‘ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಮುನಿಸಿಕೊಂಡ ಕೇಂದ್ರ ಸರ್ಕಾರ‘ - ಮಾಜಿ ಸಚಿವ ಸತೀಶ್ ಜಾರಕಿಹೊಳಿ
ಕಳೆದ ಬಾರಿಯೂ ಪರಿಹಾರ ಸರಿಯಾಗಿ ನೀಡಿಲ್ಲ. ಕೇವಲ ಶೇ.25ರಷ್ಟು ಜನರಿಗೆ ಪರಿಹಾರ ನೀಡಿದೆ. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ, ಪರಿಹಾರ ಸಿಕ್ಕಲ್ಲ. ಬೆಳಗಾವಿ ಜಿಲ್ಲೆಯಲ್ಲಿ ರೂ. 5 ಲಕ್ಷ ಘೋಷಣೆ ಮಾಡಿ ರೂ. 2 ಲಕ್ಷ ಪರಿಹಾರ ನೀಡಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದರು.
ಧಾರವಾಡ(ಆ.28): ರಾಜ್ಯಕ್ಕೆ ಅತಿವೃಷ್ಟಿ ಬೆಳೆ ಹಾನಿಯ ಪರಿಹಾರ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ರಾಜ್ಯ ಸರ್ಕಾರದ ಮೇಲೆ ಕೇಂದ್ರ ಸರ್ಕಾರ ಮುನಿಸಿಕೊಂಡಂತೆ ಕಾಣುತ್ತಿದೆ ಎಂದು ಮಾಜಿ ಸಚಿವರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಆಸ್ತಿ-ಪಾಸ್ತಿ ಹಾನಿ ಸಂಭವಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ರೈತರ ಬೆಳೆ ಹಾನಿಯಾಗಿದೆ. ರಾಜ್ಯ ಸರ್ಕಾರ ಹಾನಿ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ ಎಂದು ದೂರಿದರು.
ಕಳೆದ ಬಾರಿಯೂ ಪರಿಹಾರ ಸರಿಯಾಗಿ ನೀಡಿಲ್ಲ. ಕೇವಲ ಶೇ.25ರಷ್ಟು ಜನರಿಗೆ ಪರಿಹಾರ ನೀಡಿದೆ. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ, ಪರಿಹಾರ ಸಿಕ್ಕಲ್ಲ. ಬೆಳಗಾವಿ ಜಿಲ್ಲೆಯಲ್ಲಿ ರೂ. 5 ಲಕ್ಷ ಘೋಷಣೆ ಮಾಡಿ ರೂ. 2 ಲಕ್ಷ ಪರಿಹಾರ ನೀಡಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಜಿಎಸ್ಟಿಯಲ್ಲೂ ನಮ್ಮ ಪಾಲು ಬರುತ್ತಿಲ್ಲ. ಈ ಬಗ್ಗೆ ಸಿಎಂ ಅವರು ಅನೇಕ ಸಲ ಧ್ವನಿ ಎತ್ತಿದ್ದಾರೆ. ಆದರೂ, ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕುಟುಕಿದರು.
ರಾಜ್ಯ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿ ಇದೆ. ಕೊರೋನಾ ಹಾಗೂ ಅತಿವೃಷ್ಟಿ ಹಾನಿ ಹೇಗೆ ನಿಭಾಯಿಸಲಿದೆ ಎಂಬುದು ನೋಡಬೇಕಿದೆ ಎಂದ ಅವರು ಟಿಪ್ಪು ವಿಚಾರದಲ್ಲಿ ವಿಶ್ವನಾಥ ಹೇಳಿದ್ದು ಸತ್ಯವಿದೆ ಎಂದರು.
ಬೆಳಗಾವಿ ಪೀರನಾಡಿ ರಾಯಣ್ಣ ಪ್ರತಿಮೆ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರನ್ನು ಹಾಗೂ ಎಲ್ಲರನ್ನು ಕರೆಯಿಸಿ ಸಂಧಾನ ಸಭೆ ನಡೆಸಿದರೆ ಸಮಸ್ಯೆ ಇತ್ಯರ್ಥವಾಗಲಿದೆ ಎಂದು ತಿಳಿಸಿದರು.
Published by:Ganesh Nachikethu
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ