ಎರಡು ವಾರದೊಳಗೆ ಹೊಸ ಕೋವಿಡ್-19 ಆಸ್ಪತ್ರೆ - ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್

ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ಆಸ್ಪತ್ರೆ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಚಿವ ಡಾ.ಕೆ ಸುಧಾಕರ್‌ ಶ್ಲಾಘಿಸಿದ್ದಾರೆ.

news18-kannada
Updated:August 2, 2020, 9:49 PM IST
ಎರಡು ವಾರದೊಳಗೆ ಹೊಸ ಕೋವಿಡ್-19 ಆಸ್ಪತ್ರೆ - ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್
ಸಚಿವ ಕೆ.ಸುಧಾಕರ್​
  • Share this:
ಬೆಂಗಳೂರು(ಆ.02): ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬ್ರಾಡ್ ವೇ ರಸ್ತೆಯ ಬಳಿ ಬಿಬಿಎಂಪಿ ‌ಕಟ್ಟಡದಲ್ಲಿ 200 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದೆ.‌ ಕೊರೋನಾ ರೋಗಿಗಳಿಗಾಗಿ ಈ ಆಸ್ಪತ್ರೆ‌ ನಿರ್ಮಾಣವಾಗುತ್ತಿದ್ದು, ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಮೊದಲಾದ ಎಲ್ಲಾ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಜೊತೆಗೆ ಸಿಬ್ಬಂದಿ‌ ನಿಯೋಜನೆಯೂ ಮಾಡಲಾಗಿದೆ ಎಂದರು ಸುಧಾಕರ್​​.

"ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಕೋವಿಡ್ ಆಸ್ಪತ್ರೆ ಸಿದ್ಧವಾಗುತ್ತಿದ್ದು, ಇದರ‌ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜನೆಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. ಇನ್ನು ಎರಡು ವಾರದೊಳಗೆ ಕಾರ್ಯಾರಂಭಗೊಳ್ಳಲಿದೆ ಎಂದು ಡಾ.ಕೆ.ಸುಧಾಕರ್ ಮಾಹಿತಿ‌ ನೀಡಿದ್ದಾರೆ.

ಆಸ್ಪತ್ರೆ ನಿರ್ಮಿಸಲು ಇನ್ಫೋಸಿಸ್ ಪ್ರತಿಷ್ಠಾನ ನೆರವು ನೀಡಿದ್ದು, ಪ್ರತಿಷ್ಠಾನಕ್ಕೆ ಮತ್ತು ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಸರ್ಕಾರ ಮತ್ತು ಜನರ ಪರವಾಗಿ ಸಚಿವ ಸುಧಾಕರ್ ಕೃತಜ್ಞತೆ ಸಲ್ಲಿಸಿದರು.

ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಮುಂದಾಗಿರುವ ಹಾವೇರಿ ಜಿಲ್ಲೆಯ 570 ಖಾಸಗಿ ಆಸ್ಪತ್ರೆ ವೈದ್ಯರು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಚಿವ ಡಾ.ಕೆ ಸುಧಾಕರ್‌ ಶ್ಲಾಘಿಸಿದ್ದಾರೆ.

ಇದನ್ನೂ ಓದಿ: Coronavirus Updates: ಕರ್ನಾಟಕದಲ್ಲಿ ಒಂದೇ ದಿನ 5532 ಮಂದಿಗೆ ಕೊರೋನಾ​, 1.35 ಲಕ್ಷ ಸಮೀಪಿಸಿದ ಸೋಂಕಿತರ ಸಂಖ್ಯೆಕೊರೊನಾದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ವೈದ್ಯರು  ಮಾನವೀಯತೆ ಮೆರೆದಿದ್ದಾರೆ. ಈ ವೈದ್ಯರ ವೃತ್ತಿಪರತೆ ಮತ್ತು ಸೇವಾ ಮನೋಭಾವ ಶ್ಲಾಘನೀಯವಾದುದು" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದರು.
Published by: Ganesh Nachikethu
First published: August 2, 2020, 9:47 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading