ಭಾರತದಲ್ಲಿ 199ಕ್ಕೆ ಏರಿಕೆಯಾದ ಕೊರೋನಾ ಸಾವಿನ ಸಂಖ್ಯೆ; 6,412 ಜನರಿಗೆ ತಗುಲಿದೆ ಸೋಂಕು!

ಲಾಕ್‌ಡೌನ್‌ ನಡುವೆಯೂ ದಿನೇ ದಿನೇ ಹೊಸ ಪ್ರಕರಣಗಳು ದಾಖಲಾಗುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 678 ಹೊಸ ಪ್ರಕರಣಗಳು ದಾಖಲಾಗಿವೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
ನವ ದೆಹಲಿ (ಏಪ್ರಿಲ್ 10); ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 33 ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ, 6.412 ಜನಕ್ಕೆ ಈ ಸೋಂಕು ತಗುಲಿರುವುದು ದೃಢವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಲಾಕ್‌ಡೌನ್‌ ನಡುವೆಯೂ ದಿನೇ ದಿನೇ ಹೊಸ ಪ್ರಕರಣಗಳು ದಾಖಲಾಗುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 678 ಹೊಸ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 5,709 ಪ್ರಕರಣಗಳು ಇನ್ನೂ ಆಕ್ಟೀವ್ ಆಗಿದ್ದು 503 ಜನ ಮಾತ್ರ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಭಾರತದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ ಅಧಿಕವಾಗಿದ್ದು ಕೇಂದ್ರ ಸರ್ಕಾರ ಲಾಕ್‌ಡೌನ್ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನೂ ಮೆರಿಕದಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ 1,783 ಜನ ಕೊರೋನಾ ಸೋಂಕಿಗೆ ಬಲಿಯಾಗಿದ್ದು ಒಟ್ಟಾರೆ ಸಾವಿನ ಸಂಖ್ಯೆ 17000ಕ್ಕೆ ಏರಿಕೆಯಾಗಿದೆ. ವಿಶ್ವದಾದ್ಯಂತ ಸಾವಿನ ಸಂಖ್ಯೆ 1 ಲಕ್ಷ ದಾಟುವ ಎಲ್ಲಾ ಸೂಚನೆ ಲಭ್ಯವಾಗುತ್ತಿದೆ.

ಇದನ್ನೂ ಓದಿ : ಕೊರೋನಾ ಸೋಂಕಿಗೆ ಅಸ್ಸಾಂನಲ್ಲಿ ಮೊದಲ ಬಲಿ; ಈಶಾನ್ಯ ರಾಜ್ಯಗಳಲ್ಲೂ ಭೀತಿಯ ವಾತಾವರಣ
First published: