ಕೊರೋನಾದಿಂದ ಗುಣಮುಖರಾದ ಇಂಗ್ಲೆಂಡ್ ಪ್ರಧಾನಿ ಬೋರಿಸ್; ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಭಾಗಿ

Boris Johnson: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ 55 ವರ್ಷದ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಲಂಡನ್‌ನಲ್ಲಿರುವ ಸೇಂಟ್ ಥಾಮಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೋರಿಸ್ ಜಾನ್ಸನ್

ಬೋರಿಸ್ ಜಾನ್ಸನ್

  • Share this:
ನವದೆಹಲಿ (ಏ. 27): ವಿಶ್ವಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದಿರುವ ಕೊರೋನಾ ವೈರಸ್​ಗೆ ತುತ್ತಾಗಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇಂಗ್ಲೆಂಡ್​ನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಅವರು ವಾಪಾಸ್​ ಕಚೇರಿಗೆ ಹಾಜರಾಗಿದ್ದು, ಇಂದು ಕ್ಯಾಬಿನೆಟ್​ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕೊರೋನಾ ಸೋಂಕಿನಿಂದಾಗಿ ಬೋರಿಸ್ ಜಾನ್ಸನ್ ಅವರನ್ನು ಆಸ್ಪತ್ರೆಯಲ್ಲಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದರಿಂದ ಐಸಿಯುನಿಂದ ವಾರ್ಡ್​ಗೆ ಶಿಫ್ಟ್​ ಮಾಡಲಾಗಿತ್ತು. ನಂತರ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ಅವರನ್ನು ಏ. 12ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

ಇದನ್ನೂ ಓದಿ: ಕೊರೋನಾದಿಂದ ಗುಜರಾತ್​ನ ಕೈ ನಾಯಕ ನಿಧನ; ಮಾರಕ ಸೋಂಕಿಗೆ ದೇಶದಲ್ಲಿ ಮೊದಲ ರಾಜಕಾರಣಿ ಬಲಿ

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ 55 ವರ್ಷದ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಲಂಡನ್‌ನಲ್ಲಿರುವ ಸೇಂಟ್ ಥಾಮಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಅವರು ಇಂದಿನಿಂದ ಕೆಲಸ ಆರಂಭಿಸಿದ್ದಾರೆ.ಇಂಗ್ಲೆಂಡಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ 1,52,840ಕ್ಕೆ ಏರಿಕೆಯಾಗಿದ್ದು, 20,732 ಜನರು ಸಾವನ್ನಪ್ಪಿದ್ದಾರೆ. ವಿಶ್ವಾದ್ಯಂತ 29.94 ಲಕ್ಷ ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈಗಾಗಲೇ ಜಗತ್ತಿನಲ್ಲಿ ಕೊರೋನಾದಿಂದಾಗಿ 2.6 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಮೋದಿ ಮಹತ್ವದ ಚರ್ಚೆ: ನಿರ್ಧಾರವಾಗಲಿದೆ ಲಾಕ್​ಡೌನ್​​ ಭವಿಷ್ಯ
First published: