Donald Trump: ಅಮೆರಿಕ ಅಧ್ಯಕ್ಷೀಯ ಚುನಾವಣೆ ಮುಂದೂಡುವ ಯೋಚನೆಯಿಲ್ಲ; ಡೊನಾಲ್ಡ್ ಟ್ರಂಪ್ ಸ್ಪಷ್ಟನೆ

America Election: ನ. 3ರಂದು ನಡೆಯುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್ ಎದುರಾಳಿಯಾಗಿ ಅಮೆರಿಕದ ಮಾಜಿ ಉಪಾಧ್ಯಕ್ಷ ಜೋಯ್ ಬಿಡೆನ್ ಅವರು ಡೆಮಾಕ್ರಟಿಕ್ ಪಕ್ಷದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಡೊನಾಲ್ಡ್​ ಟ್ರಂಪ್​

ಡೊನಾಲ್ಡ್​ ಟ್ರಂಪ್​

  • Share this:
ನ್ಯೂಯಾರ್ಕ್ (ಏ. 28): ವಿಶ್ವದ ದೊಡ್ಡಣ್ಣನೆಂದೇ ಕರೆಸಿಕೊಳ್ಳುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅಧಿಕಾರಾವಧಿ ಕೆಲವೇ ತಿಂಗಳಲ್ಲಿ ಮುಗಿಯಲಿದೆ. ಬಹಳ ಹಿಂದೆಯೇ ಚುನಾವಣಾ ಪ್ರಚಾರಕ್ಕೆ ಸಿದ್ಧತೆ ನಡೆಸಿರುವ ಟ್ರಂಪ್ ಈ ಬಾರಿ ಕೂಡ ಅಧಿಕಾರದ ಗದ್ದುಗೆ ಏರುವ ಕನಸು ಕಂಡಿದ್ದಾರೆ. ಆದರೆ, ನ. 3ರಂದು ನಡೆಯಬೇಕಿದ್ದ ಅಮೆರಿಕದ ಅಧ್ಯಕ್ಷೀಯ ಚುನಾವಣೆ ದಿನಾಂಕ ಕೊರೋನಾ ವೈರಸ್​ನಿಂದಾಗಿ ಮುಂದಕ್ಕೆ ಹೋಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ, ಆ ಬಗ್ಗೆ ಸ್ಪಷ್ಟನೆ ನೀಡಿರುವ ಟ್ರಂಪ್, ಚುನಾವಣೆಯ ದಿನಾಂಕವನ್ನು ಬದಲಾಯಿಸುವುದಿಲ್ಲ ಎಂದಿದ್ದಾರೆ.

ಕೊರೋನಾ ವೈರಸ್​ ದಾಳಿಗೆ ನಲುಗಿರುವ ದೇಶಗಳ ಪೈಕಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ದಿನದಿಂದ ದಿನಕ್ಕೆ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ. ಅಮೆರಿಕದ ಕೊರೋನಾ ಪೀಡಿತರ ಸಂಖ್ಯೆ 10.10 ಲಕ್ಷಕ್ಕೆ ಏರಿಕೆಯಾಗಿದೆ. ಅಮೆರಿಕವೊಂದರಲ್ಲೇ 56,797 ಜನ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಅಮೆರಿಕದ ಅಧ್ಯಕ್ಷ ಸ್ಥಾನದ ಚುನಾವಣೆ ಮುಂದಕ್ಕೆ ಹೋಗಲಿದೆ ಎಂದು ಊಹಿಸಲಾಗಿತ್ತು.

ಇದನ್ನೂ ಓದಿ: ಕೊರೋನಾ ಬಗ್ಗೆ ಸುಳ್ಳು ಹೇಳುತ್ತಿರುವ ಚೀನಾ ವಿರುದ್ಧ ತನಿಖೆ ನಡೆಸಲಿದ್ದೇವೆ, ಪರಿಹಾರವನ್ನೂ ಕೇಳುತ್ತೇವೆ; ಡೊನಾಲ್ಡ್​ ಟ್ರಂಪ್​

ಆದರೆ, ಈ ಬಗ್ಗೆ ವೈಟ್​ ಹೌಸ್​ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ಅಮೆರಿಕದ ಚುನಾವಣಾ ದಿನಾಂಕವನ್ನು ಬದಲಾಯಿಸುವ ಬಗ್ಗೆ ನಾನು ಯೋಚನೆ ಕೂಡ ಮಾಡಿಲ್ಲ. ಅಷ್ಟಕ್ಕೂ ಚುನಾವಣಾ ದಿನಾಂಕವನ್ನು ಯಾಕೆ ಬದಲಾಯಿಸಬೇಕು? ನವೆಂಬರ್ 3 ಒಳ್ಳೆಯ ಸಂಖ್ಯೆಯಲ್ಲವೇ? ಎಂದು ಮರುಪ್ರಶ್ನೆ ಹಾಕಿದ್ದಾರೆ.

ನ. 3ರಂದು ನಡೆಯುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್ ಎದುರಾಳಿಯಾಗಿ ಅಮೆರಿಕದ ಮಾಜಿ ಉಪಾಧ್ಯಕ್ಷ ಜೋಯ್ ಬಿಡೆನ್ ಅವರು ಡೆಮಾಕ್ರಟಿಕ್ ಪಕ್ಷದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೋನಾ ಅಟ್ಟಹಾಸದಿಂದ ಅಮೆರಿಕ ಬಚಾವಾಗಲು ಹಲವು ತಿಂಗಳುಗಳೇ ಬೇಕಾಗುತ್ತದೆ. ಆದರೂ ನವೆಂಬರ್ 3ರ ಚುನಾವಣೆಯನ್ನು ಮುಂದೂಡುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.
Published by:Sushma Chakre
First published: