HOME » NEWS » Coronavirus-latest-news » DELHI POLICE CLEAR ICONIC SHAHEEN BAGH PROTEST SITE AMID COVID 19 OUTBREAK RMD

ಕೊರೋನಾ ಭೀತಿ ಹಿನ್ನೆಲೆ; ಶಾಹೀನ್​ಬಾಗ್​ನಲ್ಲಿ ಪ್ರತಿಭಟನಾಕಾರರನ್ನು ತೆರವುಗೊಳಿಸಿದ ಪೊಲೀಸರು

ಯಾವುದೇ ಕಾರಣಕ್ಕೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಾ ನಿರತರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಒತ್ತಾಯಪೂರ್ವಕವಾಗಿ ಪ್ರತಿಭಟಾನಾಕಾರರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.

news18-kannada
Updated:March 24, 2020, 12:30 PM IST
ಕೊರೋನಾ ಭೀತಿ ಹಿನ್ನೆಲೆ; ಶಾಹೀನ್​ಬಾಗ್​ನಲ್ಲಿ ಪ್ರತಿಭಟನಾಕಾರರನ್ನು ತೆರವುಗೊಳಿಸಿದ ಪೊಲೀಸರು
ಸಾಂದರ್ಭಿಕ ಚಿತ್ರ
  • Share this:
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಕೊರೋನಾ ವೈರಸ್ ಭಾರತಕ್ಕೆ​ ಕಾಲಿಟ್ಟ ನಂತರ ಈ ಪ್ರತಿಭಟನೆ ಕೊಂಚ ಕಡಿಮೆ ಆಗಿತ್ತು. ಆದರೆ, ದೆಹಲಿಯ ಶಾಹೀನ್​ಬಾಗ್​ನಲ್ಲಿ ಮುಸ್ಲಿಂ ಮಹಿಳೆಯ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಮಾತ್ರ ನಿಂತಿರಲಿಲ್ಲ. ಈಗ ಕೊರೋನಾ ವೈರಸ್​ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಸ್ಥಳದಿಂದ ತೆರವುಗೊಳಿಸಿದ್ದಾರೆ. ಈ ಮೂಲಕ ಮೂರು ತಿಂಗಳ ನಿರಂತರ ಪ್ರತಿಭಟನೆಗೆ ತೆರೆ ಬಿದ್ದಿದೆ. 

ಭಾರತದಲ್ಲಿ ಮಾರಣಾಂತಿಕ ಕೊರೋನಾ ವೈರಸ್​​ಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಸುಮಾರು 471 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಇಡೀ ದೇಶಾದ್ಯಂತ ಕೇಂದ್ರಾಡಳಿತ ಪ್ರದೇಶಗಳು ಸೇರಿ  30 ರಾಜ್ಯಗಳ 548 ಜಿಲ್ಲೆಗಳಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ.

ಲಾಕ್​ಡೌನ್​ ಘೋಷಣೆಯಾದ ಬೆನ್ನಲ್ಲೇ ಪೊಲೀಸರು ಪ್ರತಿಭಟನೆ ಕೈಬಿಡುವಂತೆ ಕೇಳಿಕೊಂಡಿದ್ದರು. ಆದರೆ, ಈ ವೇಳೆ ಯಾವುದೇ ಕಾರಣಕ್ಕೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪ್ರತಿಭಟನಾ ನಿರತರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಒತ್ತಾಯಪೂರ್ವಕವಾಗಿ ಪ್ರತಿಭಟಾನಾಕಾರರನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ಹೆಚ್ಚಿದ ಕೊರೋನಾ ಭೀತಿ: 30 ರಾಜ್ಯಗಳ 548 ಜಿಲ್ಲೆಗಳು ಲಾಕ್​ಡೌನ್​

ಶಾಹೀನ್​​ಬಾಗ್​​ ಪ್ರತಿಭಟನೆಯಿಂದ ದೆಹಲಿ-ನೋಯ್ಡಾ ಹೆದ್ದಾರಿಯೂ ಬಹುತೇಕ ಬಂದ್ ಆಗಿತ್ತು. ದೆಹಲಿ ಪ್ರಮುಖ ರಸ್ತೆಗಳಿಗೆ ಹಾದು ಹೋಗುವ ಶಾಹೀನ್​​ ಬಾಗ್​​ನಲ್ಲೇ ನಿರಂತರ ಪ್ರತಿಭಟನೆಗಳು ನಡೆಯುತ್ತಿರುವ ಕಾರಣ ಸಂಚಾರ ದಟ್ಟಣೆ ತೀವ್ರಗೊಂಡಿತ್ತು. ಆದರೆ, ಈಗ ಪ್ರತಿಭಟನಾಕಾರನ್ನು ಸ್ಥಳದಿಂದ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಪುನರಾರಂಭಗೊಳ್ಳಲಿದೆ.
First published: March 24, 2020, 12:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories