ಮಾಜಿ ಸಿಎಂ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖ: ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆ ನಡೆಸಿದಾಗ ಕೊರೋನಾ ರಿಪೋರ್ಟ್​​ ನೆಗಿಟಿವ್​ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಮನೆಗೆ ಹೋಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

news18-kannada
Updated:August 13, 2020, 10:48 AM IST
ಮಾಜಿ ಸಿಎಂ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖ: ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
  • Share this:
ಬೆಂಗಳೂರು(ಆ.13): ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಈಗ ಸಂಪೂರ್ಣ ಗುಣಮುಖ ಆಗಿದ್ದಾರೆ. ಹೀಗಾಗಿ ಇಂದು ಸಂಜೆ 6 ಗಂಟೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಡಿಸ್ಚಾರ್ಜ್​​​ ಆಗಿ ಸೀದಾ ಮನೆಗೆ ಹೋಗಲಿದ್ದಾರೆ ಎನ್ನುತ್ತಿವೆ ಮೂಲಗಳು. ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯಗೂ ಕೊರೋನಾ ಪಾಸಿಟಿವ್​​ ಕಾಣಿಸಿಕೊಂಡಿತ್ತು. ಕೊರೋನಾ ಚಿಕಿತ್ಸೆಗಾಗಿ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಾದರು. ಸಿದ್ದರಾಮಯ್ಯಗೆ ಕೊರೋನಾ ಜತೆಗೆ ಇತರ ಆರೋಗ್ಯ ಸಮಸ್ಯೆಗಳಿರುವುದರಿಂದ ಎಲ್ಲದಕ್ಕೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಸದ್ಯ ಸಿದ್ದರಾಮಯ್ಯ ಕೊರೋನಾದಿಂದ ಗುಣಮುಖರಾಗಿದ್ದಾರೆ. ಎರಡನೇ ಬಾರಿಗೆ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆ ನಡೆಸಿದಾಗ ಕೊರೋನಾ ರಿಪೋರ್ಟ್​​ ನೆಗಿಟಿವ್​ ಬಂದಿದೆ. ಹೀಗಾಗಿ ಸಿದ್ದರಾಮಯ್ಯ ಮನೆಗೆ ಹೋಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.


ಒಂದು ವಾರದ ಹಿಂದೆ ಸಿದ್ದರಾಮಯ್ಯ ಮಣಿಪಾಲ್​​ ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಇತ್ತು. ಉಳಿದಂತೆ ಯಾವುದೇ ಕೊರೋನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿರಲಿಲ್ಲ. ಈಗ ಮಾಜಿ ಸಿಎಂ ಆರೋಗ್ಯ ಸ್ಥಿರವಾಗಿದೆ ಎನ್ನುತ್ತಿವೆ ವೈದ್ಯಕೀಯ ಮೂಲಗಳು.
Published by: Ganesh Nachikethu
First published: August 13, 2020, 10:19 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading