ಕೊರೋನಾ ತಗುಲಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೆ ಸೋಂಕು

ಕೊರೋನಾ ತಗುಲಿರುವ ವ್ಯಕ್ತಿಗಳಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್​ ಘೋಷಿಸಿದ್ದಾರೆ. ಈವರೆಗೆ ಉತ್ತರ ಪ್ರದೇಶ ವಿಮಾನ ನಿಲ್ದಾಣದಲ್ಲಿ 19,473 ಜನರನ್ನು ತಪಾಸಣೆ ಮಾಡಲಾಗಿದೆ. ಗಡಿಭಾಗದಲ್ಲಿ 12.81 ಲಕ್ಷ ಜನರನ್ನು ಪರೀಕ್ಷಿಸಲಾಗಿದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ಲಕ್ನೋ (ಮಾ.18): ವಿಶ್ವಾದ್ಯಂತ ಹರಡುತ್ತಿರುವ ಕೊರೋನಾ ವೈರಸ್​​ಗೆ ಸಾವಿರಾರು ಮಂದಿ ಬಲಿಯಾಗಿದ್ದಾರೆ. ಭಾರತದಲ್ಲಿ 100ಕ್ಕೂ ಹೆಚ್ಚು ಜನರಲ್ಲಿ ಕೊರೋನಾ ವೈರಸ್​ ಇರುವುದು ದೃಢಪಟ್ಟಿದೆ. ಒಟ್ಟು ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಲಕ್ನೋದಲ್ಲಿ ಕೊರೋನಾ ಸೋಂಕಿತ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೆ ವೈರಸ್​ ತಗುಲಿದೆ.

  ಲಕ್ನೋದ ಜಾರ್ಜ್​ ಮೆಡಿಕಲ್​ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಕೊರೋನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಲ್ಲಿ ಕಿರಿಯ ವೈದ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಆಸ್ಪತ್ರೆಯ ವಕ್ತರಾ ಸುಧೀರ್​ ಸಿಂಗ್​ ಹೇಳಿದ್ದಾರೆ.

  ಕರ್ನಾಟಕದ ಕಲಬುರಗಿಯಲ್ಲೂ ಸಹ ಕೊರೋನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೆ ಕೊರೋನಾ ತಗುಲಿತ್ತು. ಬಳಿಕ ಅವರನ್ನು ಐಸೋಲೇಷನ್​ನಲ್ಲಿ ಇರಿಸಲಾಗಿತ್ತು. ಸೌದಿಯಿಂದ ಮರಳಿದ್ದ 76 ವರ್ಷದ ವ್ಯಕ್ತಿ ಕೊರೋನಾದಿಂದ ಸಾವನ್ನಪ್ಪಿದ್ದರು. ಇದು ಭಾರತದಲ್ಲಿ ಮೊದಲ ಕೊರೋನಾ ಸಾವಾಗಿತ್ತು. ಬಳಿಕ ಈ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಕೊರೋನಾ ಇರುವುದು ದೃಢವಾಗಿತ್ತು.

  ಎಲ್ಲಾ ಕೊರೋನಾ ಪೀಡಿತ ರೋಗಿಗಳನ್ನು ಆಸ್ಪತ್ರೆಯ ಐಸೋಲೇಷನ್ ವಾರ್ಡ್​​​ನಲ್ಲಿ ಇರಿಸಲಾಗಿದೆ. ಲಕ್ನೋದಲ್ಲಿ ಎರಡು ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಉತ್ತರ ಪ್ರದೇಶದಲ್ಲಿ ಎಲ್ಲಾ ಸ್ಪರ್ಧಾತ್ಮಕ ಮತ್ತು ಶೈಕ್ಷಣಿಕ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಜೊತೆಗೆ ಏಪ್ರಿಲ್​ 2ರವರೆಗೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್​ ಸರ್ಕಾರ ತಿಳಿಸಿದೆ.

  ಇದನ್ನು ಓದಿ: 276 ಅನಿವಾಸಿ ಭಾರತೀಯರಲ್ಲಿ ಮಾರಕ ಕೊರೋನಾ ಸೋಂಕು ಪತ್ತೆ; ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

  ಕೊರೋನಾ ತಗುಲಿರುವ ವ್ಯಕ್ತಿಗಳಿಗೆ ಸರ್ಕಾರದ ವತಿಯಿಂದ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಸಿಎಂ ಯೋಗಿ ಆದಿತ್ಯನಾಥ್​ ಘೋಷಿಸಿದ್ದಾರೆ. ಈವರೆಗೆ ಉತ್ತರ ಪ್ರದೇಶ ವಿಮಾನ ನಿಲ್ದಾಣದಲ್ಲಿ 19,473 ಜನರನ್ನು ತಪಾಸಣೆ ಮಾಡಲಾಗಿದೆ. ಗಡಿಭಾಗದಲ್ಲಿ 12.81 ಲಕ್ಷ ಜನರನ್ನು ಪರೀಕ್ಷಿಸಲಾಗಿದೆ.
  First published: