• Home
  • »
  • News
  • »
  • coronavirus-latest-news
  • »
  • ಜನಸಂದಣಿ ತಡೆಯಲು ಕೆ.ಆರ್​. ಮಾರ್ಕೆಟ್​ನ ತರಕಾರಿ ಅಂಗಡಿಗಳು ಬೇರೆಡೆ ಶಿಫ್ಟ್; ತೇಜಸ್ವಿ ಸೂರ್ಯ

ಜನಸಂದಣಿ ತಡೆಯಲು ಕೆ.ಆರ್​. ಮಾರ್ಕೆಟ್​ನ ತರಕಾರಿ ಅಂಗಡಿಗಳು ಬೇರೆಡೆ ಶಿಫ್ಟ್; ತೇಜಸ್ವಿ ಸೂರ್ಯ

ತೇಜಸ್ವಿ ಸೂರ್ಯ

ತೇಜಸ್ವಿ ಸೂರ್ಯ

ಕೆ.ಆರ್​. ಮಾರ್ಕೆಟ್​ನಲ್ಲಿರುವ ಅಂಗಡಿಗಳನ್ನು ಬಸವನಗುಡಿಯ ನ್ಯಾಷನಲ್ ಮೈದಾನ ಮತ್ತು ವಿಜಯನಗರದ ಮೈದಾನಕ್ಕೆ ಶಿಫ್ಟ್​ ಮಾಡುವ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

  • Share this:

ಬೆಂಗಳೂರು (ಮಾ. 27): 21 ದಿನಗಳ ಕಾಲ ಲಾಕ್​ಡೌನ್​ಗೆ ಕರೆ ನೀಡಿದ್ದರೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 


ತರಕಾರಿ, ಹಣ್ಣುಗಳನ್ನು ಕೊಳ್ಳಲು ಕೆ.ಆರ್​. ಮಾರುಕಟ್ಟೆಗೆ ಜನರು ಮುಗಿಬೀಳುತ್ತಿದ್ದಾರೆ. ಹೀಗಾಗಿ, ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಲಾಸಿಪಾಳ್ಯ ಮತ್ತು ಕೆ.ಆರ್. ಮಾರ್ಕೆಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ. ಇಲ್ಲಿ ಬಂದು ಪರಿಶೀಲನೆ ನಡೆಸಿದಾಗ ಬೆಳಗ್ಗೆಯಿಂದ ಹೆಚ್ಚು ಜನ ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ತರಕಾರಿಗೆ ಚಂದ್ರಾ ಲೇಔಟ್, ವಿಜಯನಗರ, ಬಸವನಗುಡಿ ಕಡೆಯಿಂದ ಜನರು ಬರುತ್ತಿದ್ದಾರೆ. ಪ್ರಧಾನಿ ಮೋದಿ ಲಾಕ್​ಡೌನ್​ಗೆ ಆದೇಶಿಸಿದ್ದರೂ ಜನರು ಕೇಳುತ್ತಿಲ್ಲ. ಈಗ ಪರಿಶೀಲಿಸಿದಾಗ ಪರಿಸ್ಥಿತಿ ಗೊತ್ತಾಯ್ತು. ಇವತ್ತೇ ಸಚಿವ ಆರ್. ಅಶೋಕ್ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ. ಮಾರ್ಕೆಟ್ ವ್ಯಾಪಾರವನ್ನು ನಾಳೆಯೇ ಶಿಫ್ಟ್​ ಮಾಡುವ ಬಗ್ಗೆ ಚರ್ಚಿಸುತ್ತೇನೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.


ಇದನ್ನೂ ಓದಿ: 21 ದಿನ ಲಾಕ್​ಡೌನ್ ಹಿನ್ನೆಲೆ; ಏ. 14ರವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಪ್ರವೇಶ ನಿಷೇಧ


ಕೆ.ಆರ್​. ಮಾರ್ಕೆಟ್​ನಲ್ಲಿರುವ ಅಂಗಡಿಗಳನ್ನು ಬಸವನಗುಡಿಯ ನ್ಯಾಷನಲ್ ಮೈದಾನ ಮತ್ತು ವಿಜಯನಗರದ ಮೈದಾನಕ್ಕೆ ಶಿಫ್ಟ್​ ಮಾಡುವ ಬಗ್ಗೆ ಮಾತುಕತೆ ನಡೆಸಲಾಗುವುದು. ಅಲ್ಲಿ ತರಕಾರಿ ಮಾರಾಟಕ್ಕೆ ಅನುವು ಮಾಡಿ, ಅಂತರ ಕಾಯ್ದುಕೊಳ್ಳಲು ಸೂಚನೆ ಕೊಡಲಾಗುತ್ತದೆ. ಇದಕ್ಕೆ ಎರಡು ದಿನ ಸಮಯ ಬೇಕಾಗುತ್ತದೆ. ನಾಳೆಯೇ ಶಿಪ್ಟ್ ಮಾಡುವ ಬಗ್ಗೆ ಮೇಯರ್ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.


ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ ಸಹಾಯವಾಣಿ ತೆರೆಯಲಾಗಿದ್ದು, ತುರ್ತು ಸಂದರ್ಭದಲ್ಲಿ ಔಷಧಿ ತಲುಪಿಸುತ್ತೇವೆ. ಪುಂಡರು ಉಡಾಫೆ ಮಾಡಿಕೊಂಡು ರಸ್ತೆಯಲ್ಲಿ ಓಡಾಡುವುದು ಸರಿಯಲ್ಲ. ಇನ್ನೂ ಭಾರತದಲ್ಲಿ ಕೊರೋನಾ ಸೋಂಕು 3ನೇ ಹಂತ ತಲುಪಿಲ್ಲ. ಈಗಲೇ ಜನರು ಎಚ್ಚೆತ್ತುಕೊಂಡರೆ ಒಳ್ಳೆಯದು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.


ಇದನ್ನೂ ಓದಿ: ಕೊರೋನಾ ವೈರಸ್​ ವಿರುದ್ಧ ಹೋರಾಡಲು ಪಣತೊಟ್ಟ ಸಂಸದೆ ಸುಮಲತಾ ಅಂಬರೀಶ್​

Published by:Sushma Chakre
First published: