ಕೊರೋನಾ ಲಾಕ್​ಡೌನ್​​: ವಲಸೆ ಕಾರ್ಮಿಕರಿಗೆ ರೇಷನ್ ಕಾರ್ಡ್​ ನೀಡುವಂತೆ ಡಿಸಿಎಂ ಕಾರಜೋಳ ಸೂಚನೆ

ಬೇರೆ ರಾಜ್ಯಗಳಿಗೆ ದುಡಿಯಲು ಹೋಗಿದ್ದ 30 ಸಾವಿರಕ್ಕೂ ಹೆಚ್ಚು ಮಂದಿ ಮರಳಿಗೆ ಜಿಲ್ಲೆಗೆ ಬಂದಿದ್ದಾರೆ. ಮಹಾರಾಷ್ಟ್ರದಿಂದ 1000 ಜನರ ಪೈಕಿ ಈಗಾಗಲೇ 571 ಜನ ಬಂದಾಗಿದೆ. ಇವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಕ್ರಮವಹಿಸಲಾಗುತ್ತಿದೆ. ಜತೆಗೆ ಮುಂಜಾಗೃತ ಕ್ರಮವಾಗಿ ಹೋಮ್​​ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ.

 • Share this:
  ಬಾಗಲಕೋಟೆ(ಮೇ.17): ದೇಶದ ವಿವಿಧ ಭಾಗಗಳಿಂದ ರಾಜ್ಯಕ್ಕೆ ಉದ್ಯೋಗ ಅರಸಿ ಬಂದಿರುವ ವಲಸೆ ಕಾರ್ಮಿಕರಿಗೆ ಜಾಬ್ ಕಾರ್ಡ್ ಮತ್ತು ರೇಷನ್​​​ ಕಾರ್ಡ್​​​ ನೀಡಲು ತುರ್ತು ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಕಾರಜೋಳ, ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ಇಲ್ಲದಿದ್ದರೇ ಕೂಡಲೇ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದರು.

  ಕೊರೋನಾ ಲಾಕ್​ಡೌನ್​​ನಿಂದ ಸಂಕಷ್ಟಕ್ಕೀಡಾದ ವಲಸೆ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್​​​​ಗಳನ್ನು ಘೋಷಿಸಿವೆ. ಅತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ 20 ಲಕ್ಷ ಕೋಟಿ ರೂ. ಪ್ಯಾಕೇಜ್​​ ಘೋಷಿಸಿದರೆ, ಇತ್ತ ರಾಜ್ಯ ಸರ್ಕಾರ 2,227 ಕೋಟಿ ರೂ.ಗಳ ಮೂರು ಹಂತದ ಪ್ಯಾಕೇಜ್ ಘೋಷಿಸಿದೆ. ಇದಕ್ಕೆ ನಾನು ಅಭಿನಂದನೆಗಳು ಎಂದು ಕಾರಜೋಳ ಸಂತಸ ವ್ಯಕ್ತಪಡಿಸಿದ್ದಾರೆ.

  ಬೇರೆ ರಾಜ್ಯಗಳಿಗೆ ದುಡಿಯಲು ಹೋಗಿದ್ದ 30 ಸಾವಿರಕ್ಕೂ ಹೆಚ್ಚು ಮಂದಿ ಮರಳಿಗೆ ಜಿಲ್ಲೆಗೆ ಬಂದಿದ್ದಾರೆ. ಮಹಾರಾಷ್ಟ್ರದಿಂದ 1000 ಜನರ ಪೈಕಿ ಈಗಾಗಲೇ 571 ಜನ ಬಂದಾಗಿದೆ.  ಇವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಕ್ರಮವಹಿಸಲಾಗುತ್ತಿದೆ. ಜತೆಗೆ ಮುಂಜಾಗೃತ ಕ್ರಮವಾಗಿ ಹೋಮ್​​ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದರು.

  ಇನ್ನು, ಕೇಂದ್ರ ಸರ್ಕಾರವೂ ಉದ್ಯೋಗ ಖಾತ್ರಿ ಯೋಜನೆಯಡಿ 204 ಕೋಟಿ ರೂ. ಬಾಗಲಕೋಟೆಗೆ ನೀಡಿದೆ. ಹೀಗಾಗಿ ಸ್ಥಳೀಯವಾಗಿಯೇ ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಭರವಸೆ ನೀಡಿದರು.

  ರೈತರು ಬೆಳೆದ ಮೆಕ್ಕೆಜೋಳದ ದರ ಇಳಿಮುಖವಾಗಿದೆ. ಹೀಗಾಗಿ ಅಂತಹ ರೈತರಿಗೆ 5 ಸಾವಿರ ರೂ. ಸಹಾಯಧನ ನೀಡಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಜಿಲ್ಲೆಯ 61 ಸಾವಿರ ರೈತರಿಗೆ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದರು.
  First published: