ಸ್ಯಾನಿಟೈಸ್, ಥರ್ಮಲ್ ಸ್ಕ್ರೀನಿಂಗ್‌ನಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ನಿರಾಧಾರ; ಗೋವಿಂದ ಕಾರಜೋಳ

ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡ ಕೆಲವು ಸೂಚನೆಗಳನ್ನು ನೀಡಿದೆ. ಇದರಂತೆ ಸೋಂಕು ಹೆಚ್ಚಿರುವ ಕಡೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು, ಕಂಟೋನ್ಮೆಂಟ್ ಜೋನ್‌ಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

news18-kannada
Updated:July 7, 2020, 5:38 PM IST
ಸ್ಯಾನಿಟೈಸ್, ಥರ್ಮಲ್ ಸ್ಕ್ರೀನಿಂಗ್‌ನಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ನಿರಾಧಾರ; ಗೋವಿಂದ ಕಾರಜೋಳ
ಡಿಸಿಎಂ ಗೋವಿಂದ ಕಾರಜೋಳ
  • Share this:
ಬೆಂಗಳೂರು (ಜುಲೈ 07); ಕೊರೋನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಖರೀದಿ ಮಾಡಿರುವ ಸ್ಯಾನಿಟೈಸ್, ಥರ್ಮಲ್ ಸ್ಕ್ರೀನಿಂಗ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಯಾವುದೇ ಹುರುಳಿಲ್ಲ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ಧಾರೆ.

ಇಂದು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಉತ್ತರಿಸಿರುವ ಡಿಸಿಎಂ ಗೋವಿಂದ ಕಾರಜೋಳ, “ಕೊರೋನಾ ಪರಿಕರಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿರೋಧ ಪಕ್ಷದ ಆರೋಪದಲ್ಲಿ ಹುರುಳಿಲ್ಲ.

ಸ್ಯಾನಿಟೈಸ್, ಥರ್ಮಲ್ ಸ್ಕ್ರೀನಿಂಗ್. ಮಾಸ್ಕ್ ಖರೀದಿಯ ಜವಾಬ್ದಾರಿಯನ್ನು ಆಯಾ ಜಿಲ್ಲೆಗಳ ಡಿಸಿಗಳಿಗೆ ನೀಡಲಾಗಿದೆ. 48 ಲಕ್ಷ ಹಣವನ್ನು ಖರೀದಿಗೆ ಎಂದು ಮೀಸಲಿಡಲಾಗಿದೆ. ಈ 48 ಲಕ್ಷದಲ್ಲಿ ಭ್ರಷ್ಟಾಚಾರ ಮಾಡೋಕೆ ಆಗುತ್ತಾ?” ಎಂದು ಮರು ಪ್ರಶ್ನೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಕೊರೋನಾ ನಿಯಂತ್ರಣದ ಬಗ್ಗೆಯೂ ಮಾತನಾಡಿರುವ ಅವರು, “ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತಂಡ ಕೆಲವು ಸೂಚನೆಗಳನ್ನು ನೀಡಿದೆ. ಇದರಂತೆ ಸೋಂಕು ಹೆಚ್ಚಿರುವ ಕಡೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು, ಕಂಟೋನ್ಮೆಂಟ್ ಜೋನ್‌ಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಒಂದು ಕೋಟಿ ರೂ. ಪರಿಹಾರದ ಲೆಕ್ಕ ನೀಡಲು ಕಾಂಗ್ರೆಸ್‌ ಸಿದ್ದ, PM Cares ಲೆಕ್ಕ ಯಾವಾಗ ಕೊಡ್ತೀರ; ಸಿದ್ದರಾಮಯ್ಯ ಟಾಂಗ್

60 ವರ್ಷ ಮೇಲ್ಪಟ್ಟವರ ಮೇಲೆ ನಿಗಾ ಇಡಲು ತಿಳಿಸಲಾಗಿದೆ. ಕೋವಿಡ್ ರಿಪೋರ್ಟ್ ಗಳನ್ನ ಅದಷ್ಟು ಬೇಗ ಸಿಗುವಂತೆ ಕ್ರಮ ಕೈಗೊಳ್ಳಲಾಗಿದೆ. ಸೋಂಕಿನ ಸಂಖ್ಯೆ ಹೆಚ್ಚಾದರೆ ಯಾವುದೇ ಆತಂಕ ಪಡಬೇಕಿಲ್ಲ. ಆದರೆ, ಸಾವಿನ ಪ್ರಮಾಣ ಹೆಚ್ಚಾಗದಂತೆ ನೋಡಿಕೊಳ್ಳಲು ಹಾಗೂ ಎಲ್ಲರಿಗೂ ಉತ್ತಮ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಕೇಂದ್ರ ಸಲಹೆಯಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
Published by: MAshok Kumar
First published: July 7, 2020, 5:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading