HOME » NEWS » Coronavirus-latest-news » COVID 19 VACCINE NO VACCINE STOCK AT NEW DELHI AND NO CAMPAIGN TOMORROW SAYS CM ARAVIND KEJRIWAL DBDEL LG

COVID-19 Vaccine: ದೆಹಲಿಯಲ್ಲಿ ವ್ಯಾಕ್ಸಿನ್​​ ಕೊರತೆ; ನಾಳೆಯಿಂದ ಶುರುವಾಗಲ್ಲ ಲಸಿಕೆ ನೀಡುವ ಅಭಿಯಾನ; ಸಿಎಂ ಕೇಜ್ರಿವಾಲ್

ದೆಹಲಿಯಲ್ಲಿ ಕೊರೊನಾ ಲಸಿಕೆ ಇಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಅಧಿಕೃತವಾಗಿ ಘೋಷಿಸಿದ್ದರು. ಶುಕ್ರವಾರ ಮತ್ತೊಮ್ಮೆ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಕೊರೋನಾ ಲಸಿಕೆ ಇಲ್ಲ.  ಕೇಂದ್ರ ಸರ್ಕಾರ ಲಸಿಕೆ ಪೂರೈಕೆ ಬಳಿಕವಷ್ಟೆ ತಾವು ಜನರಿಗೆ ವ್ಯಾಕ್ಸಿನ್ ನೀಡಲು ಸಾಧ್ಯ ಎಂದು ಪುನರುಚ್ಛರಿಸಿದ್ದಾರೆ.

news18-kannada
Updated:April 30, 2021, 2:01 PM IST
COVID-19 Vaccine: ದೆಹಲಿಯಲ್ಲಿ ವ್ಯಾಕ್ಸಿನ್​​ ಕೊರತೆ; ನಾಳೆಯಿಂದ ಶುರುವಾಗಲ್ಲ ಲಸಿಕೆ ನೀಡುವ ಅಭಿಯಾನ; ಸಿಎಂ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
  • Share this:
ನವದೆಹಲಿ(ಏ.‌ 30): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಪ್ರತಿ ದಿನ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸುತ್ತಿವೆ. ಈ ನಡುವೆ  ದೇಶಾದ್ಯಂತ 18 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರಿಗೂ ಕೊರೋನಾ ಲಸಿಕೆ ಹಾಕುವ ಮೂರನೇ ಹಂತದ (ಮೇ 1ರಿಂದ) ಅಭಿಯಾನಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ ಪ್ರತಿ ದಿನ ಸುಮಾರು 25 ಸಾವಿರ ಜನರು ಸೋಂಕು ಪೀಡಿತರಾಗುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಳೆಯಿಂದ ಕೊರೋನಾ ಲಸಿಕೆಗಳು ಸಿಗುವುದಿಲ್ಲ.

'ದೆಹಲಿಯಲ್ಲಿ ಕೊರೊನಾ ಲಸಿಕೆ ಇಲ್ಲ' ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ಅಧಿಕೃತವಾಗಿ ಘೋಷಿಸಿದ್ದರು. 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಬೇಕಿರುವ ಹಿನ್ನಲೆಯಲ್ಲಿ ಲಸಿಕೆಗಳ ಅಗತ್ಯ, ಪೂರೈಕೆ, ವಿತರಣೆ, ನಿರ್ವಹಣೆ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು.‌ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅರವಿಂದ ಕೇಜ್ರಿವಾಲ್, 'ಅಗತ್ಯ ಇರುವಷ್ಟು ಲಸಿಕೆ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಲಸಿಕೆ ಪೂರೈಕೆ ಬಳಿಕವಷ್ಟೆ ತಾವು ಜನರಿಗೆ ವ್ಯಾಕ್ಸಿನ್ ನೀಡಲು ಸಾಧ್ಯ' ಎಂದು ಅಸಹಾಯಕತೆ ತೋಡಿಕೊಂಡಿದ್ದರು.

Coronavirus India Updates: ದೇಶದಲ್ಲಿ ಒಂದೇ ದಿನ ಸುಮಾರು 4 ಲಕ್ಷ ಕೊರೋನಾ ಪ್ರಕರಣಗಳು ಪತ್ತೆ

ಶುಕ್ರವಾರ ಮತ್ತೊಮ್ಮೆ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಕೊರೋನಾ ಲಸಿಕೆ ಇಲ್ಲ.  ಕೇಂದ್ರ ಸರ್ಕಾರ ಲಸಿಕೆ ಪೂರೈಕೆ ಬಳಿಕವಷ್ಟೆ ತಾವು ಜನರಿಗೆ ವ್ಯಾಕ್ಸಿನ್ ನೀಡಲು ಸಾಧ್ಯ ಎಂದು ಪುನರುಚ್ಛರಿಸಿದ್ದಾರೆ. ಅಲ್ಲದೆ ಖಾಸಗಿ ಕಂಪನಿಗಳಿಂದ 67 ಲಕ್ಷ ಡೋಸ್ ಗಳ ಖರೀದಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ. ಆದರೆ ಇದು ದೆಹಲಿ ಸರ್ಕಾರ ಅತ್ಯಂತ ತಡವಾಗಿ ಮಾಡಲಾಗುತ್ತಿರುವ ಪ್ರಯತ್ನ. ಈ ಕೆಲಸವನ್ನು ಮೊದಲೇ ಮಾಡಬಹುದಿತ್ತು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
Youtube Video

ದೆಹಲಿಯ ರೀತಿಯಲ್ಲಿ ಇವತ್ತು ಕರ್ನಾಟಕದ ಆರೋಗ್ಯ ಸಚಿವ ಡಾ‌. ಕೆ. ಸುಧಾಕರ್ ಅವರು ಕೂಡ 'ರಾಜ್ಯದಲ್ಲಿ ಕೊರೊನಾ ಲಸಿಕೆಗಳು ಇಲ್ಲ. ಆದುದರಿಂದ ನಾಳೆ (ಮೇ 1ರಂದು) ಯಾರೂ ಲಸಿಕಾ ಕೇಂದ್ರಗಳ ಬಳಿ ಬರಬೇಡಿ' ಎಂದು ಹೇಳಿದ್ದಾರೆ. ಇದಲ್ಲದೆ ರಾಜಸ್ಥಾನ, ಛತ್ತೀಸ್ಗಢ, ಮಹಾರಾಷ್ಟ್ರ, ಒರಿಸ್ಸಾ, ಗುಜರಾತ್, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ಸರ್ಕಾರಗಳು ತಮ್ಮ ಬಳಿ ಅಗತ್ಯಕ್ಕೆ ತಕ್ಕಷ್ಟು ಕೊರೋನಾ ಲಸಿಕೆಗಳು ಇಲ್ಲ. ಆದುದರಿಂದ ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಹೇಳಿವೆ. ಆದುದರಿಂದ ನಿಗದಿತ ಸಮಯದಲ್ಲಿ ದೇಶಾದ್ಯಂತ 18 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರಿಗೂ ಕೊರೋನಾ ಲಸಿಕೆ ಹಾಕುವ ಮೂರನೇ ಹಂತದ ಅಭಿಯಾನ ಆರಂಭವಾಗುವುದು ಅನುಮಾನವಾಗಿದೆ.
Published by: Latha CG
First published: April 30, 2021, 2:01 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories