ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 39ಕ್ಕೆ ಏರಿಕೆ; ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಅಂಟಿದ ವೈರಸ್

ಮಂಗಳವಾರ ದೇಶಾದ್ಯಂತ ಹೋಳಿ ಆಚರಣೆ ಮಾಡಲಾಗುತ್ತಿದೆ. ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ಅನೇಕ ಭಾಗದಲ್ಲಿ ಹೋಳಿ ಆಚರಣೆಗೆ ಬ್ರೇಕ್​ ನೀಡಲು ನಿರ್ಧರಿಸಲಾಗಿದೆ.

Rajesh Duggumane | news18-kannada
Updated:March 8, 2020, 11:41 AM IST
ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 39ಕ್ಕೆ ಏರಿಕೆ; ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಅಂಟಿದ ವೈರಸ್
ಕೊರೊನಾ ವೈರಸ್​
  • Share this:
ನವದೆಹಲಿ (ಮಾ.8): ಭಾರತಕ್ಕೂ ನೊವೆಲ್​ ಕೊರೊನಾ ಕಾಲಿಟ್ಟಿದ್ದು, ಈ ವೈರಸ್​ ಪೀಡಿತರ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೇರಳದಲ್ಲಿ ಹೊಸ ಐದು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕು ತಗುಲಿದವರ ಸಂಖ್ಯೆ ಭಾರತದಲ್ಲಿ 39ಕ್ಕೆ ಏರಿಕೆ ಆಗಿದೆ.

ಕೇರಳದಲ್ಲಿ ಕೊರೊನಾ ವೈರಸ್​ ತಗುಲಿದ ಐದು ಜನರು ಒಂದೇ ಕುಟುಂಬದವರಾಗಿದ್ದಾರೆ. ಈ ಐವರ ಪೈಕಿ ಮೂವರು ಈ ಮೊದಲು ಇಟಲಿಗೆ ತೆರಳಿದ್ದರು. ಈ ವೇಳೆ ಅವರಿಗೆ ಕೊರೊನಾ ವೈರಸ್​ ತಗುಲಿರಬಹುದು ಎಂದು ಶಂಕಿಸಲಾಗಿದೆ. ಇವರನ್ನು ಸಂಪರ್ಕಿಸಿದ ಎಲ್ಲರನ್ನೂ ಸದ್ಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಮಂಗಳವಾರ ದೇಶಾದ್ಯಂತ ಹೋಳಿ ಆಚರಣೆ ಮಾಡಲಾಗುತ್ತಿದೆ. ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ಅನೇಕ ಭಾಗದಲ್ಲಿ ಹೋಳಿ ಆಚರಣೆಗೆ ಬ್ರೇಕ್​ ನೀಡಲು ನಿರ್ಧರಿಸಲಾಗಿದೆ. ಇನ್ನು, ಚಿಕನ್​, ಮಟನ್​ ಹಾಗೂ ಸಮುದ್ರ ಆಹಾರ  ತಿನ್ನುವುದರಿಂದ ಕೊರೊನಾ ಬರುತ್ತದೆ ಎನ್ನುವ ತಪ್ಪು ಕಲ್ಪನೆ ಅನೇಕರಲ್ಲಿದೆ. ಆದರೆ, ಈ ರೀತಿ ಆಹಾರಗಳ ಸೇವನೆಯಿಂದ ಕೊರೊನಾ ಬರುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ಒಂದು ಲಕ್ಷ ದಾಟಿದ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ; 3,400ಕ್ಕೂ ಹೆಚ್ಚು ಜನರು ಸಾವು

ಕೊರೋನಾ ವೈರಸ್ ವಿಶ್ವಾದ್ಯಂತ ವೇಗವಾಗಿ ಪಸರಿಸುತ್ತಿದೆ. ಚೀನಾದಲ್ಲೇ ಹೆಚ್ಚಾಗಿ ಆರ್ಭಟಿಸುತ್ತಿರುವ ಈ ವೈರಸ್​ ಈಗಾಗಲೇ 90ಕ್ಕೂ ಹೆಚ್ಚು ದೇಶಗಳಿಗೆ ಅಡಿ ಇಟ್ಟಿದೆ. ವೈರಸ್​ನ ಸೋಂಕಿಗೆ ಒಳಗಾದವರ ಸಂಖ್ಯೆ 1 ಲಕ್ಷ ದಾಟಿದೆ. ಸಾವನ್ನಪ್ಪಿದವರ ಸಂಖ್ಯೆ 3,400ಕ್ಕೂ ಹೆಚ್ಚು.  ‘
First published: March 8, 2020, 11:41 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading