Karnataka Covid: ರಾಜ್ಯದಲ್ಲಿ ಇಂದು ಇಳಿಕೆ ಕಂಡ ಸೋಂಕು ಪ್ರಕರಣ

ಇಂದು ರಾಜ್ಯದಲ್ಲಿ 1065 ಪ್ರಕರಣ ದಾಖಲಾಗಿದ್ದು, 28 ಜನರು ಕೋವಿಡ್​ಗೆ ಬಲಿಯಾಗಿದ್ದಾರೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಂಗಳೂರು (ಆ. 16): ರಾಜ್ಯದಲ್ಲಿ ಕಳೆದ 15 ದಿನಗಳಿಂದ ಏರಿಕೆ ಕಂಡಿದ್ದ ಸೋಂಕು ಮತ್ತೆ ಇಳಿಕೆ ಕಾಣುತ್ತಿದೆ. ನಿನ್ನೆಗೆ ಹೋಲಿಸಿದರೆ ರಾಜ್ಯದಲ್ಲಿ ಇಂದು 500 ಸೋಂಕು ಪ್ರಕರಣಗಳು ಇಳಿಕೆ ಕಂಡಿದೆ. ಇಂದು ರಾಜ್ಯದಲ್ಲಿ 1065 ಪ್ರಕರಣ ದಾಖಲಾಗಿದ್ದು, 28 ಜನರು ಕೋವಿಡ್​ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್​ ಪಾಸಿಟಿವಿಟಿ ರೇಟ್ 0.93 ರಷ್ಟಿದ್ದರೆ, ಸಾವಿನ ಪ್ರಮಾಣ 2.62 ರಷ್ಟಿದೆ. ಬೆಂಗಳೂರಿನಲ್ಲಿ ಇಂದು 270 ಹೊಸ ಪ್ರಕರಣಗಳು ದಾಖಲಾಗಿದ್ದರೆ, 4 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣ ಕಂಡು ಬಂದಿದ್ದು, ಇಂದು 284 ಜನರು ಸೋಂಕಿಗೆ ತುತ್ತಾಗಿದ್ದಾರೆ. ಉಡುಪಿಯಲ್ಲಿ 107 ಪ್ರಕರಣ ಕಂಡು ಬಂದಿದ್ದರೆ, ಹಾಸನದಲ್ಲಿ 54 ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ ಸೋಂಕು ಪ್ರಕರಣ ನಿಯಂತ್ರಣಕ್ಕೆ ಸರ್ಕಾರ ಬಿಗಿ ನಿಯಂತ್ರಣ ಕೈಗೊಂಡಿದ್ದು, ರಾಜ್ಯದಲ್ಲಿ ನೈಟ್​ ಕರ್ಫ್ಯೂ ಮತ್ತು ಗಡಿ ಪ್ರದೇಶದಲ್ಲಿ ವಿಕೇಂಡ್​ ಕರ್ಫ್ಯೂ ವಿಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನೆರೆಯ ಕೇರಳ ರಾಜ್ಯದಲ್ಲಿ ಸೋಂಕು ಹೆಚ್ಚಳ ಸಮಸ್ಯೆಯಾಗಿದೆ. ಈ ಹಿನ್ನಲೆ ಈಗಾಗಲೇ ಗಡಿ ಪ್ರದೇಶದಲ್ಲಿ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಲಾಗಿದೆ. ಗಡಿ ಪ್ರದೇಶ ಸಂಚಾರಕ್ಕೆ ಕೋವಿಡ್​ ನೆಗೆಟಿವ್ ವರದಿ ಕಡ್ಡಾಯವಾಗಿದೆ.

    ಈ ನಡುವೆ ಇಂದಿನಿಂದ ಮಂಗಳೂರು ವಿಮಾನ ನಿಲ್ಡಾಣದಲ್ಲಿ ಕೂಡ ಆರ್​ಟಿಪಿಸಿಆರ್​ ವ್ಯವಸ್ಥೆ ಮಾಡಲಾಗಿದೆ. ಕಳೆದ 15 ದಿನಗಳಲ್ಲಿ ದಕ್ಷಿಣ ಕನ್ನಡದಲ್ಲಿ ಸರಿ ಸುಮಾರು ಶೇ 70 ರಷ್ಟು ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 4 ರಷ್ಟಿದೆ. ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಬಿಗಿ ಕ್ರಮ ನಡೆಸುತ್ತಲೇ ಇದ್ದಾರೆ.

    ಇದನ್ನು ಓದಿ: ವಿದ್ಯಾರ್ಥಿಗಳ ಕೋವಿಡ್​ ನೆಗಟಿವ್​ ವರದಿ ಕಡ್ಡಾಯ; ಶಾಲಾ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

    ಬೆಂಗಳೂರಿನಲ್ಲಿ ಸೋಂಕು ನಿಯಂತ್ರಣಕ್ಕೆ ಬಿಬಿಎಂಪಿ ಕೂಡ ಕಟ್ಟು ನಿಟ್ಟಿನ ಕ್ರಮ ನಡೆಸಿದ್ದು, ಇಂದಿನಿಂದ ರಾಜಧಾನಿಯಲ್ಲಿ ಪ್ರತಿ ಮನೆಗೆ ವೈದ್ಯರ ತಂಡ ಭೇಟಿ ನೀಡಲಿದೆ. ಈ ಮೂಲಕ ಮನೆ ಮಂದಿಯ ಆರೋಗ್ಯದ ಕುರಿತು ಮಾಹಿತಿ ಸಂಗ್ರಹಿಸಲು ಮುಂದಾಗಿದ್ದು, ಸೋಂಕು ನಿಯಂತ್ರಣಕ್ಕೆ ಹೊಸ ಹೆಜ್ಜೆ ಇಟ್ಟಿದೆ. ಪ್ರತೀ ತಂಡವು ಪ್ರತೀ ನಿತ್ಯ ಕನಿಷ್ಠ 50 ಮನೆಗಳ ಸಮೀಕ್ಷೆ ನಡೆಸುವುದು. ಪ್ರತೀ ವಾರ್ಡ್ ಗೆ 5 ವೈದ್ಯರ ತಂಡವಿರಲಿದೆ. ಮನೆ ಭೇಟಿಯ ಸಮಯದಲ್ಲಿ ಕೋವಿಡ್-19 ಸೋಂಕಿತರು ಪತ್ತೆಯಾದಲ್ಲಿ, ಸದರಿ ಸೋಂಕಿತರಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವ ಹೋಂ ಐಸೋಲೇಷನ್ ಕಿಟ್ ನೀಡಲಾಗುವುದು.

    ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನಲೆ ಕಠಿಣ ಕ್ರಮಕ್ಕೆ ಮುಂದಾಗುವುದು ಬೇಡ ಎಂದು ಸರ್ಕಾರ ಶನಿವಾರ ನಡೆದ ಕೋವಿಡ್​ ತಾಂತ್ರಿಕ ಸಭೆ ಬಳಿಕ ತಿಳಿಸಿತು. ರಾಜ್ಯದಲ್ಲಿ ಇನ್ನೂ ಮೂರನೇ ಅಲೆ ಆರಂಭವಾಗಿಲ್ಲ. ಪಾಸಿಟಿವಿಟಿ ರೇಟ್​ 2ಕ್ಕಿಂತ ಹೆಚ್ಚಾದ ಕಡೆ ಬಿಗಿ ಕ್ರಮ ಕೈ ಗೊಳ್ಳುವ ಮೂಲಕ ನಿಯಂತ್ರಣ ನಡೆಸಬೇಕು. ಇನ್ನು ಎರಡು ವಾರಗಳ ಕಾಲ ರಾಜ್ಯದಲ್ಲಿ ಸೋಂಕಿನ ಪರಿಸ್ಥಿತಿ ನೋಡಿಕೊಂಡು ಬಳಿಕ ಈ ಕುರಿತು ವೀಕೆಂಡ್​​ ಕರ್ಫ್ಯೂ, ಲಾಕ್​ಡೌನ್​ನಂತಹ ಕ್ರಮದ ಕುರಿತು ಚಿಂತನೆ ನಡೆಸಲಾಗುವುದು. ಪ್ರಸ್ತುತ ರಾಜ್ಯದಲ್ಲಿ ಜಾರಿಯಲ್ಲಿರುವ ಕೊರೋನಾ ನಿಯಮಗಳನ್ನೇ ಮುಂದುವರೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
    Published by:Seema R
    First published: