HOME » NEWS » Coronavirus-latest-news » FORMER CENTRAL MINISTER ANANTHKUMAR HEGDE TWITTER ACCOUNT BLOCK HK

ಸಂಸದ ಅನಂತಕುಮಾರ್ ಹೆಗಡೆ ಟ್ವಿಟರ್ ಖಾತೆ ನಿರ್ಬಂಧ - ಟ್ವಿಟರ್ ನಿಂದ ನೋಟಿಸ್

ಏಪ್ರಿಲ್ 22 ರಂದು ತಬ್ಲಿಘಿ ಜಮಾತ್ ವಿರುದ್ಧ ನಾನು ಮಾಡಿರುವ ಟ್ವಿಟ್​​ನ ನೆಪವನಿಟ್ಟುಕೊಂಡು ನನ್ನ ಟ್ವಿಟರ್ ಅಕೌಂಟ್ ಅನ್ನು ರದ್ದು ಮಾಡಿದ್ದಾರೆ.

news18-kannada
Updated:April 26, 2020, 7:32 PM IST
ಸಂಸದ ಅನಂತಕುಮಾರ್ ಹೆಗಡೆ ಟ್ವಿಟರ್ ಖಾತೆ ನಿರ್ಬಂಧ - ಟ್ವಿಟರ್ ನಿಂದ ನೋಟಿಸ್
ಸಂಸದ ಅನಂತಕುಮಾರ್ ಹೆಗಡೆ
  • Share this:
ಕಾರವಾರ (ಏ.26): ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅವರ ಟ್ವಿಟರ್ ಖಾತೆಯನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಅನಂತಕುಮಾರ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟರ್​​​, ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ ಎಂದು ಗಮನಕ್ಕೆ ತಂದಿದೆ. ಅಷ್ಟಕ್ಕೂ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವಿಟ್ ಅನ್ನು ಡಿಲಿಟ್ ಮಾಡುವಂತೆ ಸೂಚಿಸಿದೆ.

ಏಪ್ರಿಲ್ 8 ರಿಂದ ತಬ್ಲಿಘಿ ಜಮಾತ್ ನ ವಿರುದ್ಧ ಅನಂತಕುಮಾರ್ ಹೆಗಡೆ ಅವರು ಬರಹಗಳ ಸರಣಿಯನ್ನು ಶುರು ಮಾಡಿದ್ದರು. ಸುಮಾರು ನಾಲ್ಕು ಸುಧೀರ್ಘ ಬರಹಗಳನ್ನು ಅವರು ಕೊರೋನಾ ವೈರಸ್ ಎಂಬ ಜಿಹಾದ್ ಅನ್ನು ತಬ್ಲಿಘಿಗಳು ಹರಡುತ್ತಿದ್ದಾರೆ ಎಂಬಿತ್ಯಾದಿ ಅರ್ಥದಲ್ಲಿ ಪ್ರಕಟಿಸಿದ್ದರು. ಇದೇ ಟ್ವಿಟ್ ನ ನೆಪವಿಟ್ಟುಕೊಂಡು ಟ್ವಿಟರ್​​​​ ನನ್ನ ಖಾತೆಯನ್ನು ರದ್ದು ಮಾಡಿರುವುದಾಗಿ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

ಭಾರತ ವಿರೋಧಿ ಟ್ವಿಟರ್

ತಮ್ಮ ಟ್ವಿಟರ್​​​ ಖಾತೆಯನ್ನು ಬ್ಲಾಕ್ ಮಾಡುತ್ತಿದ್ದಂತೆ ಸಂಸದ ಅನಂತಕುಮಾರ ಹೆಗಡೆ ಟ್ವಿಟರ್ ವಿರುದ್ಧ ಕಿಡಿಕಾರಿದ್ದಾರೆ. 'ಟ್ವಿಟರ್​​​ ಭಾರತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಭಾರತದ ವಿರುದ್ಧ ಷಡ್ಯಂತರ ಹಾಗೂ ಭಾರತವನ್ನು ಒಡೆಯುವ ಟ್ವಿಟ್​​ಗಳನ್ನು ಪ್ರಚಾರ ಮಾಡುವ ಉದ್ಯಮವನ್ನು ಟ್ವಿಟರ್ ಮಾಡುತ್ತಿದೆ' ಎಂದು ಆರೋಪಿಸಿದ್ದಾರೆ.

ಸಂಸದರಿಗೆ ನೋಟಿಸ್ ಕಳುಹಿಸಿರುವ ಟ್ವಿಟರ್


'ಕೆಲವು ದಿನಗಳ ಹಿಂದೆ ಗುರುಪಟವಂತ ಸಿಂಘ್ ಪನ್ನೂನ್ ಎಂಬ ಟ್ವಿಟರ್ ಖಾತೆಯಿಂದ ಪಂಜಾಬ್ ರಾಜ್ಯವನ್ನು ಭಾರತದಿಂದ ಸ್ವಾತಂತ್ರಗೊಳಿಸಿ, ಖಲಿಸ್ಥಾನ ಎಂಬ ಪ್ರತ್ಯೇಕ ರಾಷ್ಟ್ರವನ್ನಾಗಿಸುವುದರ ಬಗ್ಗೆ ಟ್ವಿಟ್ ಮಾಡಿದ್ದು, ಅದನ್ನು ಟ್ವಿಟರ್​​ ನವರಿಗೆ ಹಣಪಾವತಿಸಿ ಜಾಹಿರಾತು ನೀಡಿದ್ದಾರೆ. ಇದು ಭಾರತದ ವಿರುದ್ಧ ನಡೆಸುತ್ತಿರುವ ಜಾಹೀರಾತಾಗಿದ್ದು, ಇದನ್ನು ಟ್ವಿಟರ್​​​ ಅನುಮೋದಿಸಿ ಜಾಹೀರಾತನ್ನು ಪ್ರಚುರ ಪಡೆಸಿದೆ. ಇಂತಹ ರಾಷ್ಟ್ರವಿರೋಧ ಚಟುವಟಿಕೆಯನ್ನು ಬಯಲು ಮಾಡಿ, ಪ್ರಧಾನಿ ಹಾಗೂ ಗೃಹ ಸಚಿವರ ಗಮನಕ್ಕೆ ನಾನು ತಂದಿದ್ದರ ಪರಿಣಾಮವಾಗಿ, ಏಪ್ರಿಲ್ 22ರಂದು ತಬ್ಲಿಘಿ ಜಮಾತ್ ವಿರುದ್ಧ ನಾನು ಮಾಡಿರುವ ಟ್ವಿಟ್​​ನ ನೆಪವನಿಟ್ಟುಕೊಂಡು ನನ್ನ ಟ್ವಿಟರ್ ಅಕೌಂಟ್ ಅನ್ನು ರದ್ದು ಮಾಡಿದ್ದಾರೆ. ಬದಲಾಗಿ, ನಾನು ಮಾಡಿರುವ ಟ್ವಿಟ್​ನ್ನು ತಗೆದು ಹಾಕಿದಲ್ಲಿ ನನ್ನ ಅಕೌಂಟ್ ಅನ್ನು ಪುನಃ ಸಕ್ರಿಯಗೊಳಿಸುವುದಾಗಿ ಹೇಳಿದ್ದಾರೆ' ಎಂದು ಅವರು ತಿಳಿಸಿದ್ದಾರೆ.

latter
ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರ
ದೇಶದ ವಿರುದ್ಧ ನಡೆಯುವ ಯಾವುದೇ ನಡೆಯನ್ನು ಅದು ಯಾರೇ ಇರಲಿ ನನ್ನ ವಿರೋಧವನ್ನು ನಾನು ವ್ಯಕ್ತಪಡಿಸುತ್ತಾ ಬಂದಿದ್ದೇನೆ. ಇದರಲ್ಲಿ ಯಾವುದೇ ರಾಜಿ ಇಲ್ಲಾ. ಈ ನಿಟ್ಟಿನಲ್ಲಿ ನಾನು ಮಾಡಿರುವ ಟ್ವಿಟ್​ ನ್ನು ನಾನು ಅಳಿಸುವ ಪ್ರಶ್ನೆಯೇ ಇಲ್ಲ. ಅದರಲ್ಲಿ ಟ್ವಿಟರ್ ನಡೆಸುತ್ತಿರುವ ಭಾರತ ವಿರೋಧಿ ಪ್ರಚಾರಗಳನ್ನು ನಾನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ದೇಶ ವಿರೋಧಿ ಸಮಾಜಿಕ ಜಾಲತಾಣದ ಅಕೌಂಟಿಗಿಂತ ನನ್ನ ದೇಶ, ನನ್ನ ಸಿದ್ಧಾಂತ ನನ್ನ ಜೀವನದ ಆದ್ಯತೆ' ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಕೋವಿಡ್-19: ರಾಜ್ಯದಲ್ಲಿಂದು 3 ಮಂದಿಗೆ ಕೊರೋನಾ: ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆ

ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಟ್ವಿಟರ್ ನಲ್ಲಿ 74,300 ಹಿಂಬಾಲಕರು ಇದ್ದಾರೆ. 2016 ರಿಂದ ಅವರು ಟ್ವಿಟರ್​​​​ ನಲ್ಲಿ ಸಕ್ರಿಯರಾಗಿದ್ದರು.

(ವರದಿ : ದರ್ಶನ್ ನಾಯ್ಕ)
First published: April 26, 2020, 6:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories