HOME » NEWS » Coronavirus-latest-news » DELHI HEALTH MINISTER SATYENDRA JAIN TESTS CORONAVIRUS NEGATIVE SCT

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ಗೆ ಕೊರೋನಾ ನೆಗೆಟಿವ್

ಕೆಲವು ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಕೂಡ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅವರು ಹೋಂ ಕ್ವಾರಂಟೈನ್​ನಲ್ಲಿದ್ದರು.

Sushma Chakre | news18-kannada
Updated:June 16, 2020, 2:42 PM IST
ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ಗೆ ಕೊರೋನಾ ನೆಗೆಟಿವ್
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್
  • Share this:
ನವದೆಹಲಿ (ಜೂ. 16): ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ನಿನ್ನೆ ರಾತ್ರಿ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ಅವರನ್ನು ದೆಹಲಿಯ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಬೆಳಗ್ಗೆ ಅವರಿಗೆ ಕೊರೋನಾ ತಪಾಸಣೆ ನಡೆಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಸತ್ಯೇಂದ್ರ ಜೈನ್ ಅವರಿಗೆ ಕೊರೋನಾ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಷಾ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂತಾದವರೊಂದಿಗೆ ಸಭೆ ನಡೆಸಿದ ಮಾರನೇ ದಿನವೇ ಸತ್ಯೇಂದ್ರ ಜೈನ್ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇದರಿಂದ ಆತಂಕ ಇನ್ನೂ ಹೆಚ್ಚಾಗಿತ್ತು. ಆದರೆ, ಸತ್ಯೇಂದ್ರ ಜೈನ್ ಅವರ ವೈದ್ಯಕೀಯ ವರದಿಯಲ್ಲಿ ಕೊರೋನಾ ನೆಗೆಟಿವ್ ಬಂದಿರುವುದರಿಂದ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ: ಲಡಾಖ್​ನಲ್ಲಿ ಭಾರತದ ಸೇನೆ ಮೇಲೆ ಚೀನಾ ಗುಂಡಿನ ದಾಳಿ; ಓರ್ವ ಅಧಿಕಾರಿ, ಇಬ್ಬರು ಸೈನಿಕರ ಸಾವು

ದೆಹಲಿಯಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ಕೂಡ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅವರು ಹೋಂ ಕ್ವಾರಂಟೈನ್​ನಲ್ಲಿದ್ದರು. ಅವರ ವೈದ್ಯಕೀಯ ವರದಿಯಲ್ಲಿ ಕೂಡ ಕೊರೋನಾ ನೆಗೆಟಿವ್ ಬಂದಿತ್ತು. ಸತ್ಯೇಂದ್ರ ಜೈನ್ ಅವರಿಗೆ ಜ್ವರ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವ ಮೂಲಕ ದೆಹಲಿ ಸರ್ಕಾರದಲ್ಲಿ ಎರಡನೇ ಬಾರಿಗೆ ಕೊರೋನಾ ಆತಂಕ ಸೃಷ್ಟಿಯಾಗಿತ್ತು.
Youtube Video

ಈ ಬಗ್ಗೆ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ 55 ವರ್ಷದ ದೆಹಲಿ ಆಮ್ ಆದ್ಮಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ತೀವ್ರ ಜ್ವರದಿಂದ ನಿನ್ನೆ ರಾತ್ರಿ ನಾನು ದೆಹಲಿಯ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಆರೋಗ್ಯದ ಬಗ್ಗೆ ನಿಮಗೆ ಮಾಹಿತಿ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದರು.
First published: June 16, 2020, 2:42 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories