Doctors Protest: ಇಂದು ರಾತ್ರಿ 9 ಗಂಟೆಗೆ ಮೇಣದ ಬತ್ತಿ ಹೊತ್ತಿಸಿ ವೈದ್ಯರಿಂದ ಪ್ರತಿಭಟನೆ

ಈ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರವೂ ವೈದ್ಯರ ಮೇಲೆ ಹಲ್ಲೆ ನಡೆಸಿದರೆ ತಕ್ಷಣವೇ ಬಂಧಿಸಿ ಜೈಲಿಗೆ ಕಳುಹಿಸಲಾಗುವುದು. ಇಂತಹ ಕಠಿಣ ಸಂದರ್ಭದಲ್ಲಿ ರಾಜ್ಯದ ಯಾವುದೇ ಆಸ್ಪತ್ರೆಯ ವೈದ್ಯರಾಗಲಿ, ವೈದ್ಯ ಸಿಬ್ಬಂದಿಗಳ ಮೇಲೆ ಯಾವುದೇ ವ್ಯಕ್ತಿ ಹಲ್ಲೆ ನಡೆಸಬಾರದು ಎಂದು ಆದೇಶಿಸಿತ್ತು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ನವದೆಹಲಿ(ಏ.22): ದೇಶಾದ್ಯಂತ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ತಮ್ಮ ಮೇಲೆಯೇ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸುತ್ತಿರುವುದನ್ನು ಖಂಡಿಸಿ ಇಂದು ರಾತ್ರಿ 9 ಗಂಟೆಗೆ ಮೇಣದ ಬತ್ತಿ ಹೊತ್ತಿಸಿ ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ಜತೆಗೆ ಇದರ ಮರುದಿನ ಅಂದರೆ ನಾಳೆ ಏಪ್ರಿಲ್​​ 23ನೇ ತಾರೀಕು ಕರಾಳ ದಿನಾಚರಣೆ ಮಾಡಲಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ ಕರೆ ಮೇರೆಗೆ ನಾಳೆ ವೈದ್ಯರು ಮುಖಕ್ಕೆ ಕಪ್ಪು ಬಟ್ಟೆ ಧರಿಸಿ ಕೆಲಸ ಮಾಡಲಿದ್ದಾರೆ.

    ಇತ್ತೀಚೆಗೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಕೊರೋನಾ ಸೋಂಕು ಪೀಡಿತನ್ನು ಪರೀಕ್ಷೆಗೊಳಪಡಿಸಲು ಮುಂದಾದಾಗ ವೈದ್ಯರ ಮೇಲೆ ಸ್ಥಳೀಯರು, ಸಾರ್ವಜನಿಕರು ಕಲ್ಲು ತೂರಾಟ ನಡೆಸಿ ಹಲ್ಲೆ ನಡೆಸಿರುವ ಹಲವು ಪ್ರಕರಣಗಳು ಬೆಳಕಿಗೆ ಬಂದಿದೆ. ಇದನ್ನು ಖಂಡಿಸುವ ಹಿನ್ನೆಲೆಯಲ್ಲಿ ಈ ಕರಾಳ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘವೂ ಸ್ಪಷ್ಟನೆ ನೀಡಿದೆ.

    ಮಧ್ಯಪ್ರದೇಶ, ಹೈದರಾಬಾದ್​, ದೆಹಲಿ, ಮುಂಬೈ ಸೇರಿದಂತೆ ಹಲವು ಕಡೆ ವೈದ್ಯರ ಮೇಲೆ ಕಲ್ಲು ತೂರಾಟ, ಎಂಜಲು ಉಗುಳುವುದು, ಬಾಯಿಗೆ ಬಂದತೆ ಬೈಯ್ಯುವ ಪ್ರಕರಣಗಳು ಕಂಡು ಬಂದಿದ್ದವು. ನಮ್ಮನ್ನು ಉಳಿಸಲು ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಎಷ್ಟು ಸರಿ ಎಂದು ಪ್ರಶ್ನಿಸಿದ್ದರು.

    ಇದನ್ನೂ ಓದಿ: ಏ. 22ರಂದು ಮೇಣದ ಬತ್ತಿ ಹೊತ್ತಿಸಿ ಪ್ರತಿಭಟಿಸಲಿರುವ ವೈದ್ಯರು; ಏ. 23ರಂದು ಕರಾಳ ದಿನ

    ಈ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರವೂ ವೈದ್ಯರ ಮೇಲೆ ಹಲ್ಲೆ ನಡೆಸಿದರೆ ತಕ್ಷಣವೇ ಬಂಧಿಸಿ ಜೈಲಿಗೆ ಕಳುಹಿಸಲಾಗುವುದು. ಇಂತಹ ಕಠಿಣ ಸಂದರ್ಭದಲ್ಲಿ ರಾಜ್ಯದ ಯಾವುದೇ ಆಸ್ಪತ್ರೆಯ ವೈದ್ಯರಾಗಲಿ, ವೈದ್ಯ ಸಿಬ್ಬಂದಿಗಳ ಮೇಲೆ ಯಾವುದೇ ವ್ಯಕ್ತಿ ಹಲ್ಲೆ ನಡೆಸಬಾರದು ಎಂದು ಆದೇಶಿಸಿತ್ತು.
    First published: