Delta Plus Variant in India: ಮೂರು ರಾಜ್ಯಗಳಲ್ಲಿ ಭಯಾನಕ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್ ಪತ್ತೆ

ಭಾರತದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿವೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
    ನವದೆಹಲಿ(ಜೂ.22): ಭಾರತವು ಕೊರೋನಾ 2ನೇ ಅಲೆಯ ವಿರುದ್ಧ ಹೋರಾಡುತ್ತಿರುವ ಸಮಯದಲ್ಲೇ, ಡೆಲ್ಟಾ ರೂಪಾಂತರಿ ವೈರಸ್​ ಹರಡುವಿಕೆಯನ್ನು ನಿಯಂತ್ರಿಸಲು ಯತ್ನಿಸುತ್ತದೆ. ಕೋವಿಡ್ ಸಾಂಕ್ರಾಮಿಕ ಡೆಲ್ಟಾ ರೂಪಾಂತರವು ‘ಡೆಲ್ಟಾ ಪ್ಲಸ್(Delta Plus) ಅಥವಾ ಎವೈ.1(AY.1) ರೂಪಾಂತರವಾಗಿ ಪರಿವರ್ತನೆಗೊಂಡಿದೆ. ಇದು ಬಹಳ ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಡೆಲ್ಟಾ ಪ್ಲಸ್ ಅಥವಾ ಬಿ.1.617.2.1(B.1.617.2.1) ರೂಪಾಂತರಿ ಭಾರತದಲ್ಲಿ ಮೊದಲು ಪತ್ತೆಯಾಗಿದ್ದು ಇದು ಕೊರೋನಾ ಎರಡನೇ ಅಲೆಗೆ ಕಾರಣವಾಗಿತ್ತು. ಹೊಸ ರೂಪಾಂತರದಿಂದಾಗಿ (corona virus variant) ರೋಗದ ತೀವ್ರತೆಯ ಹೆಚ್ಚಾಗುವ ಸಾಧ್ಯತೆ ಇದೆ. ಭಾರತದಲ್ಲಿ ಇತ್ತೀಚೆಗೆ ಅನುಮೋದನೆ ಪಡೆದ ಆ್ಯಂಟಿಬಾಡಿ ಕಾಕ್ಟೈಲ್ ಮೊನೊಕ್ಲೋನಲ್ ಕೊರೋನಾ ವೈರಸ್ ಡೆಲ್ಟಾ ಪ್ಲಸ್ ನಿರೋಧಕವಾಗಿದೆ.

    ಭಾರತದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿವೆ.

    ಮಹಾರಾಷ್ಟ್ರ

    ಮಹಾರಾಷ್ಟ್ರದಲ್ಲಿ ಈವರೆಗೆ 21 ಡೆಲ್ಟಾ ಪ್ಲಸ್ ರೂಪಾಂತರಿ ಕೇಸ್​ಗಳು ಕಾಣಿಸಿಕೊಂಡಿವೆ ಎಂದು ರಾಜ್ಯದ ಆರೋಗ್ಯ ಸಚಿವ ರಾಜೇಶ್​ ತೋಪ್ ಹೇಳಿದ್ದಾರೆ. ಇವುಗಳಲ್ಲಿ 9 ಪ್ರಕರಣಗಳು ಜಲ್ಗಾನ್​ನಲ್ಲಿ, 7 ಪ್ರಕರಣಗಳು ಮುಂಬೈನಲ್ಲಿ ಮತ್ತು ಒಂದೊಂದು ಪ್ರಕರಣಗಳು ಸಿಂದುದರ್ಗ್​​, ಥಾಣೆ ಮತ್ತು ಪಾಲ್ಗಾರ್​ ಜಿಲ್ಲೆಗಳಲ್ಲಿ ಪತ್ತೆಯಾಗಿವೆ ಎಂದು ತೋಪ್​ ತಿಳಿಸಿದ್ದಾರೆ.

    ಇದನ್ನೂ ಓದಿ:Bengaluru Fraud: ಸಿಕ್ಸ್ ಪ್ಯಾಕ್ ಆಸೆಗೆ 6 ಲಕ್ಷ ಕಳ್ಕೊಂಡ ಬೆಂಗಳೂರು ಟೆಕ್ಕಿ ! ಮೋಸ ಹೋಗಿದ್ದು ಹೀಗೆ..

    ಪ್ರತಿಯೊಂದು ಜಿಲ್ಲೆಯಲ್ಲೂ 100 ಸ್ಯಾಂಪಲ್​ಗಳನ್ನು ಪಡೆದು ಪರೀಕ್ಷೆಗೆ ಕಳುಹಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಕಳೆದ ಮೇ 15ರಿಂದ 7,500 ಸ್ಯಾಂಪಲ್​ಗಳನ್ನು ಸಂಗ್ರಹಿಸಲಾಗಿದ್ದು, ಅವುಗಳಲ್ಲಿ 21 ಕೇಸ್​​ಗಳಲ್ಲಿ ಡೆಲ್ಟಾ ಪ್ಲಸ್​ ವೈರಸ್​​ ಕಂಡು ಬಂದಿದೆ ಎಂದು ತೋಪ್ ತಿಳಿಸಿದ್ದಾರೆ. ಸೋಂಕಿತರ ವ್ಯಾಕ್ಸಿನೇಷನ್​ ಸ್ಥಿತಿ ಮತ್ತು ಅವರ ಟ್ರಾವೆಲ್​ ಹಿಸ್ಟರಿಯನ್ನು ಕಲೆ ಹಾಕಲಾಗಿದೆ ಎಂದು ಹೇಳಿದರು.

    ಕೇರಳ

    ಕೇರಳದಲ್ಲೂ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಸಂಗ್ರಹಿಸಲಾದ ಸ್ಯಾಂಪಲ್​ಗಳಲ್ಲಿ ಪಲಕ್ಕಾಡ್​​​​ ಮತ್ತು ಪತನಮಿತ್ತ ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​​ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇರಳ ಸರ್ಕಾರದ ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಈ ಜಿಲ್ಲೆಗಳಲ್ಲಿ ಸೋಂಕನ್ನು ನಿಯಂತ್ರಿಸಲು ಸರ್ಕಾರ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ:Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ

    ಪಲಕ್ಕಾಡ್​ನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದರೆ, ಪತನಮಿತ್ತ ಜಿಲ್ಲೆಯಲ್ಲಿ ಒಂದು ಕೇಸ್ ಪತ್ತೆಯಾಗಿದೆ. 4 ವರ್ಷದ ಬಾಲಕನಲ್ಲಿ ಡೆಲ್ಟಾ ಪ್ಲಸ್​ ವೈರಸ್ ಪತ್ತೆಯಾಗಿದೆ ಎಂದು ಪತನಮಿತ್ತ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ನರಸಿಂಹಹುಗಾರಿ ಟಿ.ಎಲ್​.ರೆಡ್ಡಿ ತಿಳಿಸಿದ್ದಾರೆ.

    ಮಧ್ಯಪ್ರದೇಶ

    ಭಾರತದಲ್ಲಿ ಮೊದಲ ಬಾರಿಗೆ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್ ಪ್ರಕರಣ ಪತ್ತೆಯಾಗಿದ್ದು ಮಧ್ಯಪ್ರದೇಶದಲ್ಲಿ. ಭೂಪಾಲ್​ನ 65 ವರ್ಷದ ಮಹಿಳೆಯಲ್ಲಿ ಈ ರೂಪಾಂತರಿ ವೈರಸ್​ ಪತ್ತೆಯಾಗಿತ್ತು. ಇವರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಹೋಂ ಐಸೋಲೇಷನ್​ನಲ್ಲಿದ್ದರು. ಜೊತೆಗೆ ಎರಡು ಡೋಸ್ ವ್ಯಾಕ್ಸಿನ್​ ಕೂಡ ಪಡೆದಿದ್ದರು. ಮೇ 23ರಂದು ಮಹಿಳೆಯ ಸ್ಯಾಂಪಲ್ಸ್​ ಸಂಗ್ರಹ ಮಾಡಲಾಗಿತ್ತು. ಜೂನ್​ 16ರಂದು ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​ ಪಾಸಿಟಿವ್ ಬಂದಿತ್ತು.

    ಜೂನ್​ 17ರಂದು ಮಹಿಳೆಗೆ ಡೆಲ್ಟಾ ಪ್ಲಸ್​ ರೂಪಾಂತರಿ ವೈರಸ್​ ಇರುವುದು ದೃಢಪಟ್ಟಿತ್ತು. ಆದರೆ ಆ ಸೋಂಕಿತೆ ಮಾಹಿತಿ ನೀಡಲು ನಿರಾಕರಿಸಿದರು ಎಂದು ಮಧ್ಯಪ್ರದೇಶದ ವೈದ್ಯಕೀಯ ಶೈಕ್ಷಣಿಕ ಸಚಿವ ವಿಶ್ವಾಸ್ ಸಾರಂಗ್​​ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

    ಶಿವಪುರಿ ಜಿಲ್ಲೆಯಲ್ಲಿ ನಾಲ್ಕು ಮಂದಿಯಲ್ಲಿ ಡೆಲ್ಟಾ ಪ್ಲಸ್​ ವೈರಸ್​ ಪತ್ತೆಯಾಗಿದೆ. ಎಲ್ಲರೂ ಸಹ ವ್ಯಾಕ್ಸಿನ್​ ಪಡೆದಿದ್ದು, ಸೋಂಕಿನ ವಿರುದ್ಧ ಹೋರಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
    Published by:Latha CG
    First published: