HOME » NEWS » Coronavirus-latest-news » DR MANMOHAN SINGH TODAY DISCHARGED FROM AIIMS HOSPITAL RH

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ; ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಇದೇ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಪರೀಕ್ಷೆ ಕೂಡ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಮುನ್ನ ಮುನ್ನೆಚ್ಚರಿಕೆಯಾಗಿ ಸಿಂಗ್ ಅವರಿಗೆ ಏಮ್ಸ್​ ಆಸ್ಪತ್ರೆಯಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ.  

news18-kannada
Updated:May 12, 2020, 3:32 PM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ; ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​
  • Share this:
ನವದೆಹಲಿ: ಎದೆ ನೋವು ಕಾಣಿಸಿಕೊಂಡ ಕಾರಣ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. 

ಭಾನುವಾರ ರಾತ್ರಿ 8:45ರ ವೇಳೆಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಸಿಕೊಂಡಿದೆ. ಆ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಏಮ್ಸ್​ ಆಸ್ಪತ್ರೆಯ ಡಾ ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಸಿಂಗ್ ಅವರಿಗೆ ಚಿಕಿತ್ಸೆ ನೀಡಿತ್ತು. ಇದೀಗ ಅವರ ಆರೋಗ್ಯ ಸಂಪೂರ್ಣ ಗುಣವಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಪರೀಕ್ಷೆ ಕೂಡ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಮುನ್ನ ಮುನ್ನೆಚ್ಚರಿಕೆಯಾಗಿ ಸಿಂಗ್ ಅವರಿಗೆ ಏಮ್ಸ್​ ಆಸ್ಪತ್ರೆಯಲ್ಲಿ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ.

ಇದನ್ನು ಓದಿ: ಐಎಎಸ್ ಅಧಿಕಾರಿ ಮಣಿವಣ್ಣನ್ ಎತ್ತಂಗಡಿ; ಟ್ವಿಟರ್‌ನಲ್ಲಿ ಟ್ರೆಂಡ್ ಆಗುತ್ತಿದೆ #BringBackCaptain ಹ್ಯಾಷ್‌ಟ್ಯಾಗ್
Youtube Video
First published: May 12, 2020, 3:32 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories