• ಹೋಂ
  • »
  • ನ್ಯೂಸ್
  • »
  • Corona
  • »
  • Corona Pandemic: ಈ ತಿಂಗಳು ನಿಗದಿಯಾಗಿದ್ದ ಎಲ್ಲ ಆಫ್​ಲೈನ್​ ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರ ಸರ್ಕಾರ

Corona Pandemic: ಈ ತಿಂಗಳು ನಿಗದಿಯಾಗಿದ್ದ ಎಲ್ಲ ಆಫ್​ಲೈನ್​ ಪರೀಕ್ಷೆಗಳನ್ನು ಮುಂದೂಡಿದ ಕೇಂದ್ರ ಸರ್ಕಾರ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌

ಮುಂದೆ ಓದಿ ...
  • Share this:

ನವದೆಹಲಿ: ದೇಶಾದ್ಯಂತ ಮಾರಕ ಕೊರೋನಾ ಎರಡನೇ ಸಾಂಕ್ರಾಮಿಕ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣ ಮೇ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿರುವ ಎಲ್ಲಾ ಆಫ್​ಲೈನ್​ ಪರೀಕ್ಷೆಗಳನ್ನು ಮುಂದೂಡುವಂತೆ ಕೇಂದ್ರ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಸಚಿವಾಲಯ ಸೋಮವಾರ ಸೂಚನೆ ನೀಡಿದೆ. ಆದಾಗ್ಯೂ, ಆನ್​ಲೈನ್​ ಪರೀಕ್ಷೆಗಳನ್ನು ನಡೆಸಲು ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.


ಕೇಂದ್ರೀಯ ಅನುದಾನ ಪಡೆದ ಎಲ್ಲ ಸಂಸ್ಥೆಗಳ ಮುಖ್ಯಸ್ಥರನ್ನು ಉದ್ದೇಶಿಸಿ ಉನ್ನತ ಶಿಕ್ಷಣ ಕಾರ್ಯದರ್ಶಿ ಅಮಿತ್ ಖರೆ ಅವರು ಬರೆದ ಪತ್ರದಲ್ಲಿ, ಜೂನ್ ಮೊದಲ ವಾರದಲ್ಲಿ ಕೇಂದ್ರವು ಪರಿಸ್ಥಿತಿಯನ್ನು ಪರಿಶೀಲಿಸಲಿದೆ ಎಂದು ಹೇಳಿದ್ದಾರೆ.


"ಪ್ರಸ್ತುತ ಪರಿಸ್ಥಿತಿಯ ಹಿನ್ನೆಲೆಯಲ್ಲಿ, 2021 ರ ಮೇ ತಿಂಗಳಲ್ಲಿ ನಿಗದಿಯಾಗಿದ್ದ ಎಲ್ಲಾ ಆಫ್‌ಲೈನ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ನಾನು ಕೇಂದ್ರೀಯ ಅನುದಾನಿತ ಸಂಸ್ಥೆಗಳ ಎಲ್ಲಾ ಮುಖ್ಯಸ್ಥರನ್ನು ಕೋರುತ್ತೇನೆ. ಆನ್‌ಲೈನ್ ಪರೀಕ್ಷೆಗಳು ಮುಂದುವರಿಯಬಹುದು" ಎಂದು ಉನ್ನತ ಶಿಕ್ಷಣ ಕಾರ್ಯದರ್ಶಿ ಅಮಿತ್ ಖರೆ ಅವರು ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನು ಓದಿ: ಚಾಮರಾಜನಗರದಲ್ಲಿ ಸರ್ಕಾರ 24 ಜನರನ್ನು ಕೊಲೆ ಮಾಡಿದೆ; ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗಂಭೀರ ಆರೋಪ


ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು ಹಾಗೂ ಏಪ್ರಿಲ್ 17ರಿಂದ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೋನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ.


ಭಾನುವಾರ 3,68,147 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,00,732 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,99,25,604ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು, ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪುತ್ತಿದ್ದಾರೆ. ಭಾನುವಾರ 3,417 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,18,959ಕ್ಕೆ ಏರಿಕೆ.

top videos
    First published: