ಶಾಲೆ ತೆರೆಯಬೇಡಿ, ಈ ವರ್ಷವನ್ನು 'ಝೀರೋ ಅಕಾಡೆಮಿಕ್ ವರ್ಷ' ಎಂದು ಘೋಷಿಸಿ: ಶಿಕ್ಷಕರು, ಪೋಷಕರಿಂದ ಒತ್ತಾಯ

ಶಾಲೆಗಳನ್ನು ಆರಂಭಿಸಿದ ಕಾರಣಕ್ಕೆ ಇಸ್ರೇಲ್ ನಲ್ಲಿ‌‌‌‌ ಕೊರೋನಾ ಇನ್ನಷ್ಟು ಹರಡಿ ಇಡೀ ದೇಶವನ್ನೇ ಕಷ್ಟಕ್ಕೆ ಸಿಲುಕಿಸಿತ್ತು.‌ ಭಾರತದಲ್ಲಿ ಶಾಲೆಗಳನ್ನು ತೆರೆದರೆ ಏನಾಗಲಿದೆ ಎಂಬುದನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ(ಜೂ.10):ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಹರಡುವಿಕೆ ಶರವೇಗದಲ್ಲಿ ಸಾಗುತ್ತಿರುವುದರಿಂದ ಆತಂಕಗೊಂಡಿರುವ ಶಿಕ್ಷಕರು ಮತ್ತು‌ ಪೋಷಕರು ಈ ವರ್ಷ ಪೂರ್ತಿ ಶಾಲೆಗಳನ್ನು ತೆರೆಯುವುದು ಬೇಡ. ಈ ವರ್ಷವನ್ನು 'ಝೀರೋ ಅಕಾಡೆಮಿಕ್ ವರ್ಷ' ಎಂಬುದಾಗಿ ಘೋಷಿಸುವಂತೆ ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ದೆಹಲಿ ಸರ್ಕಾರಿ ಶಾಲಾ ಶಿಕ್ಷಕರ ಸಂಘ ಮತ್ತು ದೆಹಲಿಯ ವಿವಿಧ ಶಾಲೆಗಳಲ್ಲಿನ ಪೋಷಕರ ಸಂಘಗಳು ದೆಹಲಿ ಸರ್ಕಾರವನ್ನು ಈ ರೀತಿ ಆಗ್ರಹಿಸಿವೆ. ರಾಜ್ಯ ಸರ್ಕಾರವೇ ಕೊರೋನಾ ಹೆಚ್ಚಾಗುತ್ತಿದೆ ಎಂದು ಹೇಳುತ್ತಿದೆ. ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರೇ ಜುಲೈ ಅಂತ್ಯದ ವೇಳೆಗೆ ದೆಹಲಿಯ‌ 5.5 ಲಕ್ಷ ಜನ ಕೊರೋನಾ ಪೀಡಿತರಾಗಬಹುದು ಎಂದಿದ್ದಾರೆ.

ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ದೆಹಲಿಯ ಕೊರೋನಾ ಸಮುದಾಯಕ್ಕೂ ಹರಡಿದೆ ಎಂದಿದ್ದಾರೆ. ಮೇಲಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವತಃ ಐಸೋಲೇಷನ್ ನಲ್ಲಿದ್ದಾರೆ.‌ ಆದರೂ ಏಕೆ ಶಾಲೆ ತೆರೆಯಬೇಕು? ಈ‌ ಸಮಯದಲ್ಲಿ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದಿವೆ.

ಶಾಲೆಗಳನ್ನು ಆರಂಭಿಸಿದ ಕಾರಣಕ್ಕೆ ಇಸ್ರೇಲ್ ನಲ್ಲಿ‌‌‌‌ ಕೊರೋನಾ ಇನ್ನಷ್ಟು ಹರಡಿ ಇಡೀ ದೇಶವನ್ನೇ ಕಷ್ಟಕ್ಕೆ ಸಿಲುಕಿಸಿತ್ತು.‌ ಇಸ್ರೇಲ್ ನಲ್ಲಿ ಶಾಲೆ ತೆರೆದುದರಿಂದ ಆದ ಅನಾಹುತಗಳನ್ನು ಮರೆಯಬಾರದು. ಭಾರತದಲ್ಲಿ ಶಾಲೆಗಳನ್ನು ತೆರೆದರೆ ಏನಾಗಲಿದೆ ಎಂಬುದನ್ನು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರಿ ಶಾಲಾ ಶಿಕ್ಷಕರ ಸಂಘ ಮತ್ತು ದೆಹಲಿಯ ವಿವಿಧ ಶಾಲೆಗಳಲ್ಲಿನ ಪೋಷಕರ ಸಂಘಗಳು ಆತಂಕ ವ್ಯಕ್ತಪಡಿಸಿವೆ.

ಇದನ್ನೂ ಓದಿ : ದೆಹಲಿಯಲ್ಲಿ ಕೊರೋನಾ ಸೋಂಕು ಕಮ್ಯುನಿಟಿ ಸ್ಪ್ರೆಡ್ ಆಗಿದೆ; ಆದರೆ ಕೇಂದ್ರ ಸರ್ಕಾರ ಘೋಷಣೆ ಮಾಡುತ್ತಿಲ್ಲ; ಸತ್ಯೇಂದ್ರ ಜೈನ್

ದೆಹಲಿಯಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೋನಾ ಬಂದಿದೆ. ಆ ಪೈಕಿ ನಾಲ್ವರು ಶಿಕ್ಷಕರು ಕೊರೋನಾದಿಂದ ಮೃತಪಟ್ಟಿದ್ದಾರೆ. ಆದುದರಿಂದ ಕೊರೋನಾ ಕಷ್ಟ ಮುಗಿಯುವವರೆಗೆ ಶಾಲೆ ತೆರೆಯುವುದು ಒಳ್ಳೆಯದಲ್ಲ ಎನ್ನುವುದು ದೆಹಲಿ ಸರ್ಕಾರಿ ಶಾಲಾ ಶಿಕ್ಷಕರ ಸಂಘದ ಅಭಿಪ್ರಾಯವಾಗಿದೆ.

ಮಕ್ಕಳನ್ನು ಶಾಲೆಗೆ ಕಳಿಸಲು ಭಯವಾಗುತ್ತಿದೆ.‌ ಕೊರೋನಾ ಮುಗಿಯುವವರೆಗೆ ಮಕ್ಕಳು ಮನೆಯಲ್ಲಿದ್ದರೆ ಕ್ಷೇಮ ಎನ್ನುವುದು ಹಲವು ಪೋಷಕರ ಸಂಘಗಳ ಅಭಿಪ್ರಾಯವಾಗಿದೆ.
First published: