಂತೆ ನಾಲ್ಕೂ ಜನರನ್ನೂ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎನ್ನಲಾಗುತ್ತಿದೆ.

ಕಾರ್ಪೊರೇಟ್‌ ಇಮ್ರಾನ್‌ ಪಾಷಾ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಗುಣಪಡಿಸಿ ಮನೆಗೆ ಕಳುಹಿಸಿಕೊಡಲಾಗಿತ್ತು. ಕೊರೋನಾ ಸೋಂಕಿನಿಂದ ಗುಣಮುಖನಾದ ವ್ಯಕ್ತಿ ಯಾರ ಸಂಪರ್ಕಕ್ಕೂ ಬರುವಂತಿಲ್ಲ. ವೈದ್ಯರ ಸೂಚನೆಯಂತೆ ಮನೆಯಲ್ಲೇ ನಿಗದಿತ ಅವಧಿಯವರೆಗೆ ಕ್ವಾರಂಟೈನ್ ಇರಬೇಕು ಎಂಬುದು ನಿಯಮ.

ಅದರೆ, ಜೂನ್‌.08 ರಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಇಮ್ರಾನ್ ಪಾಷಾ ತಮ್ಮ ಅಪಾರ ಬೆಂಬಲಿಗರ ಜೊತೆ ಪಾದರಾಯನಪುರದಲ್ಲಿ ರ್‍ಯಾಲಿ ನಡೆಸಿ ಖಾಕಿ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗಾಗಿ ಕೂಡಲೇ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡ ಜೆಜೆ ನಗರ ಪೊಲೀಸರು ಸರ್ಕಾರಿ ಆದೇಶಗಳನ್ನ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ಸ್ 143, 188, 270, 271, 353 ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿರುವ ನ್ಯಾಯಾಲಯ ಇಮ್ರಾನ್ ಪಾಷಾ ಸೇರಿದಂತೆ ಒಟ್ಟು 23 ಜನರನ್ನು ಜೂನ್‌.22ನೇ ತಾರೀಖಿನವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿ : ಬೆಂಬಲಿಗರೊಂದಿಗೆ ಮೆರವಣಿಗೆ ಮಾಡಿದ್ದ ಕಾರ್ಪೊರೇಟರ್ ಇಮ್ರಾನ್ ಪಾಷಾಗೆ ಕ್ವಾರಂಟೈನ್

ಕೊರೋನಾ ಸೋಂಕಿಗೆ ಒಳಗಾಗಿದ್ದ ಕಾರಣ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯ ಜೈಲಿನ ವಾರ್ಡ್‌‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಉಳಿದ ಆರೋಪಿಗಳನ್ನು ನಗರದ ಹಜ್ ಭವನಕ್ಕೆ ಶಿಫ್ಟ್ ಮಾಡಲಾಗಿದೆ.
First published: