ಶಿವಮೊಗ್ಗದ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್-19 ಕೇರ್ ಸೆಂಟರ್​​ ಕಾರ್ಯಾರಂಭ

ಇಲ್ಲಿ 250 ಬೆಡ್ ಸೌಲಭ್ಯ ಲಭ್ಯವಿದೆ. ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲಾ ಆರೋಗ್ಯ ಸೌಲಭ್ಯಗಳನ್ನುಇಲ್ಲಿ ಕಲ್ಪಿಸಲಾಗಿದೆ. ಸದ್ಯ 30 ಮಂದಿ ಕೊರೋನಾ ಪಾಸಿಟಿವ್ ವ್ಯಕ್ತಿಗಳನ್ನುಇಲ್ಲಿ ಇರಿಸಿ ಚಿಕಿತ್ಸೆ ಕೂಡ ನೀಡಲಾಗುತ್ತಿದೆ.

news18-kannada
Updated:July 6, 2020, 4:09 PM IST
ಶಿವಮೊಗ್ಗದ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್-19 ಕೇರ್ ಸೆಂಟರ್​​ ಕಾರ್ಯಾರಂಭ
ಸಾಂದರ್ಭಿಕ ಚಿತ್ರ
  • Share this:
ಶಿವಮೊಗ್ಗ(ಜು.06): ಶಿವಮೊಗ್ಗ ಜಿಲ್ಲೆಯಲ್ಲಿ ದಿನೇದಿನೇ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಕೋವಿಡ್-19 ಆಸ್ಪತ್ರೆಯಲ್ಲಿ 150 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ. ಆದರೆ, ಪಾಸಿಟಿವ್-19 ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಇದಕ್ಕಾಗಿ ಜಿಲ್ಲಾಡಳಿತ ಕೋವಿಡ್ ಕೇರ್ ಸೆಂಟರ್ ಆರಂಭಿಸಿದೆ. 

ಶಿವಮೊಗ್ಗ ತಾಲೂಕಿನ ಗಾಜನೂರು ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್-19 ಕೇರ್ ಸೆಂಟರ್ ಕಾರ್ಯಾರಂಭವಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ರೋಗ ಲಕ್ಷಣವಿಲ್ಲದ ಕೊರೋನಾ ಪಾಸಿಟಿವ್​​ ವ್ಯಕ್ತಿಗಳಿಗಾಗಿ ಕೋವಿಡ್-19 ಸೆಂಟರ್ ಸಜ್ಜುಗೊಳಿಸಲಾಗಿದೆ.

250 ಬೆಡ್ ಸೌಲಭ್ಯ ಲಭ್ಯವಿದೆ. ವೈದ್ಯಾಧಿಕಾರಿಗಳು ಸೇರಿದಂತೆ ಎಲ್ಲಾ ಆರೋಗ್ಯ ಸೌಲಭ್ಯಗಳನ್ನುಇಲ್ಲಿ ಕಲ್ಪಿಸಲಾಗಿದೆ. ಸದ್ಯ 30 ಮಂದಿ ಕೊರೋನಾ ಪಾಸಿಟಿವ್ ವ್ಯಕ್ತಿಗಳನ್ನು ಇರಿಸಿ ಚಿಕಿತ್ಸೆ ಕೂಡ ನೀಡಲಾಗುತ್ತಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿ; ಹೊರರಾಜ್ಯದಿಂದ ಬರುವ ಎಲ್ಲರಿಗೂ ಮನೆಯಲ್ಲೇ ಕ್ವಾರಂಟೈನ್

ಇನ್ನು, 30 ಮಂದಿಯನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು. ಇದರಿಂದಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗ ಲಕ್ಷಣವಿರುವ ಕೊರೋನಾ ಪಾಸಿಟಿವ್ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿದೆ.

ಭದ್ರಾವತಿಯ ವಿಐಎಸ್​ಎಲ್ ಆಸ್ಪತ್ರೆಯಲ್ಲಿ ಸಹ 50 ಬೆಡ್​ಗಳ ಇದ್ದು, ಇಲ್ಲಿ ಸಹ ಕೊವಿಡ್ ಕೇರ್ ಸೆಂಟರ್ ಆರಭಿಸಲು ಚಿಂತನೆ ನಡೆದಿದೆ. ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್​​ಗೆ ಜಿಲ್ಲಾಧಿಕಾರಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
Published by: Ganesh Nachikethu
First published: July 6, 2020, 3:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading