ರೈತರಿಗೆ ಬಿಗ್​ ರಿಲೀಫ್​ ನೀಡಿದ ಸರ್ಕಾರ; ಸಾಲ ಕಂತು ಮರುಪಾವತಿ ಅವಧಿ ವಿಸ್ತರಣೆ

ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ರೈತರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ತತ್ತರಿಸಿದ್ದ ರೈತರು ಈಗ ತಾನೇ ಚೇತರಿಸಿಕೊಳ್ಳುತ್ತಿರುವಾಗಲೇ ಕೊರೋನಾ ಮಹಾಮಾರಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ. ಹೀಗಾಗಿ ಸರ್ಕಾರ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

 • Share this:
  ಬೆಂಗಳೂರು (ಮಾ.27): ಕೊರೋನಾ ವೈರಸ್​ಗೆ ಇಡೀ ದೇಶವೇ ಕಂಗಾಲಾಗಿದೆ. ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದ್ದು, ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ರೈತರು ಕೂಡ ತಮ್ಮ ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ಪರದಾಡುತ್ತಿದ್ದಾರೆ. ಹೀಗಾಗಿ ಸರ್ಕಾರ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.

  ಮಾರ್ಚ್​ ಹಣಕಾಸು ವರ್ಷದ ಕೊನೆಯ ತಿಂಗಳು.  ಹೀಗಾಗಿ ಈ ಅವಧಿಯಲ್ಲಿ ರೈತರು ಸಹಕಾರಿ ಸಂಘಕ್ಕೆ ಬೆಳೆ ಸಾಲದ ಕಂತನ್ನು ತುಂಬಬೇಕು. ಆದರೆ, ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಸಹಕಾರ ಸಂಘದಲ್ಲಿ ರೈತರು ಸಾಲದ ಕಂತುಗಳ ಮರುಪಾವತಿ ಅವಧಿಯನ್ನು ಮಾರ್ಚ್​ನಿಂದ ಜೂನವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ರೈತರಿಗೆ ಬಿಗ್​​ ರಿಲೀಫ್​ ನೀಡಿದೆ.

  ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ರೈತರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ತತ್ತರಿಸಿದ್ದ ರೈತರು ಈಗ ತಾನೇ ಚೇತರಿಸಿಕೊಳ್ಳುತ್ತಿರುವಾಗಲೇ ಕೊರೋನಾ ಮಹಾಮಾರಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ. ಹೀಗಾಗಿ, ಸಾಲ ಮರುಪಾವತಿ ಅವಧಿಯನ್ನು ವಿಸ್ತರಿಸುವಂತೆ ಸಾಕಷ್ಟು ಬೇಡಿಕೆಗಳು ಸರ್ಕಾರದ ಮುಂದೆ ಇಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.  ಇದನ್ನೂ ಓದಿ: ಕರ್ನಾಟಕದಲ್ಲಿ 10 ತಿಂಗಳ ಮಗು ಸೇರಿ 7 ಜನರಿಗೆ ಕೊರೋನಾ ಪತ್ತೆ; ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆ

  ಕರ್ನಾಟಕದಲ್ಲಿ ಕೊರೋನಾ ವೈರಸ್​ ಅಟ್ಟಹಾಸ ಮುಂದುವರೆದಿದ್ದು, 7 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಈ 7 ಪ್ರಕರಣಗಳಲ್ಲಿ ನಾಲ್ವರು ಬೆಂಗಳೂರಿನವರೇ ಆಗಿದ್ದಾರೆ. ಯಾವುದೇ ದೇಶಕ್ಕೂ ಪ್ರಯಾಣಿಸಿರದ 10 ತಿಂಗಳ ಮಗುವಿಗೆ ಕೂಡ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ.
  First published: