ಭಾರತದಲ್ಲಿ 50ಕ್ಕೇರಿದ ಕೊರೋನಾ ಸಾವಿನ ಸಂಖ್ಯೆ; 2000 ಗಡಿದಾಟಿದ ಸೋಂಕಿತರು!

ಇದುವರೆಗೂ ಭಾರತದಲ್ಲಿ ಸುಮಾರು 2000 ಜನರಿಗೆ ಕೊರೋನಾ ಸೋಂಕು ಹರಡಿದಂತಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 335ಕ್ಕೆ ಏರಿಕೆಯಾಗಿದೆ. ಆಂಧ್ರಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ 9 ಹೊಸ ಕೇಸ್​ಗಳು ವರದಿಯಾಗಿವೆ. ಈವರೆಗೆ ಮೂರು ಜನ ಸಾವನ್ನಪ್ಪಿದ್ದಾರೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

  • Share this:
ದೇಶದಲ್ಲಿ ಕೊರೋನಾ ವೈರಸ್​​ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ದೇಶಾದ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್​ಡೌನ್​ಗೆ ಕರೆನೀಡಿದ್ದರೂ ಸೋಂಕಿತ ಪ್ರಕರಣಗಳೇನೂ ಕಡಿಮೆಯಾಗುತ್ತಿಲ್ಲ. ಇಂದು ಚಂಡೀಘಡ ಮತ್ತು ಗುಜರಾತ್‌ನಲ್ಲಿ ಮೃತಪಟ್ಟಿರುವ ವ್ಯಕ್ತಿಗಳನ್ನೂ ಸೇರಿಸಿ ಭಾರತದಲ್ಲಿ ಕೊರೋನಾ ಸಾವಿನ ಸಂಖ್ಯೆ 50ಕ್ಕೆ ಏರಿದೆ.

ಇದುವರೆಗೂ ಭಾರತದಲ್ಲಿ ಸುಮಾರು 2000 ಜನರಿಗೆ ಕೊರೋನಾ ಸೋಂಕು ಹರಡಿದಂತಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 335ಕ್ಕೆ ಏರಿಕೆಯಾಗಿದೆ. ಆಂಧ್ರಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 110ಕ್ಕೆ ಏರಿಕೆಯಾಗಿದ್ದು, ನಿನ್ನೆ ಒಂದೇ ದಿನ 9 ಹೊಸ ಕೇಸ್​ಗಳು ವರದಿಯಾಗಿವೆ. ಈವರೆಗೆ ಮೂರು ಜನ ಸಾವನ್ನಪ್ಪಿದ್ದಾರೆ.

ದೆಹಲಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಿಗೆ ಕೊರೋನಾ ವೈರಸ್ ಹರಡುತ್ತಿರುವುದರಿಂದ 150ಕ್ಕೂ ಹೆಚ್ಚು ಹೊಸ ಸೋಂಕಿತ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಸಭೆ ನಡೆದ ನಿಜಾಮುದ್ದೀನ್​ ಪ್ರದೇಶದ 1,800 ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ : ಸಭೆ ಸೇರಬಾರದು ಎಂಬುದೇ ನಮಗೆ ಗೊತ್ತಿರಲಿಲ್ಲ; ದೆಹಲಿ ನಿಜಾಮುದ್ದೀನ್ ಧರ್ಮ ಪ್ರಚಾರದಲ್ಲಿ ತೊಡಗಿದ್ದವರ ಅಳಲು!

First published: