Corona Death| ಆಮ್ಲಜನಕ ಕೊರತೆಯಿಂದಾದ ಸಾವುಗಳ ಬಗ್ಗೆ ತನಿಖೆಗೆ ದೆಹಲಿ ಸರ್ಕಾರ ಆಗ್ರಹ

ಕೊರೋನಾ ಎರಡನೇ ಅಲೆಯ ಸಮಯದಲ್ಲಿ ದೆಹಲಿಯ ಆಮ್ಲಜನಕದ ಬಿಕ್ಕಟ್ಟಿನ ಬಗ್ಗೆ ತಾನು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ ಮತ್ತು ಸಮಿತಿಯ ರಚನೆಯನ್ನು ಅನುಮೋದಿಸಲು ಲೆಫ್ಟಿನೆಂಟ್ ಗವರ್ನರ್‌ಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದೇನೆ ಎಂದು ಸಿಸೋಡಿಯಾ ಹೇಳಿದ್ದಾರೆ.

ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ.

ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ.

  • Share this:
    ನವ ದೆಹಲಿ (ಆಗಸ್ಟ್​ 16); ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಅನೇಕರು ಸಾವನ್ನಪ್ಪಿದ್ದರು. ಕೇಂದ್ರ ಸರ್ಕಾರ ಸೂಕ್ತ ಸಮಯದಲ್ಲಿ ಆಮ್ಲಜನಕ ಪೂರೈಕೆ ಮಾಡದ ಕಾರಣ ಈ ಅನಾಹುತ ಸಂಭವಿಸಿದೆ ಎಂದು ದೆಹಲಿಯ ಖಾಸಗಿ ಆಸ್ಪತ್ರೆಗಳೇ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದವು. ಅಲ್ಲದೆ, ಆಮ್ಲಜನಕ ಪೂರೈಕೆ ಮಾಡುವಂತೆಯೂ ಮನವಿ ಮಾಡಿದ್ದವು. ಈ ಸುದ್ದಿ ಇಡೀ ದೇಶದಾದ್ಯಂತ ದೊಡ್ಡ ಸುದ್ದಿ ಮಾಡಿತ್ತು. ಇದೀಗ ಕೊರೊನಾ ಎರಡನೇ ಅಲೆಯ ಸಮಯ ದೆಹಲಿಯಲ್ಲಿ ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಬಗ್ಗೆ ತನಿಖೆ ಮಾಡಲು, ಉನ್ನತ ಮಟ್ಟದ ಸಮಿತಿಯ ರಚನೆಯ ಕುರಿತ ಕಡತವನ್ನು ದೆಹಲಿ ಸರ್ಕಾರ ಮತ್ತೊಮ್ಮೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಕಳುಹಿಸಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೋಮವಾರ ತಿಳಿಸಿದ್ದಾರೆ.

    ಕೊರೋನಾ ಎರಡನೇ ಅಲೆಯ ಸಮಯದಲ್ಲಿ ದೆಹಲಿಯ ಆಮ್ಲಜನಕದ ಬಿಕ್ಕಟ್ಟಿನ ಬಗ್ಗೆ ತಾನು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ ಮತ್ತು ಸಮಿತಿಯ ರಚನೆಯನ್ನು ಅನುಮೋದಿಸಲು ಲೆಫ್ಟಿನೆಂಟ್ ಗವರ್ನರ್‌ಗೆ ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದೇನೆ ಎಂದು ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

    "ಒಕ್ಕೂಟ ಸರ್ಕಾರ ಮತ್ತು ನ್ಯಾಯಾಲಯಗಳು ಆಮ್ಲಜನಕ ಕೊರತೆಯಿಂದಾಗಿ ಉಂಟಾದ ಸಾವಿನ ಸಂಖ್ಯೆಯನ್ನು ತಿಳಿಯಲು ಬಯಸುತ್ತವೆ. ಆದರೆ ಎರಡನೇ ಅಲೆಯ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ ಜನರ ನಿಖರವಾದ ಸಂಖ್ಯೆಯನ್ನು ಕಂಡುಹಿಡಿಯಲು ಸಾಧ್ಯವಿಲ್ಲ.

    ಆದ್ದರಿಂದ, ನಾನು ಮತ್ತೊಮ್ಮೆ ಲೆಫ್ಟಿನೆಂಟ್ ಗವರ್ನರ್‌ಗೆ ಆಮ್ಲಜನಕ ಬಿಕ್ಕಟ್ಟಿನಿಂದ ಉಂಟಾದ ಸಾವುಗಳನ್ನು ತನಿಖೆ ಮಾಡಲು ಸಮಿತಿಯ ರಚನೆಗೆ ಸಂಬಂಧಿಸಿದ ಕಡತಗಳನ್ನು ಕಳುಹಿಸಿದ್ದೇನೆ" ಎಂದು ಸಿಸೋಡಿಯಾ ತಿಳಿಸಿದ್ದಾರೆ.

    "ಲೆಫ್ಟಿನೆಂಟ್ ಗವರ್ನರ್​​ ಇದಕ್ಕೆ ಶೀಘ್ರದಲ್ಲೇ ಅನುಮತಿ ನೀಡಬಹುದು ಎಂದು ನಾನು ಭಾವಿಸುತ್ತೇನೆ" ಎಂದು ಮನೀಶ್ ಸಿಸೋಡಿಯಾ ಅವರು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: ಬಿಜೆಪಿಯವರ ಜನಾಶೀರ್ವಾದ ಯಾತ್ರೆಯಲ್ಲಿ ಕೊರೋನಾ ಸೋಂಕು ತಗಲುವುದಿಲ್ಲವೇ? ; ಕಾಂಗ್ರೆಸ್ ಕಿಡಿ

    ಆಮ್ಲಜನಕ ಸಂಬಂಧಿತ ಸಾವುಗಳ ತನಿಖೆ ಮಾಡಲು ಸಮಿತಿಯ ರಚನೆಗೆ ಮತ್ತು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅನುಮೋದನೆ ನೀಡಿಲ್ಲ ಎಂದು ಸಿಸೋಡಿಯಾ ಈ ಹಿಂದೆ ಹೇಳಿದ್ದರು.

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
    Published by:MAshok Kumar
    First published: