ರಾಜ್ಯ, ಕೇಂದ್ರ ಸರ್ಕಾರ ರೇಷ್ಮೆ ಬೆಳೆಗೆ ಪರಿಹಾರಧನ ನೀಡಬೇಕು, ಇಲ್ಲವಾದರೆ ಜು.15ರಿಂದ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ರೈತರು

ಸರ್ಕಾರವು ಜುಲೈ 14ರೊಳಗೆ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಜು. 15ರಿದ ಅಹೋರಾತ್ರಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಸಾಮಾಜಿಕ ಅಂತರ ಕಾಪಾಡಿಕೊಂಡು ರಾಮನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ಕೊಟ್ಟರು.

news18-kannada
Updated:July 8, 2020, 5:22 PM IST
ರಾಜ್ಯ, ಕೇಂದ್ರ ಸರ್ಕಾರ ರೇಷ್ಮೆ ಬೆಳೆಗೆ ಪರಿಹಾರಧನ ನೀಡಬೇಕು, ಇಲ್ಲವಾದರೆ ಜು.15ರಿಂದ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ರೈತರು
ಸುದ್ದಿಗೋಷ್ಠಿ ನಡೆಸಿದ ರೇಷ್ಮೆ ಬೆಳೆಗಾರರು.
  • Share this:
ರಾಮನಗರ: ರೇಷ್ಮೆ ಬೆಳೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೂಡಲೇ ಪ್ರೋತ್ಸಾಹ ಧನದ ಜೊತೆಗೆ ಕೊರೋನಾ ಸಂದರ್ಭದಲ್ಲಿ ನಷ್ಟವಾಗಿರುವ ಬೆಳೆಗೆ ಪರಿಹಾರ ಘೋಷಣೆ ಮಾಡಬೇಕೆಂದು ರೇಷ್ಮೆ ಬೆಳೆಗಾರರು ಒತ್ತಾಯಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಷ್ಮೆ ಬೆಳೆಗಾರರು, ಕೋವಿಡ್‌-19 ಪರಿಣಾಮವು ರೇಷ್ಮೆ ಕೃಷಿಯ ಮೇಲೆ ತೀವ್ರವಾಗಿ ಹೊಡೆತ ನೀಡಿದೆ. ರೇಷ್ಮೆ ಗೂಡಿನ ಧಾರಣೆಯು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾಗಿರುವುದು ನಮ್ಮೆಲ್ಲರ ಆತಂಕಕ್ಕೆ ಕಾರಣವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಸರ್ಕಾರ ನಮ್ಮ ಕೈ ಹಿಡಿಯಬಹುದೆಂಬ ನಿರೀಕ್ಷೆಯು ಸುಳ್ಳಾಗಿದೆ. ಏಕೆಂದರೆ ಈ ಹಿಂದೆ ಸರ್ಕಾರದಿಂದ ರೇಷ್ಮೆ ಬೆಳೆಗಾರರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಸಹ ನಿಲ್ಲಿಸಲಾಗಿದೆ ಎಂದು ಹೇಳಿದರು.

ನಮ್ಮ ರಾಮನಗರ ಜಿಲ್ಲೆಯಲ್ಲಿ ಉತ್ಪಾದನೆಯಾಗುವ ರೇಷ್ಮೆಗೂಡು ಜಿಲ್ಲೆಯ ಮಾರುಕಟ್ಟೆಗಳಲ್ಲಿ ಮಾತ್ರವಲ್ಲದೆ ಕೋಲಾರ ಚಿಕ್ಕಬಳ್ಳಾಪುರ, ಚಿಂತಾಮಣಿ, ಶಿಡ್ಲಘಟ್ಟ, ಕೊಳ್ಳೇಗಾಲ, ಮೈಸೂರು ಹಾಗೂ ರಾಜ್ಯದ ಬೇರೆ ಜಿಲ್ಲೆಗಳಲ್ಲಿಯೂ ಸಹ ಮಾರಾಟವಾಗುತ್ತಿದೆ. ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿ ಪ್ರತಿ ಕೆ.ಜಿ. ರೇಷ್ಮೆ ಗೂಡಿಗೆ 500 ರೂ. ನಿಂದ 600 ರೂ. ಬೆಲೆ ಸಿಗುತ್ತಿತ್ತು. ಆದರೆ ಈಗ ಪ್ರತಿ ಕೆಜಿ ರೇಷ್ಮೆ ಗೂಡಿನ ಬೆಲೆ 100ರೂ. ನಿಂದ 200 ರೂ. ಗೆ ಕುಸಿದಿದ್ದು ರೈತರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಸರ್ಕಾರವು ಬೇರೆ ಬೆಳೆಗಳಿಗೆ ನೀಡುವ ಪ್ರೋತ್ಸಾಹ ಧನ ಅಥವಾ ಸಹಾಯಧನವನ್ನು ರೇಷ್ಮೆ ಬೆಳೆಗೆ ನೀಡದಿರುವುದು ಸಹ  ರೇಷ್ಮೆ ಬೆಳೆಗಾರರ ಬದುಕು ಅಸಹನೀಯ ಸ್ಥಿತಿಗೆ ತಲುಪಿಸಿದೆ ಎಂದು ನೋವು ತೋಡಿಕೊಂಡರು.

ಹಿಪ್ಪುನೇರಳೆ ಗಿಡಗಳನ್ನು ಬೇರು ಸಮೇತ ಕೀಳುವ ಹಂತಕ್ಕೆರೈತರು ತಲುಪಿದ್ದಾರೆ. ಆದ್ದರಿಂದ ಸರ್ಕಾರವು ಜುಲೈ 14ರೊಳಗೆ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಜು. 15ರಿದ ಅಹೋರಾತ್ರಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಸಾಮಾಜಿಕ ಅಂತರ ಕಾಪಾಡಿಕೊಂಡು ರಾಮನಗರದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ಕೊಟ್ಟರು.

ಇದನ್ನು ಓದಿ; ಭೂ ಕುಸಿತದಿಂದ ಎಲ್ಲವನ್ನೂ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಆಸರೆ ಕಿತ್ತುಕೊಂಡು ಕೊರೋನಾ

ಈ ಸಂದರ್ಭದಲ್ಲಿ ರೇಷ್ಮೆ ಬೆಳೆಗಾರರ ಸಂಘದ ಪ್ರಮುಖರಾದ ರವಿ, ಗೌತಮ್, ಕೀರಣಗೆರೆ ಜಗದೀಶ್, ಶಿವಕುಮಾರ್, ಗೋಪಾಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
Published by: HR Ramesh
First published: July 8, 2020, 5:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading