Covid-19 Lockdown: ಯಾವೆಲ್ಲ ರಾಜ್ಯಗಳಲ್ಲಿ ಲಾಕ್​ಡೌನ್ ವಿಸ್ತರಣೆ? ಯಾವ ರಾಜ್ಯಗಳಲ್ಲಿ ಇಂದಿನಿಂದ ಅನ್​ಲಾಕ್​?; ಇಲ್ಲಿದೆ ಮಾಹಿತಿ

Lockdown Extension | ಕರ್ನಾಟಕದಲ್ಲಿ ಜೂನ್ 7ರವರೆಗೆ ಲಾಕ್​ಡೌನ್ ಜಾರಿಗೊಳಿಸಲಾಗಿದೆ. ಅನೇಕ ರಾಜ್ಯಗಳಲ್ಲೂ ಜೂನ್ 7ರವರೆಗೆ ಲಾಕ್​ಡೌನ್ ಜಾರಿಯಲ್ಲಿದ್ದು, ಒಂದೆರಡು ರಾಜ್ಯಗಳಲ್ಲಿ ಜೂನ್ 11ರವರೆಗೆ ಲಾಕ್​ಡೌನ್ ಘೋಷಿಸಲಾಗಿದೆ. ಬಿಹಾರದಲ್ಲಿ ಇಂದು ಲಾಕ್​ಡೌನ್ ತೆರವುಗೊಳ್ಳಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು (ಜೂನ್ 1): ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕೊರೋನಾ ಅಟ್ಟಹಾಸ ಕಡಿಮೆಯಾಗಿಲ್ಲ. ಹೀಗಾಗಿ, ಕಟ್ಟುನಿಟ್ಟಿನ ಲಾಕ್​ಡೌನ್ ಘೋಷಿಸಲಾಗಿದೆ, ಕರ್ನಾಟಕದಲ್ಲಿ ಕಳೆದೊಂದು ತಿಂಗಳಿನಿಂದ ಜೂನ್ 7ರವರೆಗೆ ಲಾಕ್​ಡೌನ್ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಉಳಿದಂತೆ ಅನೇಕ ರಾಜ್ಯಗಳಲ್ಲೂ ಜೂನ್ 7ರವರೆಗೆ ಲಾಕ್​ಡೌನ್ ಜಾರಿಯಲ್ಲಿದ್ದು, ಒಂದೆರಡು ರಾಜ್ಯಗಳಲ್ಲಿ ಜೂನ್ 11ರವರೆಗೆ ಲಾಕ್​ಡೌನ್ ಘೋಷಿಸಲಾಗಿದೆ. ಬಿಹಾರದಲ್ಲಿ ಇಂದು ಲಾಕ್​ಡೌನ್ ತೆರವುಗೊಳ್ಳಲಿದೆ. ಕರ್ನಾಟಕ ಹೊರತುಪಡಿಸಿ ಬೇರಾವ ರಾಜ್ಯಗಳಲ್ಲಿ ಲಾಕ್​ಡೌನ್ ಜಾರಿಯಲ್ಲಿದೆ? ಯಾವೆಲ್ಲ ರಾಜ್ಯಗಳಲ್ಲಿ ಲಾಕ್​ಡೌನ್ ತೆರವುಗೊಳಿಸಲಾಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ...

  ಕರ್ನಾಟಕ:
  ಕರ್ನಾಟಕ ಸರ್ಕಾರ ಜೂನ್ 7ರವರೆಗೂ ಲಾಕ್​ಡೌನ್ ಘೋಷಣೆ ಮಾಡಿದೆ. ಶಿವಮೊಗ್ಗ, ಮೈಸೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಕಟ್ಟುನಿಟ್ಟಿನ ಲಾಕ್​ಡೌನ್ ನಿಯಮಾವಳಿ ಜಾರಿಯಲ್ಲಿರಲಿದೆ. ಮೈಸೂರಿನಲ್ಲಿ ಸೋಮವಾರ ಮತ್ತು ಗುರುವಾರ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಗೆ ಹೋಗಲು ಅವಕಾಶ ನೀಡಲಾಗಿದೆ. ಶಿವಮೊಗ್ಗದಲ್ಲಿ ಇಂದಿನಿಂದ 1 ವಾರ ನಂದಿನಿ ಬೂತ್ ಹೊರತುಪಡಿಸಿ ಬೇರಾವ ಅಂಗಡಿಯೂ ತೆರೆದಿರುವುದಿಲ್ಲ. ಇದೇ ರೀತಿ ಬೇರೆ ಜಿಲ್ಲೆಗಳಲ್ಲೂ ಅಲ್ಲಿನ ಕೊರೋನಾ ಸೋಂಕಿನ ಪ್ರಮಾಣಕ್ಕೆ ಅನುಗುಣವಾಗಿ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಜೂನ್ 7ರ ಬಳಿಕ ಲಾಕ್​ಡೌನ್ ಮುಂದುವರೆಸುವ ಬಗ್ಗೆ ತಜ್ಞರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

  ದೆಹಲಿ:
  ದೆಹಲಿ ಸರ್ಕಾರ ಇನ್ನೂ ಒಂದು ವಾರ ಲಾಕ್​ಡೌನ್ ವಿಸ್ತರಿಸಿದೆ. ಜೂನ್ 7ರವರೆಗೆ ದೆಹಲಿಯಲ್ಲಿ ಲಾಕ್​ಡೌನ್ ಇರಲಿದೆ. ಉತ್ಪಾದನಾ ಮತ್ತು ನಿರ್ಮಾಣ ಕ್ಷೇತ್ರಗಳ ಉದ್ಯೋಗಿಗಳಿಗೆ ಕೆಲಸ ಮಾಡಲು ಅನುಮತಿ ನೀಡಲಾಗಿದೆ.

  ಕೇರಳ:
  ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೂನ್ 9ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿದ್ದಾರೆ. ಕೇರಳದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೋಮವಾರ, ಬುಧವಾರ ಮತ್ತು ಶುಕ್ರವಾರ ಕೇರಳದಲ್ಲಿ ಬ್ಯಾಂಕ್​ಗಳು ತೆರೆದಿರಲಿವೆ.

  ಇದನ್ನೂ ಓದಿ: Karnataka Lockdown Extension: ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಣೆ?; ಸಚಿವರ ಜೊತೆ ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ

  ಪುದುಚೆರಿ:
  ಪುದುಚೆರಿಯಲ್ಲಿ ಜೂನ್ 7ರವರೆಗೆ ಲಾಕ್​ಡೌನ್ ಇರಲಿದೆ. ಮೇ 10ರಿಂದ ಇಲ್ಲಿ ಲಾಕ್​ಡೌನ್ ಜಾರಿಯಲ್ಲಿದೆ.

  ತಮಿಳುನಾಡು:
  ತಮಿಳುನಾಡಿನಲ್ಲಿ ಜೂನ್ 7ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಇಲ್ಲಿ ಕಟ್ಟುನಿಟ್ಟಿನ ಕೊರೋನಾ ಲಾಕ್​ಡೌನ್ ಜಾರಿಯಲ್ಲಿದ್ದು, ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆದು, ನಿಗದಿತ ಸಮಯದವರೆಗೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

  ಮಹಾರಾಷ್ಟ್ರ:
  ಮಹಾರಾಷ್ಟ್ರದಲ್ಲಿ ಏಪ್ರಿಲ್ 14ರಿಂದಲೂ ಲಾಕ್​ಡೌನ್ ರೀತಿಯ ನಿಯಮಗಳು ಜಾರಿಯಲ್ಲಿವೆ. ಜೂನ್ 1ರವರೆಗೆ ಇಲ್ಲಿ ಲಾಕ್​ಡೌನ್ ವಿಸ್ತರಿಸಲಾಗಿದೆ. ನಾಳೆಯ ಬಳಿಕ ಮತ್ತೆ ಲಾಕ್​ಡೌನ್ ಮುಂದುವರೆಯುವ ಲಕ್ಷಣಗಳೂ ಇವೆ.

  ಇದನ್ನೂ ಓದಿ: Karnataka Rain: ಕರ್ನಾಟಕದಲ್ಲಿ ಇಂದಿನಿಂದ 4 ದಿನ ಗುಡುಗು ಸಹಿತ ಮಳೆ; ಕರಾವಳಿಯಲ್ಲಿ ಹಳದಿ ಅಲರ್ಟ್​ ಘೋಷಣೆ

  ಗೋವಾ:
  ಗೋವಾದಲ್ಲಿ ಕೂಡ ಕೂನ್ 7ರ ಮುಂಜಾನೆ 7 ಗಂಟೆಯವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ. ಈ ಬಗ್ಗೆ ಅಲ್ಲಿನ ಮುಖ್ಯಮಂತ್ರಿ ಪ್ರಮೋದ್ ಸಾವಾಂತ್ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬೇರಾವ ಅಂಗಡಿಗಳೂ ಗೋವಾದಲ್ಲಿ ಓಪನ್ ಇಲ್ಲ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಸಮಯ ನಿಗದಿ ಮಾಡಲಾಗಿದೆ.

  ಆಂಧ್ರ ಪ್ರದೇಶ:

  ಆಂಧ್ರ ಪ್ರದೇಶದಲ್ಲಿ ಕಳೆದೊಂದು ತಿಂಗಳಿಂದ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿವೆ. ತಿರುಪತಿ ಮತ್ತು ಚಿತ್ತೂರಿನಲ್ಲಿ ಸಂಪೂರ್ಣ ಲಾಕ್​ಡೌನ್ ಜಾರಿಯಲ್ಲಿದೆ. ಜೂನ್ 1ರಿಂದ ಜೂನ್ 15ರವರೆಗೆ ಮತ್ತೆ ಕಠಿಣ ನಿಯಮಗಳು ವಿಸ್ತರಣೆಯಾಗುವ ಸಾಧ್ಯತೆಯಿದೆ.

  ಉಳಿದಂತೆ ಅರುಣಾಚಲ ಪ್ರದೇಶ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ರಾಜ್ಯಗಳಲ್ಲೂ ಜೂನ್ 6 ಅಥವಾ ಜೂನ್ 7ರವರೆಗೆ ಲಾಕ್​ಡೌನ್ ವಿಸ್ತರಣೆಯಾಗಿದೆ. ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಜೂನ್ 11ರವರೆಗೆ ಲಾಕ್​ಡೌನ್ ಇರಲಿದೆ. ಒರಿಸ್ಸಾದಲ್ಲಿ ಜೂನ್ 17ರವರೆಗೆ ಲಾಕ್​ಡೌನ್ ಇರಲಿದೆ.

  ಕರ್ನಾಟಕದಲ್ಲಿ ನಿನ್ನೆ ಕೊರೊನಾ ಕೇಸ್ ಇಳಿಕೆಯಾಗಿದ್ದು, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ 16 ಸಾವಿರ ಕೊರೊನಾ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಸೋಮವಾರ 16,604 ಪ್ರಕರಣಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ ಬರೋಬ್ಬರಿ 411 ಜನ ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 3992 ಕೇಸ್ ಪತ್ತೆಯಾಗಿವೆ. ತಜ್ಞರ ಪ್ರಕಾರ, ಮುಂದಿನ ಕನಿಷ್ಠ 10 ರಿಂದ 14 ದಿನ ಬಹಳ ಕಷ್ಟಕರವಾದ ದಿನವಾಗಿದ್ದುಮ, ಸೋಂಕು ಹೆಚ್ಚು ಉಲ್ಬಣಗೊಳ್ಳಲಿದೆ. ಈ ಹಿನ್ನಲೆ ರಾಜ್ಯದಲ್ಲಿ ಲಾಕ್​ಡೌನ್​ ಮಹತ್ವದ ಪಾತ್ರ ನಿರ್ವಹಿಸಲಿದೆ ಎನ್ನಲಾಗುತ್ತಿದೆ.
  Published by:Sushma Chakre
  First published: