HOME » NEWS » Coronavirus-latest-news » FARMER CM HD KUMARASWAMY TOOK DIG AT GOVT OVER SSLC EXAMS GNR

ಕೊರೋನಾ ಸಂದರ್ಭದಲ್ಲಿ ಎಸ್​ಎಸ್​ಎಲ್​​ಸಿ ಪರೀಕ್ಷೆ ಯಾಕೇ? - ಸರ್ಕಾರಕ್ಕೆ ಎಚ್​​ಡಿಕೆ ಪ್ರಶ್ನೆ

ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ಧಾರೆ.

news18-kannada
Updated:June 23, 2020, 1:49 PM IST
ಕೊರೋನಾ ಸಂದರ್ಭದಲ್ಲಿ ಎಸ್​ಎಸ್​ಎಲ್​​ಸಿ ಪರೀಕ್ಷೆ ಯಾಕೇ? - ಸರ್ಕಾರಕ್ಕೆ ಎಚ್​​ಡಿಕೆ ಪ್ರಶ್ನೆ
ಮಾಜಿ ಸಿಎಂ ಕುಮಾರಸ್ವಾಮಿ
  • Share this:
ಬೆಂಗಳೂರು(ಜೂ.23): ಎಸ್​ಎಸ್​ಎಲ್​​ಸಿ ಪರೀಕ್ಷೆ ನಡೆಸಲು ಮುಂದಾದ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಈ ಸಂಬಂಧ ಟ್ವೀಟ್​​ ಮಾಡಿರುವ ಎಚ್​​ಡಿಕೆ, ಇದೇ ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ  ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದೆ. ದಿನದಿಂದ ದಿನಕ್ಕೆ ಸಾವಿನ ಕೇಸುಗಳು ಜಾಸ್ತಿಯಾಗುತ್ತಿವೆ. ಇಂತಹ ಆತಂಕದ ಸಂದರ್ಭದಲ್ಲಿ ರಾಜ್ಯದ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ  ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಮತ್ತೊಂದು ಟ್ವೀಟ್​ನಲ್ಲಿ ಆರೋಪಿಸಿದ್ದಾರೆ.

ಕೊರೋನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ SSLC ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ. ಇದನ್ನು ಬಿಟ್ಟು ಹೀಗೆ ಮಕ್ಕಳ ಜೀವದ ಜತೆಗೆ ಆಟವಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ಧಾರೆ ಎಚ್​​ಡಿಕೆ.

ಇದನ್ನೂ ಓದಿ: ‘ಗಾಲ್ವಾನ್​​ ಕಣಿವೆಯಲ್ಲಿ ಭಾರತ ಯೋಧರ ಮೇಲೆ ದಾಳಿ ಮಾಡುವಂತೆ ಚೀನಾ ಆದೇಶಿಸಿತ್ತು‘ - ಅಮೆರಿಕ ಗುಪ್ತಚರ ಇಲಾಖೆ

ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ಧಾರೆ.
First published: June 23, 2020, 1:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories